AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಸಿನಿಮಾದ ಗೆಲುವಿಗಾಗಿ ಕೈ ಜೋಡಿಸಲಿದ್ದಾರೆ ಶಾರುಖ್, ಸಲ್ಮಾನ್

‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಆಮಿರ್ ಖಾನ್ ನಿರ್ಮಾಣ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಈ ಚಿತ್ರ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ. ಅದಕ್ಕಾಗಿ ಅವರಿಗೆ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಕೂಡ ಸಹಾಯ ಮಾಡಲಿದ್ದಾರೆ. ಪ್ರೀಮಿಯರ್ ಶೋಗೆ ಸ್ಟಾರ್ ನಟರು ಬರಲಿದ್ದಾರೆ.

ಆಮಿರ್ ಖಾನ್ ಸಿನಿಮಾದ ಗೆಲುವಿಗಾಗಿ ಕೈ ಜೋಡಿಸಲಿದ್ದಾರೆ ಶಾರುಖ್, ಸಲ್ಮಾನ್
Aamir Khan, Salman Khan, Shah Rukh Khan
ಮದನ್​ ಕುಮಾರ್​
|

Updated on: Jun 16, 2025 | 10:51 PM

Share

ಒಂದು ಕಾಲದಲ್ಲಿ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಆಮಿರ್ ಖಾನ್ (Aamir Khan) ಅವರಿಗೆ ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಪ್ರಮಾಣದ ಗೆಲುವು ಸಿಕ್ಕಿಲ್ಲ. ‘ಥಗ್ಸ್ ಆಫ್ ಹಿಂದೂಸ್ತಾನ್’, ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾಗಳು ಸೋತವು. ಆ ಬಳಿಕ ಅವರು ದೀರ್ಘ ಗ್ಯಾಪ್ ಪಡೆದುಕೊಂಡರು. ಈಗ ಅವರು ಕಮ್​ ಬ್ಯಾಕ್ ಮಾಡುತ್ತಿದ್ದಾರೆ. ಆಮಿರ್ ಖಾನ್ ನಟಿಸಿದ ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಜೂನ್ 20ರಂದು ರಿಲೀಸ್ ಆಗಲಿದೆ. ಹೇಗಾದರೂ ಮಾಡಿ ಈ ಸಿನಿಮಾವನ್ನು ಗೆಲ್ಲಿಸಲೇಬೇಕು ಎಂದು ಆಮಿರ್ ಖಾನ್ ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನಕ್ಕೆ ಶಾರುಖ್ ಖಾನ್, ಸಲ್ಮಾನ್ ಖಾನ್ (Salman Khan) ಕೂಡ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಸ್ವತಃ ಆಮಿರ್ ಖಾನ್ ಬಂಡವಾಳ ಹೂಡಿದ್ದಾರೆ. ಆದ್ದರಿಂದ ಅವರಿಗೆ ಗೆಲುವು ಅನಿವಾರ್ಯ. ಚಿತ್ರವನ್ನು ಪ್ರಚಾರ ಮಾಡುವ ಸಲುವಾಗಿ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದಾರೆ. ಸಾಲದೆಂಬಂತೆ, ಬಿಡುಗಡೆಗೂ ಒಂದು ದಿನ ಮುಂಚಿತವಾಗಿ ಪ್ರೀಮಿಯರ್ ಶೋ ಏರ್ಪಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜೂನ್ 19ರಂದು ಮುಂಬೈನಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾದ ಪ್ರೀಮಿಯರ್ ಶೋ ನಡೆಯಲಿದೆ. ಇದರಲ್ಲಿ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ. ಮುಖ್ಯವಾಗಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಅವರು ಹಾಜರಿ ಹಾಕುವ ನಿರೀಕ್ಷೆ ಇದೆ. ಗೆಳೆಯನ ಸಿನಿಮಾಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ಅವರಿಬ್ಬರು ಪ್ರೀಮಿಯರ್ ಶೋಗೆ ಬರಲು ತೀರ್ಮಾನಿಸಿದ್ದಾರಂತೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಟ್ರೇಲರ್ ಬಿಡುಗಡೆ ಆದಾಗ ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಟ್ರೋಲ್ ಮಾಡಲಾಯಿತು. ಇದು ‘ಚಾಂಪಿಯನ್ಸ್’ ಸಿನಿಮಾದ ಕಾಪಿ ಎಂದು ಅನೇಕರು ಟೀಕೆ ಮಾಡಿದರು. ಆದರೆ ಇದು ಕಾಪಿ ಅಲ್ಲ, ಅಧಿಕೃತ ರಿಮೇಕ್ ಎಂದು ಚಿತ್ರತಂಡ ಹೇಳಿದೆ. ಅಲ್ಲದೇ, ರಿಮೇಕ್ ಮಾಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಆಮಿರ್ ಖಾನ್ ಅವರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಗಳು, ಸಹೋದರಿ ಮದುವೆ ಆಗಿದ್ದು ಹಿಂದೂಗಳನ್ನೇ; ಲವ್ ಜಿಹಾದ್ ಆರೋಪಕ್ಕೆ ಆಮಿರ್ ಖಾನ್ ಉತ್ತರ

‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಆಮಿರ್ ಖಾನ್ ಅವರು ಬಾಸ್ಕೆಟ್ ಬಾಲ್ ಕೋಚ್ ಪಾತ್ರವನ್ನು ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಜೆನಿಲಿಯಾ ದೇಶಮುಖ್ ನಟಿಸಿದ್ದಾರೆ. ಈಗಾಗಲೇ ಸಿನಿಮಾ ನೋಡಿರುವ ಸುಧಾ ಮೂರ್ತಿ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಪ್ರೀಮಿಯರ್ ಶೋಗೆ ಬರುವ ಸೆಲೆಬ್ರಿಟಿಗಳಿಗೂ ಸಿನಿಮಾ ಇಷ್ಟ ಆಗುತ್ತಾ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!