AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಮನೆ ಎದುರು ಅಭಿಮಾನಿಗಳ ಸಂಭ್ರಮಾಚಾರಣೆ; ಅಭಿಮಾನಿಗಳತ್ತ ಕೈಬೀಸಿದ ನಟ

Shah Rukh Khan Birthday: ಶಾರುಖ್ ಖಾನ್ ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ. ಇದಕ್ಕೆ ಮನ್ನತ್ ಎಂದು ಹೆಸರು ಇಟ್ಟಿದ್ದಾರೆ. ಮನ್ನತ್ ಎದುರು ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿಯಿಂದಲೇ ಶಾರುಖ್ ಖಾನ್ ಫ್ಯಾನ್ಸ್ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಶಾರುಖ್ ಖಾನ್ ಮನೆ ಎದುರು ಅಭಿಮಾನಿಗಳ ಸಂಭ್ರಮಾಚಾರಣೆ; ಅಭಿಮಾನಿಗಳತ್ತ ಕೈಬೀಸಿದ ನಟ
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Nov 02, 2023 | 7:18 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಇಂದು (ನವೆಂಬರ್ 2) ಜನ್ಮದಿನ. ಅವರು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಈ ವರ್ಷ ಬ್ಯಾಕ್ ಟು ಬ್ಯಾಕ್ ಗೆಲುವು ಸಿಕ್ಕಿರುವುದರಿಂದ ಖುಷಿ ಆಗಿದೆ. ಹೀಗಾಗಿ, ಸೆಲೆಬ್ರಿಟಿಗಳಿಗಾಗಿ ಭರ್ಜರಿ ಪಾರ್ಟಿ ಕೂಡ ಆಯೋಜನೆ ಮಾಡಿದ್ದಾರೆ. ಶಾರುಖ್ ಖಾನ್ ಮನೆ ಮುಂದೆ ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿ ಅವರು ಅಭಿಮಾನಿಗಳಿಗೆ ದರ್ಶನ ಕೊಟ್ಟಿದ್ದಾರೆ . ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ. ಇದಕ್ಕೆ ಮನ್ನತ್ ಎಂದು ಹೆಸರು ಇಟ್ಟಿದ್ದಾರೆ. ಮನ್ನತ್ ಎದುರು ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿಯಿಂದಲೇ ಶಾರುಖ್ ಖಾನ್ ಫ್ಯಾನ್ಸ್ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ‘ಹ್ಯಾಪಿ ಬರ್ತ್​ಡೇ ಎಸ್​ಆರ್​ಕೆ’ ಎಂಬಿತ್ಯಾದಿ ಬೋರ್ಡ್​ಗಳನ್ನು ಇಟ್ಟುಕೊಂಡು ಅಭಿಮಾನಿಗಳು ನಿಂತಿದ್ದಾರೆ.

ಶಾರುಖ್ ಖಾನ್ ಮನೆ ಎದುರು ಬಾಲ್ಕನಿ ಇದೆ. ಬರ್ತ್​ಡೇ ದಿನ ಅವರು ಸಾಮಾನ್ಯವಾಗಿ ಇಲ್ಲಿಗೆ ಬಂದು ಅಭಿಮಾನಿಗಳತ್ತ ಕೈ ಬೀಸಿ ಹೋಗುತ್ತಾರೆ. ಈ ಬಾರಿಯೂ ಶಾರುಖ್ ಖಾನ್ ಅವರು ಆಗಮಿಸಿ ಅಭಿಮಾನಿಗಳತ್ತ ಕೈಬೀಸಿದ್ದಾರೆ. ಮಧ್ಯಾಹ್ನದ ವೇಳೆಗೆ ಅವರು ಮತ್ತೊಮ್ಮೆ ಅಭಿಮಾನಿಗಳಿಗೆ ದರ್ಶನ ಕೊಡುವ ಸಾಧ್ಯತೆ ಇದೆ.

ಶಾರುಖ್ ಜನ್ಮದಿನದ ಅಂಗವಾಗಿ ಆಯೋಜಿಸಿರುವ ಬರ್ತ್​ಡೇ ಪಾರ್ಟಿ ಮೇಲೆ ಎಲ್ಲರ ಗಮನ ಇದೆ. ಶಾರುಖ್ ಪಾರ್ಟಿಯಲ್ಲಿ ಸಲ್ಮಾನ್ ಖಾನ್​, ದೀಪಿಕಾ ಪಡುಕೋಣೆ ಸೇರಿ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕುವ ಸಾಧ್ಯತೆ ಇದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಪಾರ್ಟಿ ನಡೆಯುವ ಸ್ಥಳದಲ್ಲಿ ಈಗಾಗಲೇ ಪಾಪರಾಜಿಗಳು ಹಾಜರಿ ಹಾಕಿದ್ದಾರೆ.

ಇದನ್ನೂ ಓದಿ: ಸಖತ್ ಅದ್ದೂರಿಯಾಗಿರಲಿದೆ ಶಾರುಖ್ ಖಾನ್ ಬರ್ತ್​ಡೇ ಪಾರ್ಟಿ; ಯಾರಿಗೆಲ್ಲ ಆಹ್ವಾನ?

ಶಾರುಖ್ ಖಾನ್ ಅವರು ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ. ಈ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Thu, 2 November 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ