Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​

Shah Rukh Khan: ಸತತ 4 ವರ್ಷಗಳ ಗ್ಯಾಪ್​ ಬಳಿಕ 2023ರಲ್ಲಿ ಶಾರುಖ್ ಖಾನ್​​ ಅವರು ದೊಡ್ಡ ಪರದೆ ಮೇಲೆ ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ. ಅವರ 3 ಚಿತ್ರಗಳು ರಿಲೀಸ್​ ಆಗಲಿವೆ.

Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 02, 2022 | 7:15 AM

ಎಷ್ಟೇ ಸಿನಿಮಾ ಸೋತರೂ ಶಾರುಖ್​ ಖಾನ್ (Shah Rukh Khan) ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಅವರನ್ನು ಪ್ರೀತಿಸುವ ಜನರ ಸಂಖ್ಯೆಯೂ ತಗ್ಗಿಲ್ಲ. ಕಿಂಗ್​ ಖಾನ್​ ಜೊತೆ ಚಿತ್ರ ಮಾಡಲು ಹಲವು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಈಗಲೂ ಸಾಲುಗಟ್ಟಿ ನಿಂತಿವೆ. ಅದೇ ಭರವಸೆಯೊಂದಿಗೆ ಶಾರುಖ್​ ಅವರು ಮೈಕೊಡವಿ ನಿಲ್ಲಲು ಸಜ್ಜಾಗಿದ್ದಾರೆ. ಇಂದು (ನ.2) ಅವರಿಗೆ ಜನ್ಮದಿನದ (Shah Rukh Khan Birthday) ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರು ಶುಭಾಶಯ ತಿಳಿಸುತ್ತಿದ್ದಾರೆ. ಅನೇಕ ಪ್ರಾಜೆಕ್ಟ್​ಗಳಲ್ಲಿ ಶಾರುಖ್​ (SRK) ಬ್ಯುಸಿ ಆಗಿದ್ದಾರೆ. ಆ ಚಿತ್ರತಂಡಗಳಿಂದ ಇಂದು ವಿಶೇಷ ಟೀಸರ್​ ಹಾಗೂ ಪೋಸ್ಟರ್​ಗಳು ಬಿಡುಗಡೆ ಆಗುವ ನಿರೀಕ್ಷೆ ಇದೆ.

ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಯಶಸ್ಸು ಕಂಡಿದ್ದ ಶಾರುಖ್​ ಖಾನ್​ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಗೆಲುವು ಎಂಬುದು ಮರೀಚಿಕೆ ಆಯಿತು. ಮಾಡಿದ ಎಲ್ಲ ಸಿನಿಮಾಗಳು ಸೋತವು. ಅದರಿಂದ ಸಹಜವಾಗಿಯೇ ಶಾರುಖ್​ ಅಭಿಮಾನಿಗಳಿಗೆ ಬೇಸರ ಆಯಿತು. 2018ರಲ್ಲಿ ಬಂದ ‘ಜೀರೋ’ ಸಿನಿಮಾ ಬಳಿಕ ಅವರು ದೀರ್ಘ ಬ್ರೇಕ್​ ಪಡೆದುಕೊಂಡರು. ಆದರೆ ಈಗ ಮತ್ತೆ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ದೊಡ್ಡ ಗ್ಯಾಪ್​ ಬಳಿಕ ಸತತವಾಗಿ ಅಬ್ಬರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

ಶಾರುಖ್​ ಖಾನ್​ ಅವರ ಬತ್ತಳಿಕೆಯಲ್ಲಿ ಈಗ ಬಹುನಿರೀಕ್ಷಿತ ಸಿನಿಮಾಗಳಿವೆ. ಯಶಸ್ವಿ ನಿರ್ದೇಶಕರ ಜೊತೆ ಅವರು ಕೈ ಜೋಡಿಸಿರುವುದೇ ಈ ನಿರೀಕ್ಷೆಗೆ ಕಾರಣ. ರಾಜ್​ಕುಮಾರ್​ ಹಿರಾನಿ ಜೊತೆ ‘ಡಂಕಿ’, ಅಟ್ಲಿ ಜೊತೆ ‘ಜವಾನ್​’ ಹಾಗೂ ಸಿದ್ದಾರ್ಥ್​ ಆನಂದ್​ ಜೊತೆ ‘ಪಠಾಣ್’ ಸಿನಿಮಾಗಳನ್ನು ಶಾರುಖ್​ ಖಾನ್​ ಮಾಡುತ್ತಿದ್ದಾರೆ. ಈ ಎಲ್ಲ ಚಿತ್ರಗಳು ಒಂದಿಲ್ಲೊಂದು ಕಾರಣಕ್ಕೆ ಹೈಪ್​ ಸೃಷ್ಟಿ ಮಾಡಿವೆ.

ಸತತ ನಾಲ್ಕು ವರ್ಷಗಳ ಗ್ಯಾಪ್​ ಬಳಿಕ 2023ರಲ್ಲಿ ಶಾರುಖ್​ ಅವರು ದೊಡ್ಡ ಪರದೆ ಮೇಲೆ ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ. ‘ಪಠಾಣ್​’ ಸಿನಿಮಾ 202​3ರ ಜನವರಿ 25ಕ್ಕೆ ರಿಲೀಸ್​ ಆಗಲಿದೆ. ಅದೇ ವರ್ಷ ಜೂನ್​ ವೇಳೆಗೆ ‘ಜವಾನ್​’ ಕೂಡ ಬಿಡುಗಡೆ ಆಗುವ ನಿರೀಕ್ಷೆ ಇದೆ. ವರ್ಷಾಂತ್ಯಕ್ಕೆ ‘ಡಂಕಿ’ ತೆರೆ ಕಾಣಲಿದೆ. ಹಾಗಾಗಿ 2023ರ ವರ್ಷ ಪೂರ್ತಿ ಅಭಿಮಾನಿಗಳ ಪಾಲಿಗೆ ಶಾರುಖ್​ ಸಿನಿಮೋತ್ಸವ ಆಗಿರಲಿದೆ.

ಶಾರುಖ್​ ಬರ್ತ್​ಡೇ ಪ್ರಯುಕ್ತ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಲಿದ್ದಾರೆ. ಮನೆಯ ಬಾಲ್ಕನಿಗೆ ಬಂದು ಎಲ್ಲರತ್ತ ಶಾರುಖ್​ ಕೈ ಬೀಸಲಿದ್ದಾರೆ. ಹಲವು ವರ್ಷಗಳಿಂದ ಇದು ನಡೆದುಕೊಂಡು ಬರುತ್ತಿದೆ. ಇಂದು ಹುಟ್ಟುಹಬ್ಬದ ಪ್ರಯುಕ್ತ ಯಾವುದಾದರೂ ಹೊಸ ಸಿನಿಮಾ ಅನೌನ್ಸ್​ ಆಗಬಹುದೇ ಎಂಬ ಪ್ರಶ್ನೆ ಕೂಡ ಫ್ಯಾನ್ಸ್​ ಮನದಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ