AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್-ಆಲಿಯಾ ಸಿನಿಮಾಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್; ರಿವೀಲ್ ಆಯ್ತು ಹೊಸ ವಿಚಾರ

ಟಾಲಿವುಡ್ ಸ್ಟಾರ್ ನಾಗಾರ್ಜುನ ಅಕ್ಕಿನೇನಿ, ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಹೊಸ ಪಾತ್ರದ ಬಗ್ಗೆ ಮೌನಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ರಣಬೀರ್-ಆಲಿಯಾ ಸಿನಿಮಾಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್; ರಿವೀಲ್ ಆಯ್ತು ಹೊಸ ವಿಚಾರ
ಶಾರುಖ್-ರಣಬೀರ್​,ಆಲಿಯಾ
TV9 Web
| Edited By: |

Updated on: Sep 01, 2022 | 6:30 AM

Share

ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಒಟ್ಟಾಗಿ ನಟಿಸುತ್ತಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್ 9ರಂದು ರಿಲೀಸ್ ಆಗುತ್ತಿದೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಆಲಿಯಾ ಹಾಗೂ ರಣಬೀರ್ ಇದೇ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದಾರೆ ಅನ್ನೋದು ಒಂದು ವಿಶೇಷವಾದರೆ, ಈ ಚಿತ್ರದಲ್ಲಿ ಅನೇಕ ಸ್ಟಾರ್ ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ ಎಂಬುದು ಮತ್ತೊಂದು ವಿಶೇಷ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ (Shah Rukh Khan) ಕೂಡ ನಟಿಸಿದ್ದಾರೆ ಎಂಬ ಮಾಹಿತಿ ಈಗ ಲೀಕ್ ಆಗಿದೆ.

‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೇಲರ್​ ಈಗಾಗಲೇ ರಿಲೀಸ್ ಆಗಿದ್ದು, ವಿಶೇಷ ಶಕ್ತಿ ಉಳ್ಳ ವ್ಯಕ್ತಿಯಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಮೌನಿ ರಾಯ್ ಈ ಚಿತ್ರದಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದ್ದಾರೆ. ಟಾಲಿವುಡ್ ಸ್ಟಾರ್ ನಾಗಾರ್ಜುನ ಅಕ್ಕಿನೇನಿ, ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಹೊಸ ಪಾತ್ರದ ಬಗ್ಗೆ ಮೌನಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ರಣಬೀರ್, ಆಲಿಯಾ, ಅಮಿತಾಭ್ ನಾಗಾರ್ಜುನ ಹಾಗೂ ಶಾರುಖ್​ ಖಾನ್ ಜತೆ ನಟಿಸಿದ್ದು ಖುಷಿ ನೀಡಿದೆ. ಶಾರುಖ್ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ’ ಎಂದು ಹೊಸ ಮಾಹಿತಿ ಲೀಕ್ ಮಾಡಿದ್ದಾರೆ ಮೌನಿ.

ಅಯಾನ್ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೂರು ಪಾರ್ಟ್​​ಗಳಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಇದು ಮೊದಲ ಭಾಗ​. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ
Image
119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
Image
Brahmastra: ಮಾಜಿ ಪ್ರೇಮಿಯ ಸಿನಿಮಾದಲ್ಲಿ ದೀಪಿಕಾ ಕದ್ದುಮುಚ್ಚಿ ನಟನೆ? ಝೂಮ್​ ಮಾಡಿ ಸಾಕ್ಷಿ ತೋರಿಸಿದ ನೆಟ್ಟಿಗರು
Image
Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು

ಇದನ್ನೂ ಓದಿ: ಶೂ ಧರಿಸಿ ರಣಬೀರ್ ದೇವಸ್ಥಾನಕ್ಕೆ ಬಂದಿರಲಿಲ್ಲ; ‘ಬ್ರಹ್ಮಾಸ್ತ್ರ’ ತಂಡದಿಂದ ಬಂತು ಸ್ಪಷ್ಟನೆ

‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಚಿತ್ರದ ಟ್ರೇಲರ್​ನಲ್ಲಿ ಬಳಕೆಯಾದ ಗ್ರಾಫಿಕ್ಸ್ ಕಳಪೆಯಾಗಿದೆ ಎಂದು ಕೆಲವರು ಟೀಕೆ ಮಾಡಿದ್ದಿದೆ. ಈ ಬಗ್ಗೆ ಚಿತ್ರತಂಡ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ದಕ್ಷಿಣ ಭಾರತದ ಭಾಷೆಗಳಲ್ಲಿ ಎಸ್​.ಎಸ್​. ರಾಜಮೌಳಿ ಅವರು ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಕಾರಣದಿಂದಲೂ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?