AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರುಖ್ ಇದಕ್ಕಿಂತಲೂ ಉತ್ತಮವಾಗಿ ನಟಿಸುವ ತಾಕತ್ತನ್ನು ಹೊಂದಿದ್ದಾರೆ’: ವಿವೇಕ್ ಅಗ್ನಿಹೋತ್ರಿ

ಶಾರುಖ್ ಖಾನ್ ಅವರನ್ನು ವಿವೇಕ್ ಅಗ್ನಿಹೋತ್ರಿ ಟೀಕೆ ಮಾಡಿದ್ದರು. ‘ಜವಾನ್’ ಗೆಲುವಿನ ಬಳಿಕ ವಿವೇಕ್ ಅಗ್ನಿಹೋತ್ರಿ ಅವರನ್ನು ಟೀಕಿಸುವ ಕೆಲಸವನ್ನು ಶಾರುಖ್ ಖಾನ್ ಫ್ಯಾನ್ಸ್ ಮಾಡುತ್ತಿದ್ದಾರಂತೆ. ‘ದಿ ವ್ಯಾಕ್ಸಿನ್ ವಾರ್’ ಸೋತ ಬಳಿಕವಂತೂ ವಿವೇಕ್ ಅವರನ್ನು ಟೀಕಿಸಲು ಶಾರುಖ್ ಅಭಿಮಾನಿಗಳಿಗೆ ಹೊಸ ಬಲ ಸಿಕ್ಕಂತೆ ಆಗಿದೆ.

‘ಶಾರುಖ್ ಇದಕ್ಕಿಂತಲೂ ಉತ್ತಮವಾಗಿ ನಟಿಸುವ ತಾಕತ್ತನ್ನು ಹೊಂದಿದ್ದಾರೆ’: ವಿವೇಕ್ ಅಗ್ನಿಹೋತ್ರಿ
ವಿವೇಕ್​ ಅಗ್ನಿಹೋತ್ರಿ, ಶಾರುಖ್​ ಖಾನ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 02, 2023 | 5:40 PM

Share

ಶಾರುಖ್ ಖಾನ್ (Shah Rukh Khan) ಅವರು ಸದ್ಯ ‘ಜವಾನ್’ ಸಿನಿಮಾ (Jawan Movie) ಸಕ್ಸಸ್​ನಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ ಅವರು ಈ ವರ್ಷದ ಎರಡನೇ ಗೆಲುವು ಕಂಡಿದ್ದಾರೆ. ಶಾರುಖ್ ಖಾನ್ ಅವರನ್ನು ಕಂಡರೆ ಇಷ್ಟಪಡುವವರು ಅನೇಕರಿದ್ದಾರೆ. ಆದರೆ, ಅವರನ್ನು ಸುಖಾಸುಮ್ಮನೆ ಟೀಕಿಸುವ ಕೆಲಸವನ್ನು ಯಾರೂ ಮಾಡುವುದಿಲ್ಲ. ಆದರೆ, ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಶಾರುಖ್ ಖಾನ್ ಅವರನ್ನು ಟೀಕಿಸಿದ್ದಾರೆ. ಅವರ ಬಗ್ಗೆ ಬೇರೆಯದೇ ಆದ ಅಭಿಪ್ರಾಯ ಅವರಿಗೆ ಇದೆ.

ಶಾರುಖ್ ಖಾನ್ ಅವರು ಬಾಲಿವುಡ್​ನ ಬೇಡಿಕೆಯ ನಟ. ಹಲವು ರೀತಿಯ ಪಾತ್ರಗಳನ್ನು ಅವರು ಮಾಡಿದ್ದಾರೆ. ವಯಸ್ಸು 60 ಸಮೀಪಿಸಿದರೂ ಸಿಕ್ಸ್ ಪ್ಯಾಕ್ ಮೂಲಕ ಅವರು ಗಮನ ಸೆಳೆಯುತ್ತಾರೆ. ಈಗ ವಿವೇಕ್ ಅಗ್ನಿಹೋತ್ರಿ ಅವರು ಶಾರುಖ್ ಬಗ್ಗೆ ಮಾಡಿದ್ದಾರೆ. ‘ಅವರ ಇತ್ತೀಚಿನ ಸಿನಿಮಾ ಸೂಪರ್ ಸ್ಪೆಷಲ್ ಆಗಿತ್ತು. ಆದರೆ ಅವರು ಇದಕ್ಕಿಂತ ಚೆನ್ನಾಗಿ ನಟನೆ ಮಾಡುವ ತಾಕತ್ತನ್ನು ಹೊಂದಿದ್ದಾರೆ’ ಎಂದಿದ್ದಾರೆ ವಿವೇಕ್ ಅಗ್ನಿಹೋತ್ರಿ. ಇನ್ನು, ಸಿನಿಮಾದ ಯಶಸ್ಸನ್ನು ಅಳೆಯುವ ಮಾನದಂಡ ಸರಿ ಇಲ್ಲ ಎಂಬುದು ಅವರ ಅಭಿಪ್ರಾಯ.

ಇದನ್ನೂ ಓದಿ: ‘ಜವಾನ್’ ಕಲೆಕ್ಷನ್ ಫೇಕ್ ಎಂದವನಿಗೆ ಗದರಿದ ಶಾರುಖ್ ಖಾನ್

ಶಾರುಖ್ ಖಾನ್ ಅವರನ್ನು ವಿವೇಕ್ ಅಗ್ನಿಹೋತ್ರಿ ಅವರು ಟೀಕೆ ಮಾಡಿದ್ದರು. ‘ಜವಾನ್’ ಸಿನಿಮಾ ಗೆಲುವಿನ ಬಳಿಕ ವಿವೇಕ್ ಅಗ್ನಿಹೋತ್ರಿ ಅವರನ್ನು ಟೀಕಿಸುವ ಕೆಲಸವನ್ನು ಶಾರುಖ್ ಖಾನ್ ಫ್ಯಾನ್ಸ್ ಮಾಡುತ್ತಿದ್ದಾರಂತೆ. ‘ದಿ ವ್ಯಾಕ್ಸಿನ್ ವಾರ್’ ಸೋತ ಬಳಿಕವಂತೂ ವಿವೇಕ್ ಅವರನ್ನು ಟೀಕಿಸಲು ಶಾರುಖ್ ಖಾನ್ ಅಭಿಮಾನಿಗಳಿಗೆ ಹೊಸ ಬಲ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: ರಾಜ್ ಕಪೂರ್ ದಾಖಲೆ ಸರಿಗಟ್ಟಿದ ಶಾರುಖ್ ಖಾನ್: ಏನದು ದಾಖಲೆ?

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಅಂದುಕೊಂಡ ಮಟ್ಟದಲ್ಲಿ ಕಮಾಯಿ ಮಾಡುತ್ತಿಲ್ಲ. ಈ ಚಿತ್ರದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ಸಪ್ತಮಿ ಗೌಡ, ಪಲ್ಲವಿ ಜೋಶಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ನಾಲ್ಕು ದಿನಕ್ಕೆ ಕೇವಲ ಐದು ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿವೇಕ್ ಅಗ್ನಿಹೋತ್ರಿ ಅವರ ಈ ಹಿಂದಿನ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರಕ್ಕೆ ತುಲನೆ ಮಾಡಿ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನೋಡಲಾಗುತ್ತಿದೆ. ‘ದಿ ವ್ಯಾಕ್ಸಿನ್ ವಾರ್’ಗೆ ಹಿನ್ನಡೆ ಆಗಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್