AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ 60ನೇ ವರ್ಷದ ಹುಟ್ಟುಹಬ್ಬ: ಮನ್ನತ್ ಎದುರು ಜನಸಾಗರ

ನಟ ಶಾರುಖ್ ಖಾನ್ ಅವರಿಗೆ ಈಗ 60 ವರ್ಷ ವಯಸ್ಸು. ಇಂದು (ನವೆಂಬರ್ 2) ಅವರಿಗೆ ಜನ್ಮದಿನದ ಸಂಭ್ರಮ. ಮುಂಬೈನಲ್ಲಿರುವ ಮನ್ನತ್ ನಿವಾಸದ ಎದುರು ಶಾರುಖ್ ಖಾನ್ ಅವರ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಬೇರೆ ಬೇರೆ ರಾಜ್ಯಗಳಿಂದ ಅಭಿಮಾನಿಗಳು ಬಂದಿದ್ದಾರೆ. ಎಲ್ಲರೂ ಶಾರುಖ್​​ ಖಾನ್​​ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಶಾರುಖ್ ಖಾನ್ 60ನೇ ವರ್ಷದ ಹುಟ್ಟುಹಬ್ಬ: ಮನ್ನತ್ ಎದುರು ಜನಸಾಗರ
Shah Rukh Khan Fans
ಮದನ್​ ಕುಮಾರ್​
|

Updated on: Nov 02, 2025 | 7:14 AM

Share

ಹಿಂದಿ ಚಿತ್ರರಂಗದ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ಅವರು 60ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಬಹಳ ಅದ್ದೂರಿಯಾಗಿ ಅವರ ಬರ್ತ್​ಡೇ (Shah Rukh Khan Birthday) ಸೆಲೆಬ್ರೇಟ್ ಮಾಡಲಾಗುತ್ತಿದೆ. ಶಾರುಖ್ ಖಾನ್ ಅವರ ಮನೆ ಎದುರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ಮುಂಬೈನಲ್ಲಿ ಇರುವ ಮನ್ನತ್ (Mannat) ನಿವಾಸದ ಎದುರು ಸಾವಿರಾರು ಅಭಿಮಾನಿಗಳು ಸೇರಿದ್ದಾರೆ. ಶಾರುಖ್ ಖಾನ್ ಅವರನ್ನು ನೋಡುವ ಆಸೆಯಿಂದ ವಿದೇಶದಿಂದಲೂ ಫ್ಯಾನ್ಸ್ ಬಂದಿದ್ದಾರೆ! ಸೋಶಿಯಲ್ ಮೀಡಿಯಾದಲ್ಲಿ ಕೂಡ ಶಾರುಖ್ ಖಾನ್ ಅವರಿಗೆ ಶುಭಾಶಯಗಳ ಸುರಿಮಳೆ ಆಗುತ್ತಿದೆ.

ನವೆಂಬರ್ 2ರಂದು ಶಾರುಖ್ ಖಾನ್ ಅವರ ಹುಟ್ಟುಹಬ್ಬ. ನವೆಂಬರ್ ಒಂದರ ರಾತ್ರಿಯಿಂದಲೇ ಸೆಲೆಬ್ರೇಷನ್ ಜೋರಾಗಿದೆ. ಶಾರುಖ್ ಖಾನ್ ಅವರ ಫೋಟೋ ಇರುವ ಟಿ-ಶರ್ಟ್ ಧರಿಸಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದೂರದ ಕೊಲ್ಕತ್ತಾದಿಂದ ಕೂಡ ಅಭಿಮಾನಿಗಳು ಬಂದಿದ್ದಾರೆ. ಶಾರುಖ್ ಖಾನ್ ಅವರನ್ನು ನೋಡಲು 33 ಗಂಟೆಗಳ ಕಾಲ ರೈಲಿನಲ್ಲಿ ಪ್ರಯಾಣ ಮಾಡಿರುವುದಾಗಿ ಫ್ಯಾನ್ಸ್ ಹೇಳಿದ್ದಾರೆ.

ಇತ್ತೀಚೆಗೆ ಕಾಲ್ತುಳಿದ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ಪೊಲೀಸರು ಎಚ್ಚರಿಗೆ ವಹಿಸುತ್ತಿದ್ದಾರೆ. ಶಾರುಖ್ ಖಾನ್ ಅವರ ಮನೆ ಮುಂದೆ ಅಭಿಮಾನಿಗಳ ಸಂಖ್ಯೆಯನ್ನು ಪೊಲೀಸರು ನಿಯಂತ್ರಿಸುತ್ತಿದ್ದಾರೆ. ಹಾಗಾಗಿ ಎಲ್ಲ ಅಭಿಮಾನಿಗಳಿಗೂ ಮನ್ನತ್ ಎದುರು ನಿಲ್ಲಲು ಅವಕಾಶ ಸಿಕ್ಕಿಲ್ಲ. ಶಾರುಖ್ ಖಾನ್ ಅವರು ಮನೆಯಿಂದ ಹೊರಗೆ ಬಂದು ದರ್ಶನ ನೀಡುತ್ತಾರೆ ಎಂಬ ನಂಬಿಕೆಯಲ್ಲಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಮನ್ನತ್ ಬಂಗಲೆಯ ನವೀಕರಣ ಕಾರ್ಯ ನಡೆಯುತ್ತಿದೆ. ಆದರೂ ಕೂಡ ಅಭಿಮಾನಿಗಳು ಹಿಂದೇಟು ಹಾಕಿಲ್ಲ. ಶಾರುಖ್ ಖಾನ್ ಅವರನ್ನು ನೋಡಲೇಬೇಕು ಎಂಬ ಹಠದಲ್ಲಿ ಅಪಾರ ಸಂಖ್ಯೆಯ ಫ್ಯಾನ್ಸ್ ಬಂದು ಮನ್ನತ್ ಎದುರು ಜಮಾಯಿಸಿದ್ದಾರೆ. ಇದು 60ನೇ ವರ್ಷದ ಬರ್ತ್​ಡೇ ಆಗಿರುವುದರಿಂದ ಶಾರುಖ್ ಖಾನ್ ಅವರಿಗೆ ಬಹಳ ವಿಶೇಷವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮನ್ನತ್​ಗೆ ಇದೆ 100 ವರ್ಷಗಳ ಇತಿಹಾಸ; ಇದರ ಬೆಲೆ ಕೇಳಿದ್ರೆ ಶಾಕ್ ಗ್ಯಾರಂಟಿ

ಸಿನಿಮಾಗಳ ಆಯ್ಕೆಯಲ್ಲಿ ಶಾರುಖ್ ಖಾನ್ ಅವರು ಅವಸರ ತೋರುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ಅವರ ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ. 2023ರಲ್ಲಿ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾಗಳು ಬಿಡುಗಡೆ ಆಗಿದ್ದವು. ಈಗ ಅವರು ‘ಕಿಂಗ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ