ಶಾರುಖ್ ಖಾನ್ ಕಳೆದ ಅರ್ಧ ತಿಂಗಳಿಂದ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್ ಖಾನ್ ಬಂಧನದ ನಂತರದಲ್ಲಿ ಅವರು ಸಂಪೂರ್ಣವಾಗಿ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್ ಖಾನ್ ಅವರನ್ನು ಹೇಗೆ ಜೈಲಿನಿಂದ ಹೊರಗೆ ತರಬೇಕು ಎನ್ನುವ ಚಿಂತೆ ಬಿಟ್ಟೂ ಬಿಡದೇ ಕಾಡುತ್ತಿದೆ. ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇಂದು (ಅಕ್ಟೋಬರ್ 21) ಜೈಲಿನಲ್ಲಿ ಆರ್ಯನ್ ಅವರನ್ನು ಶಾರುಖ್ ಭೇಟಿ ಮಾಡಿದ್ದಾರೆ. ಈ ಮಧ್ಯೆ ಶಾರುಖ್ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ.
ಆರ್ಯನ್ ಖಾನ್ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಲೇ ಇದೆ. ಎನ್ಸಿಬಿ ನಿತ್ಯ ಹೊಸಹೊಸ ಸಾಕ್ಷ್ಯಗಳೊಂದಿಗೆ ಕೋರ್ಟ್ ಮುಂದೆ ಹಾಜರಿ ಹಾಕುತ್ತಿದೆ. ಆರ್ಯನ್ಗಿಂತಲೂ ಬಲವಾಗಿ ಎನ್ಸಿಬಿ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ. ಈ ಕಾರಣಕ್ಕೆ ಆರ್ಯನ್ಗೆ ಜಾಮೀನು ಸಿಗುತ್ತಿಲ್ಲ. ಈ ಮಧ್ಯೆ ಆರ್ಯನ್ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 30ರವರೆಗೆ ವಿಸ್ತರಣೆ ಆಗಿದೆ. ಸದ್ಯ, ಆರ್ಯನ್ ಪರ ವಕೀಲರು ಆರ್ಯನ್ಗೆ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆಗೆ ಕೊಂಚ ಸಮಯ ಹಿಡಿಯಬಹುದು. ಈ ಎಲ್ಲಾ ಕಾರಣಕ್ಕೆ ಆರ್ಯನ್ಗೆ ಸದ್ಯಕ್ಕೆ ಜಾಮೀನು ಸಿಗುವ ಸಾದ್ಯತೆ ಇಲ್ಲ. ಇದು ಶಾರುಖ್ ಅವರನ್ನು ಚಿಂತೆಗೆ ಈಡು ಮಾಡಿದೆ.
ನವೆಂಬರ್ 2ರಂದು ಶಾರುಖ್ ಖಾನ್ ಜನ್ಮದಿನ. ಮಗನ ಸಮಸ್ಯೆಯಿಂದ ಶಾರುಖ್ ಚಿಂತೆಗೆ ಒಳಗಾಗಿದ್ದಾರೆ. ಇಂದು ಮಗನ ಭೇಟಿ ಮಾಡಿದ ಅವರು ಈ ಬಾರಿ ಜನ್ಮದಿನ ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರ ಜನ್ಮದಿನದಂದು ಮನ್ನತ್ ಎದುರು ನೂರಾರು ಅಭಿಮಾನಿಗಳು ಸೇರುತ್ತಿದ್ದರು. ಆದರೆ, ಈ ಬಾರಿ ಮನೆ ಬಳಿ ಬರದೆ ಇರದಂತೆ ಅಭಿಮಾನಿಗಳ ಬಳಿ ಸೂಚಿಸಲು ಶಾರುಖ್ ನಿರ್ಧರಿಸಿದ್ದಾರೆ ಎನ್ನುತ್ತಿವೆ ಮೂಲಗಳು. ಇದರ ಮಧ್ಯೆ ಮತ್ತೊಂದು ವಿಚಾರವೂ ಇದೆ.
ಶಾರುಖ್ ಖಾನ್ ಸದ್ಯ ಎರಡು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶಾರುಖ್ ಜನ್ಮದಿನದಂದು ಈ ಬಗ್ಗೆ ಘೋಷಣೆ ಮಾಡುವ ಬಗ್ಗೆ ಚಿತ್ರತಂಡ ಚಿಂತನೆ ನಡೆಸಿತ್ತು. ಆದರೆ ಆರ್ಯನ್ ಖಾನ್ ಪ್ರಕರಣದಿಂದ ಶಾರುಖ್ ಖ್ಯಾತಿಗೆ ಕಪ್ಪು ಚುಕ್ಕೆ ಬಿದ್ದಿದೆ. ಇನ್ನು, ಶಾರುಖ್ ಕೂಡ ಬರ್ತ್ಡೇ ಆಚರಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಸಿನಿಮಾ ತಂಡದವರು ಯಾವುದೇ ಘೋಷಣೆ ಮಾಡದಿರಲು ನಿರ್ಧರಿಸಿದ್ದಾರೆ. ಇದರ ಜತೆಗೆ ಸಿನಿಮಾ ಕೆಲಸಗಳು ಕೂಡ ವಿಳಂಬವಾಗುತ್ತಿದೆ. ಈ ಎಲ್ಲಾ ಕಾರಣಕ್ಕೆ ಚಿತ್ರತಂಡದವರು ಚಿಂತೆಗೆ ಒಳಗಾಗಿದ್ದಾರೆ. ಹೀಗಾಗಿ, ಇದರ ನೇರ ಪರಿಣಾಮ ನಿರ್ಮಾಪಕರ ಮೇಲೆ ಬೀಳುತ್ತಿದೆ.
ಇದನ್ನೂ ಓದಿ: Shah Rukh Khan: ಬಾಲಿವುಡ್ ನಟ ಶಾರುಖ್ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ
Ananya Panday: ‘ಶಾರುಖ್ ಖಾನ್ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್ ಸುಳಿಯಲ್ಲಿ ನಟಿ