AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್

ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರತಂಡಕ್ಕೆ ಲೀಕ್ ಕಾಟ ಮುಂದುವರಿದಿದೆ. ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ಸಹ ಈ ಸಿನಿಮಾದ ಶೂಟಿಂಗ್ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ಲೀಕ್ ಆಗುತ್ತಿವೆ. ಇದರಿಂದ ಚಿತ್ರತಂಡಕ್ಕೆ ಬೇಸರ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್
Deepika Padukone, Shah Rukh Khan
ಮದನ್​ ಕುಮಾರ್​
|

Updated on: May 06, 2026 | 8:03 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ನಟಿ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ‘ಕಿಂಗ್’ (King) ಚಿತ್ರದ ಚಿತ್ರೀಕರಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸದ್ಯ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಸಮುದ್ರ ತೀರದಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಅವರು ರೊಮ್ಯಾಂಟಿಕ್ ಹಾಡಿನ ದೃಶ್ಯವೊಂದರಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸೋರಿಕೆಯಾದ ವಿಡಿಯೋದಲ್ಲಿ, ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಸುಂದರವಾದ ಉಡುಪಿನಲ್ಲಿ ಮಿಂಚುತ್ತಿದ್ದರೆ, ಶಾರುಖ್ ಖಾನ್ ಕೂಡ ಸ್ಟೈಲಿಶ್ ಆಗಿ ಡ್ರೆಸ್ ಮಾಡಿಕೊಂಡಿದ್ದಾರೆ. ಸೂರ್ಯಾಸ್ತದ ಹಿನ್ನೆಲೆಯಲ್ಲಿ ಇಬ್ಬರೂ ಪರಸ್ಪರ ಓಡಿ ಬಂದು ಅಪ್ಪಿಕೊಳ್ಳುವ ಮತ್ತು ಶಾರುಖ್ ಖಾನ್ ಅವರು ತಮ್ಮ ಸಿಗ್ನೇಚರ್ ಸ್ಟೈಲ್​​ನಲ್ಲಿ ಪೋಸ್ ನೀಡುವ ದೃಶ್ಯ ಈ ವಿಡಿಯೋದಲ್ಲಿ ಇದೆ.

‘ಕಿಂಗ್’ ಚಿತ್ರದ ದೃಶ್ಯಗಳು ಸಾಲು ಸಾಲಾಗಿ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ಸಿದ್ದಾರ್ಥ್ ಆನಂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ‘ಎಲ್ಲಾ ಅಭಿಮಾನಿಗಳಲ್ಲಿ ನನ್ನದೊಂದು ವಿನಂತಿ. ದಯವಿಟ್ಟು ಕಿಂಗ್ ಚಿತ್ರದ ಸೆಟ್‌ನಿಂದ ಸೋರಿಕೆಯಾದ ಯಾವುದೇ ವಿಡಿಯೋ ಅಥವಾ ಫೋಟೋಗಳನ್ನು ಹಂಚಿಕೊಳ್ಳಬೇಡಿ. ನಿಮಗೆ ಅತ್ಯುತ್ತಮ ಸಿನಿಮಾ ಅನುಭವ ನೀಡಲು ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ಚಿತ್ರತಂಡ ಅಧಿಕೃತವಾಗಿ ದೃಶ್ಯಗಳನ್ನು ಬಿಡುಗಡೆ ಮಾಡುವವರೆಗೆ ಕಾಯಿರಿ’ ಎಂದು ಮನವಿ ಮಾಡಿದ್ದಾರೆ.

ಈ ಚಿತ್ರದ ಮೂಲಕ ಶಾರುಖ್ ಪುತ್ರಿ ಸುಹಾನಾ ಖಾನ್ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಭಿಷೇಕ್ ಬಚ್ಚನ್, ರಾಣಿ ಮುಖರ್ಜಿ, ಅರ್ಷದ್ ವಾರ್ಸಿ ಮತ್ತು ಅನಿಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಕಿಂಗ್’ ಸಿನಿಮಾ 2026ರ ಡಿಸೆಂಬರ್ 24ರಂದು ಕ್ರಿಸ್‌ಮಸ್ ಪ್ರಯುಕ್ತ ತೆರೆಕಾಣಲಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ಶಾರುಖ್​-ದೀಪಿಕಾ ‘ಕಿಂಗ್’ ಚಿತ್ರಕ್ಕೆ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರದ್ದು ಸೂಪರ್ ಹಿಟ್ ಜೋಡಿ. ಈಗಾಗಲೇ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್‌ಪ್ರೆಸ್’ ಮತ್ತು ‘ಪಠಾಣ್’ ಸಿನಿಮಾಗಳ ಮೂಲಕ ಯಶಸ್ಸು ಕಂಡ ಅವರು ಈಗ ‘ಕಿಂಗ್’ ಚಿತ್ರವನ್ನು ಅದ್ದೂರಿಯಾಗಿ ತೆರೆಗೆ ತರುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!