AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Sequel: ಬರಲಿದೆ ‘ಪಠಾಣ್​ 2’; ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಶಾರುಖ್​ ಖಾನ್​

Shah Rukh Khan | Pathaan 2: ‘ಪಠಾಣ್​ ಚಿತ್ರಕ್ಕೆ ಸೀಕ್ವೆಲ್​ ಮಾಡಲು ನಾನು ಸಕಲ ರೀತಿಯಿಂದಲೂ ಪ್ರಯತ್ನಿಸುತ್ತೇನೆ. ಅದರಲ್ಲಿ ನಟಿಸುವುದು ನನ್ನ ಪಾಲಿನ ಹೆಮ್ಮೆ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

Pathaan Sequel: ಬರಲಿದೆ ‘ಪಠಾಣ್​ 2’; ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಶಾರುಖ್​ ಖಾನ್​
ಶಾರುಖ್ ಖಾನ್
ಮದನ್​ ಕುಮಾರ್​
|

Updated on:Jan 31, 2023 | 3:30 PM

Share

ಬಾಲಿವುಡ್​ ‘ಬಾದ್​ಷಾ’ ಶಾರುಖ್​ ಖಾನ್​ (Shah Rukh Khan) ಅವರು ಈಗ ಖುಷಿಯಲ್ಲಿ ತೇಲುತ್ತಿದ್ದಾರೆ. ಬಹುವರ್ಷಗಳ ಬಳಿಕ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ‘ಪಠಾಣ್​’ (Pathaan Movie) ಚಿತ್ರವನ್ನು ಅಭಿಮಾನಿಗಳು ಕೈ ಹಿಡಿದಿದ್ದಾರೆ. ಈ ಗೆಲುವನ್ನು ಶಾರುಖ್​ ಖಾನ್​ ಅವರು ಸೆಲೆಬ್ರೇಟ್​ ಮಾಡುತ್ತಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಶಾರುಖ್​ ಖಾನ್​ ಅವರು ಹೊಸ ಸುದ್ದಿ ನೀಡಿದ್ದಾರೆ. ‘ಪಠಾಣ್​’ ಚಿತ್ರಕ್ಕೆ ಸೀಕ್ವೆಲ್​ ಬರಲಿದೆ ಎಂದು ಅವರು ತಿಳಿಸಿದ್ದಾರೆ. ‘ಪಠಾಣ್​ 2’ (Pathaan 2) ಸಿನಿಮಾದಲ್ಲಿ ನಟಿಸಲು ತಾವು ಸಿದ್ಧ ಎಂದು ‘ಕಿಂಗ್​ ಖಾನ್​’ ಹೇಳಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್​ ಆಗಿದ್ದಾರೆ.

‘ಪಠಾಣ್​’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿರುವುದರಿಂದ ಶಾರುಖ್​ ಖಾನ್​ ಅವರು ತಮ್ಮ ತಂಡದ ಜೊತೆ ಸೋಮವಾರ (ಜ.30) ಸುದ್ದಿಗೋಷ್ಠಿ ನಡೆಸಿದರು. ಅವರೊಂದಿಗೆ ದೀಪಿಕಾ ಪಡುಕೋಣೆ, ಸಿದ್ದಾರ್ಥ್​ ಆನಂದ್​, ಜಾನ್​ ಅಬ್ರಾಹಂ ಕೂಡ ಹಾಜರಿ ಹಾಕಿದ್ದರು. ಈ ಸಂದರ್ಭದಲ್ಲಿ ‘ಪಠಾಣ್​ 2’ ಬಗ್ಗೆ ಪ್ರಸ್ತಾಪ ಆಗಿದೆ. ಯಾವುದೇ ಸಿನಿಮಾ ಸೂಪರ್​ ಹಿಟ್​ ಆದರೆ ಅದರ ಮುಂದುವರಿದ ಭಾಗವನ್ನು ಅಭಿಮಾನಿಗಳು ನಿರೀಕ್ಷಿಸುತ್ತಾರೆ. ‘ಪಠಾಣ್​’ ವಿಚಾರದಲ್ಲೂ ಹಾಗೆಯೇ ಆಗಿದೆ. ಆ ಬಗ್ಗೆ ಶಾರುಖ್​ ಖಾನ್​ ಈಗಾಗಲೇ ತಮ್ಮ ನಿರ್ಧಾರ ತಿಳಿಸಿದ್ದಾರೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಗೆಲುವಿನ ಬಳಿಕ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

‘ನನಗೆ ಸಿಕ್ಕ ಅವಕಾಶದಿಂದ ತುಂಬ ಖುಷಿ ಆಗಿದೆ. ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಯಾವಾಗ ಪಠಾಣ್​ ಚಿತ್ರಕ್ಕೆ ಸೀಕ್ವೆಲ್​ ಮಾಡಿದರೂ ನಾನು ಅದರಲ್ಲಿ ನಟಿಸುತ್ತೇನೆ. ಸೀಕ್ವೆಲ್​ ಸಲುವಾಗಿ ಇನ್ನೂ ಉದ್ದ ಕೂದಲು ಬಿಡಲು ನಾನು ಸಿದ್ಧ. ಪಠಾಣ್​ 2 ಚಿತ್ರಕ್ಕಾಗಿ ನಾನು ಸಕಲ ರೀತಿಯಿಂದಲೂ ಪ್ರಯತ್ನಿಸುತ್ತೇನೆ. ಅದರಲ್ಲಿ ನಟಿಸುವುದು ನನ್ನ ಪಾಲಿನ ಹೆಮ್ಮೆ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: ಸೋಮವಾರದ ಪರೀಕ್ಷೆಯಲ್ಲೂ ‘ಪಠಾಣ್’ ಪಾಸ್; ಭಾರತದಲ್ಲಿ 6 ದಿನಕ್ಕೆ 300 ಕೋಟಿ ರೂ. ಕಲೆಕ್ಷನ್​

‘ಪಠಾಣ್​’ ಸಿನಿಮಾಗೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ಈ ಚಿತ್ರದಿಂದ ನಿರ್ಮಾಪಕರಿಗೆ ಸಿಕ್ಕಾಪಟ್ಟೆ ಲಾಭ ಆಗಿದೆ. ಸಿನಿಮಾ ಬಿಡುಗಡೆಯಾಗಿ ಒಂದು ವಾರ ಪೂರೈಸುತ್ತಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಅಬ್ಬರ ಕಡಿಮೆ ಆಗಿಲ್ಲ. ಅಂತಿಮವಾಗಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಈ ಸಿನಿಮಾದಲ್ಲಿ ವಿಲನ್​ ಪಾತ್ರ ಮಾಡಿದ ಜಾನ್​ ಅಬ್ರಾಹಂ ಹಾಗೂ ನಾಯಕಿ ದೀಪಿಕಾ ಪಡುಕೋಣೆ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ. ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರಿಗೆ ಇದ್ದ ಬೇಡಿಕೆ ಡಬಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:30 pm, Tue, 31 January 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ