AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan: ‘ಶಾರುಖ್​ ಖಾನ್​ ಯಾಕೆ ಮನೆಯಿಂದ ಹೊರಗೆ ಬಂದಿಲ್ಲ?’; ನೇರ ಪ್ರಶ್ನೆ ಕೇಳಿದ ಅಭಿಮಾನಿಗೆ ಸಿಕ್ತು ಉತ್ತರ

Shah Rukh Khan Fans | Mannat: ಬಹುನಿರೀಕ್ಷಿತ ‘ಪಠಾಣ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 25ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಆ ಪ್ರಯುಕ್ತ ಶಾರುಖ್​ ಖಾನ್​ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

Pathaan: ‘ಶಾರುಖ್​ ಖಾನ್​ ಯಾಕೆ ಮನೆಯಿಂದ ಹೊರಗೆ ಬಂದಿಲ್ಲ?’; ನೇರ ಪ್ರಶ್ನೆ ಕೇಳಿದ ಅಭಿಮಾನಿಗೆ ಸಿಕ್ತು ಉತ್ತರ
ಶಾರುಖ್ ಖಾನ್
TV9 Web
| Edited By: |

Updated on:Jan 22, 2023 | 10:17 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರನ್ನು ಆರಾಧಿಸುವ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಒಮ್ಮೆಯಾದರೂ ಅವರನ್ನು ನೇರವಾಗಿ ನೋಡಬೇಕು ಎಂಬುದು ಫ್ಯಾನ್ಸ್​ ಆಸೆ. ಅದಕ್ಕಾಗಿ ಅವರ ಮುಂಬೈ ನಿವಾಸ ‘ಮನ್ನತ್​’ (Mannat) ಎದುರು ಅನೇಕರು ಕಾಯುತ್ತಾರೆ. ಆದರೆ ಎಲ್ಲರಿಗೂ ಅವರನ್ನು ನೋಡುವ ಚಾನ್ಸ್​ ಸಿಗುವುದಿಲ್ಲ. ಕೆಲವು ವಿಶೇಷ ದಿನಗಳಲ್ಲಿ ಮಾತ್ರ ಶಾರುಖ್ ಖಾನ್​ ದರ್ಶನ ಸಿಗುತ್ತದೆ. ಇತ್ತೀಚೆಗೆ ಅಭಿಮಾನಿಯೊಬ್ಬರು ‘ಮನ್ನತ್​’ ಎದುರು ಗಂಟೆಗಟ್ಟಲೆ ಕಾದಿದ್ದಾರೆ. ಎಷ್ಟು ಕಾದರೂ ತಮ್ಮ ನೆಚ್ಚಿನ ಹೀರೋ ಹೊರಬಂದಿಲ್ಲ. ‘ಯಾಕೆ ನೀವು ಮನೆಯಿಂದ ಆಚೆ ಬಂದಿಲ್ಲ’ ಎಂದು ಆ ಅಭಿಮಾನಿ ಈಗ ನೇರವಾಗಿ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ‘ಪಠಾಣ್​’ (Pathaan Movie) ಹೀರೋ ಕಡೆಯಿಂದ ಉತ್ತರ ಕೂಡ ಸಿಕ್ಕಿದೆ.

ಬಹುನಿರೀಕ್ಷಿತ ‘ಪಠಾಣ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 25ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಆ ಪ್ರಯುಕ್ತ ಶಾರುಖ್​ ಖಾನ್​ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಟ್ವಿಟರ್​ನಲ್ಲಿ ಅವರು ಇತ್ತೀಚೆಗೆ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದರು. ಆಗ ಫ್ಯಾನ್ಸ್​ ಬಗೆಬಗೆಯ ಪ್ರಶ್ನೆ ಕೇಳಿದ್ದಾರೆ. ಆ ಪೈಕಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆ ಗಮನ ಸೆಳೆದಿದೆ.

ಇದನ್ನೂ ಓದಿ
Image
Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
Image
Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
Image
Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
Image
Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ಇದನ್ನೂ ಓದಿ: Pathaan: ‘ದೇಶ ಮಾತ್ರವಲ್ಲ, ಇಡೀ ಪ್ರಪಂಚವೇ ಶಾರುಖ್​ ಅವರನ್ನು ಮಿಸ್​ ಮಾಡಿಕೊಂಡಿದೆ’: ಜಾನ್​ ಅಬ್ರಾಹಂ

ಶಾರುಖ್​ ಖಾನ್​ ಅವರ ಮನೆ ಮುಂದಿನ ಖಾಲಿ ರಸ್ತೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋವನ್ನು ಕರಣ್​ ಸಿಂಗ್​ ಎಂಬ ಅಭಿಮಾನಿ ಪೋಸ್ಟ್​ ಮಾಡಿದ್ದಾರೆ. ‘ನಿಮಗಾಗಿ ಕಾಯುತ್ತಿದ್ದೆ. ನೀವೇಕೆ ಹೊರಗೆ ಬರಲಿಲ್ಲ’ ಎಂದು ಅವರು ಪ್ರಶ್ನಿಸಿದ್ದಾರೆ. ‘ಆಲಸ್ಯ ಎನಿಸುತ್ತಿತ್ತು. ಹಾಗಾಗಿ ಮಲಗಿಕೊಂಡಿದ್ದೆ’ ಎಂದು ಶಾರುಖ್ ಖಾನ್​ ಅವರು ಉತ್ತರ ನೀಡಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ.

‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಜಾನ್​ ಅಬ್ರಾಹಂ ಅವರಿಗೆ ಈ ಚಿತ್ರದಲ್ಲಿ ವಿಲನ್​ ಪಾತ್ರವಿದೆ. ಈ ಸಿನಿಮಾದ ಟ್ರೇಲರ್​ ಧೂಳೆಬ್ಬಿಸಿದೆ. ‘ಬೇಷರಂ ರಂಗ್​..’ ಹಾಗೂ ‘ಜೂಮೇ ಜೋ ಪಠಾಣ್​..’ ಹಾಡುಗಳು ಶಾರುಖ್​ ಅಭಿಮಾನಿಗಳ ಮನ ಗೆದ್ದಿವೆ. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರಿಗೆ ‘ಪಠಾಣ್​’ ಸಿನಿಮಾದ ಗೆಲುವು ಬಹಳ ಮುಖ್ಯವಾಗಲಿದೆ. ಈ ಹಿಂದೆ ಅವರು ನಟಿಸಿದ್ದ ‘ಜೀರೋ’ ಚಿತ್ರ  ಹೀನಾಯವಾಗಿ ಸೋತಿತ್ತು. ಆ ಬಳಿಕ ಅವರು ನಾಲ್ಕು ವರ್ಷ ಗ್ಯಾಪ್​ ತೆಗೆದುಕೊಂಡರು. ಈಗ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಲು ಫ್ಯಾನ್ಸ್​ ಸಜ್ಜಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ವರ್ಷನ್​ನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:17 am, Sun, 22 January 23

Follow Us
TV9 Web
TV9 Web

TV9 Kannada

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?