AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ

DYavol X Jacket price: ಶಾರುಖ್​ ಖಾನ್​ ಅವರು ಟ್ವಿಟರ್​ ಮೂಲಕ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಆಗ ನೆಟ್ಟಿಗರೊಬ್ಬರು ಆರ್ಯನ್​ ಖಾನ್​ ಮಾರಾಟ ಮಾಡುತ್ತಿರುವ ಜಾಕೆಟ್​ ಬೆಲೆಯ ಬಗ್ಗೆ ತಕರಾರು ತೆಗೆದಿದ್ದಾರೆ.

Shah Rukh Khan: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ
ಶಾರುಖ್ ಖಾನ್
ಮದನ್​ ಕುಮಾರ್​
|

Updated on: May 07, 2023 | 2:35 PM

Share

ನಟ ಶಾರುಖ್​ ಖಾನ್​ ಅವರ ಪುತ್ರ ಆರ್ಯನ್​ ಖಾನ್​ (Aryan Khan) ಅವರು ಬಿಸ್ನೆಸ್​ನಲ್ಲಿ ಆಸಕ್ತಿ ಹೊಂದಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಬಟ್ಟೆ ವ್ಯಾಪಾರ ಶುರು ಮಾಡಿದ್ದರು. D’YAVOL X ಎಂಬ ಬ್ರ್ಯಾಂಡ್​ನ ಬಟ್ಟೆಗಳನ್ನು ಅವರು ಆನ್​ಲೈನ್​ ಮೂಲಕ ಮಾರಾಟ ಮಾಡುತ್ತಿದ್ದಾರೆ. ಆದರೆ ಇವುಗಳ ಬೆಲೆ ಸಖತ್​ ದುಬಾರಿ ಆಗಿದೆ. ಒಂದು ಜಾಕೆಟ್​ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ. ಇದರಿಂದ ಸಾಮಾನ್ಯ ಜನರು ಈ ಬ್ರ್ಯಾಂಡ್​ನ ಬಟ್ಟೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರವಾಗಿ ಕೆಲವರು ಶಾರುಖ್​ ಖಾನ್​ (Shah Rukh Khan) ಬಳಿ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಶಾರುಖ್​ ನೀಡಿದ ಉತ್ತರ ಸಖತ್​ ಫನ್ನಿ ಆಗಿದೆ. ಮಗನ ಬಟ್ಟೆ ವ್ಯಾಪಾರದಲ್ಲಿ ತಾವು ಕೂಡ ಚೌಕಾಸಿ ಮಾಡಲಾಗುತ್ತಿಲ್ಲ ಎಂದು ಶಾರುಖ್​ ಹೇಳಿದ್ದಾರೆ.

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಖಚಿತ ಪಡಿಸಲು ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಅದರ ಬೆನ್ನಲ್ಲೇ ಶಾರುಖ್​ ಖಾನ್​ ಅವರು ಟ್ವಿಟರ್​ ಮೂಲಕ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಆಗ ನೆಟ್ಟಿಗರೊಬ್ಬರು ಆರ್ಯನ್​ ಖಾನ್​ ಮಾರಾಟ ಮಾಡುತ್ತಿರುವ ಜಾಕೆಟ್​ ಬೆಲೆಯ ಬಗ್ಗೆ ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

Aryan Khan: ಬಟ್ಟೆ ವ್ಯಾಪಾರ ಶುರು ಮಾಡಿದ ಆರ್ಯನ್​ ಖಾನ್​ಗೆ ಭರ್ಜರಿ ಲಾಭ; ಮಗನ ಬಗ್ಗೆ ಶಾರುಖ್​ ಖಾನ್​ಗೆ ಹೆಮ್ಮೆ

‘1000 ಅಥವಾ 2000 ರೂಪಾಯಿ ಬೆಲೆಯಲ್ಲೂ DYavol X ಬ್ರ್ಯಾಂಡ್​ನ ಜಾಕೆಟ್​ಗಳನ್ನು ತಯಾರು ಮಾಡಿ. ಈಗಿರುವ ಬೆಲೆಯ ಜಾಕೆಟ್​ಗಳನ್ನು ಖರೀದಿಸಲು ಮನೆ ಮಾರಾಟ ಮಾಡಬೇಕಾಗುತ್ತದೆ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಉತ್ತರಿಸಿರುವ ಶಾರುಖ್​ ಖಾನ್​, ‘ಇವರು ನನಗೂ ಕಡಿಮೆ ಬೆಲೆಗೆ ಕೊಡುತ್ತಿಲ್ಲ. ಏನಾದರೂ ಮಾಡ್ತೀನಿ ಬಿಡಿ’ ಎಂದು ಪೋಸ್ಟ್​ ಮಾಡಿದ್ದಾರೆ.

ಒಂದು ಜಾಕೆಟ್​ನ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ ಹಾಗೂ ಟಿ-ಶರ್ಟ್​ ಬೆಲೆ 24 ಸಾವಿರ ರೂಪಾಯಿ ಇದ್ದರೂ ಕೂಡ ಜನರು ಇದನ್ನು ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರು ತೋರಿಸಿದ ಪ್ರೀತಿಗೆ ಆರ್ಯನ್​ ಖಾನ್​ ಫಿದಾ ಆಗಿದ್ದಾರೆ. ಈ ಬಗ್ಗೆ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ ಮೂಲಕ ಮಾಹಿತಿ ಹಂಚಿಕೊಂಡು ಎಲ್ಲರಿಗೂ ಧನ್ಯವಾದ ತಿಳಿಸಿದ್ದರು. ಮಗನ ಬಿಸ್ನೆಸ್​ಗೆ ಶಾರುಖ್​ ಖಾನ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಈ ಬ್ರ್ಯಾಂಡ್​ನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಇದು ಆರ್ಯನ್​ ಖಾನ್​ಗೆ ಸಹಕಾರಿ ಆಗಿದೆ. ಈ ಹಿಂದೆ ಡ್ರಗ್ಸ್​ ಪಾರ್ಟಿ ಆರೋಪದ ಮೇಲೆ ಆರ್ಯನ್​ ಖಾನ್​ ಅರೆಸ್ಟ್​ ಆಗಿದ್ದರು. ಆಗ ಮಗನ ಭವಿಷ್ಯದ ಬಗ್ಗೆ ಶಾರುಖ್​ಗೆ ಚಿಂತೆ ಆಗಿತ್ತು. ಆದರೆ ಈಗ ಪುತ್ರನ ಬಗ್ಗೆ ಅವರು ಹೆಮ್ಮೆಪಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ