AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು

Shah Rukh Khan Accident: ಶೂಟಿಂಗ್ ವೇಳೆ ಮುಂಜಾಗೃತೆ ತೆಗೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಸರ್ಜರಿ ಮಾಡಲಾಗಿದೆ. ಈ ಕಾರಣದಿಂದ ಶೂಟಿಂಗ್ ಅರ್ಧಕ್ಕೆ ನಿಂತಿದೆ.

Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು
ಶಾರುಖ್ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 04, 2023 | 1:55 PM

Share

ನಟ ಶಾರುಖ್ ಖಾನ್ (Shah Rukh Khan) ಅವರು ‘ಪಠಾಣ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಗೆಲುವಿನಿಂದ ಅವರ ಅಭಿಮಾನಿಗಳು ಕೂಡ ಸಖತ್ ಖುಷಿಯಾಗಿದ್ದರು. ಆದರೆ, ಅವರ ಫ್ಯಾನ್ಸ್​ಗೆ ಈಗ ಬೇಸರದ ಸುದ್ದಿ ಸಿಕ್ಕಿದೆ. ಶಾರುಖ್ ಖಾನ್ ಅವರು ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಮುಂದಿನ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಆದರೆ, ಈ ವೇಳೆ ಉಂಟಾದ ಅವಘಡದಲ್ಲಿ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ. ಇದರಿಂದ ರಕ್ತ ಸುರಿದಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

‘ಪಠಾಣ್’ ಸಿನಿಮಾ ಈ ವರ್ಷದ ಆರಂಭದಲ್ಲಿ ತೆರೆಗೆ ಬಂತು. ಈ ಚಿತ್ರ ದೊಡ್ಡ ಯಶಸ್ಸು ಕಂಡಿತು. ಇದು ಶಾರುಖ್ ಖಾನ್ ಅವರಿಗೆ ಹೊಸ ಚೈತನ್ಯ ನೀಡಿದೆ. ಅವರು ತಮ್ಮ ಮುಂದಿನ ಚಿತ್ರವೊಂದರ ಶೂಟಿಂಗ್​ಗಾಗಿ ಅಮೆರಿಕಕ್ಕೆ ತೆರಳಿದ್ದರು. ಶೂಟಿಂಗ್ ವೇಳೆ ಮುಂಜಾಗೃತೆ ತೆಗೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಸರ್ಜರಿ ಮಾಡಲಾಗಿದೆ. ಈ ಕಾರಣದಿಂದ ಶೂಟಿಂಗ್ ಅರ್ಧಕ್ಕೆ ನಿಂತಿದೆ.

ಶಾರುಖ್ ಖಾನ್ ಅವರು ಸದ್ಯ ಭಾರತಕ್ಕೆ ಮರಳಿದ್ದಾರೆ ಎನ್ನಲಾಗುತ್ತಿದೆ. ಅವರು ಮುಂಬೈ ವಿಮಾನ ನಿಲ್ದಾಣದಿಂದ ಬರುವಾಗ ಮೂಗಿನ ಮೇಲೆ ಬ್ಯಾಂಡೇಜ್ ಕಾಣಿಸಿದೆ. ಈ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಬಕ್ರಿದ್ ಹಬ್ಬಕ್ಕೆ ಜೋರಾದ ಕುರಿಗಳ ಹಬ್ಬ; ಬಾಲಿವುಡ್ ನಟ ಶಾರುಖ್ ಖಾನ್ ಹೆಸರಿನ ಕುರಿಗೆ ಭಾರೀ ಡಿಮ್ಯಾಂಡ್

ಶಾರುಖ್ ಖಾನ್ ಅವರು ಸದ್ಯ ‘ಜವಾನ್’ ಹಾಗೂ ‘ಡಂಕಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈಗ ಶಾರುಖ್​ಗೆ ಗಾಯ ಆಗಿರುವುದರಿಂದ ಸಿನಿಮಾ ರಿಲೀಸ್ ದಿನಾಂಕ ವಿಳಂಬ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Tue, 4 July 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ