AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mannat: ಶಾರುಖ್​ ಖಾನ್​ ಮನೆಯ ಗೇಟಿಗೆ ವಜ್ರದ ಅಲಂಕಾರ; ಹೇಗಿದೆ ನೋಡಿ ‘ಮನ್ನತ್​’ ವೈಭೋಗ

Shah Rukh Khan | Mannat Diamond Nameplate: ಶಾರುಖ್​ ಖಾನ್ ನಿವಾಸದ ಮುಖ್ಯ ದ್ವಾರದಲ್ಲಿ ‘ಮನ್ನತ್’ ಎಂದು ನೇಮ್​ ಪ್ಲೇಟ್​ ಹಾಕಿಸಲಾಗಿದೆ. ಅದನ್ನು ವಜ್ರದಿಂದ ಅಲಂಕರಿಸಲಾಗಿದೆ.

Mannat: ಶಾರುಖ್​ ಖಾನ್​ ಮನೆಯ ಗೇಟಿಗೆ ವಜ್ರದ ಅಲಂಕಾರ; ಹೇಗಿದೆ ನೋಡಿ ‘ಮನ್ನತ್​’ ವೈಭೋಗ
ಮನ್ನತ್ - ಶಾರುಖ್ ಖಾನ್
TV9 Web
| Edited By: |

Updated on:Nov 21, 2022 | 8:49 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರಿಗೆ ಇರುವ ಫ್ಯಾನ್​ ಫಾಲೋಯಿಂಗ್​ ಅಷ್ಟಿಷ್ಟಲ್ಲ. ಹಲವು ಸಿನಿಮಾಗಳು ಸೋತರೂ ಕೂಡ ಅವರ ಮೇಲೆ ಜನರು ಇಟ್ಟಿರುವ ಅಭಿಮಾನ ಕಡಿಮೆ ಆಗಿಲ್ಲ. ಪ್ರತಿ ವರ್ಷ ಅವರ ಹುಟ್ಟುಹಬ್ಬದ ದಿನ ಮನೆ ಎದುರು ಸಾವಿರಾರು ಅಭಿಮಾನಿಗಳು ಜಮಾಯಿಸುತ್ತಾರೆ. ಕಿಂಗ್​ ಖಾನ್​ ಅವರ ‘ಮನ್ನತ್​’ (Mannat) ನಿವಾಸಕ್ಕೆ ವಿಶೇಷ ಆಕರ್ಷಣೆ ಇದೆ. ಈ ಐಷಾರಾಮಿ ಬಂಗಲೆ ಯಾವ ಅರಮನೆಗೂ ಕಮ್ಮಿ ಇಲ್ಲ. ಮುಂಬೈ ಮಹಾನಗರದಲ್ಲಿ ‘ಮನ್ನತ್​’ ಕಟ್ಟಡಕ್ಕೆ ಅದರದ್ದೇ ಆದ ಮೆರುಗು ಇದೆ. ಆಗಾಗ ಬಾಲಿವುಡ್​ ಸೆಲೆಬ್ರಿಟಿಗಳು ಈ ಬಂಗಲೆಯಲ್ಲಿ ಪಾರ್ಟಿ ಮಾಡುತ್ತಾರೆ. ಈಗ ಶಾರುಖ್​ ಖಾನ್​ ಮನೆ ಬಗ್ಗೆ ಹೊಸ ಅಪ್​ಡೇಟ್​ ಕೇಳಿಬಂದಿದೆ. ಮನ್ನತ್​ ನಿವಾಸದ ಗೇಟಿಗೆ ವಜ್ರದ (Diamond) ಅಲಂಕಾರ ಮಾಡಲಾಗಿದೆ. ಅದರ ಫೋಟೋಗಳು ಕೂಡ ವೈರಲ್​ ಆಗಿವೆ.

ಶಾರುಖ್​ ಖಾನ್​ ಅವರ ಫ್ಯಾನ್​ ಪೇಜ್​ಗಳಲ್ಲಿ ಕೆಲವು ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗಿದೆ. ಕಿಂಗ್​ ಖಾನ್​ ನಿವಾಸದ ಮುಖ್ಯ ದ್ವಾರದಲ್ಲಿ ‘ಮನ್ನತ್’ ಎಂದು ನೇಮ್​ ಪ್ಲೇಟ್​ ಹಾಕಿಸಲಾಗಿದೆ. ಅದನ್ನು ವಜ್ರದಿಂದ ಅಲಂಕರಿಸಲಾಗಿದೆ. ಈ ವೈಭೋಗ ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ವಜ್ರಖಚಿತ ನೇಮ್​ಪ್ಲೇಟ್​ ಹೊಂದಿರುವ ಕಾರಣದಿಂದ ‘ಮನ್ನತ್​’ ಈಗ ಇನ್ನಷ್ಟು ಆಕರ್ಷಕವಾಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

2018ರಲ್ಲಿ ಬಂದ ‘ಜೀರೋ’ ಸಿನಿಮಾ ಹೀನಾಯವಾಗಿ ಸೋತ ಬಳಿಕ ಶಾರುಖ್​ ಖಾನ್ ಅವರು ಒಂದು ಗ್ಯಾಪ್​ ತೆಗೆದುಕೊಂಡರು. ಆದರೆ ಈಗ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಜವಾನ್​’, ‘ಡಂಕಿ’, ‘ಪಠಾಣ್​’ ಮುಂತಾದ ಸಿನಿಮಾಗಳಲ್ಲಿ ಶಾರುಖ್​ ಖಾನ್​ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಅವರ ಕಮ್​ಬ್ಯಾಕ್​ ಸಿನಿಮಾವನ್ನು ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ನವೆಂಬರ್​ 2ರಂದು ಶಾರುಖ್​ ಖಾನ್​ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಈ ಖುಷಿಯನ್ನು ಹೆಚ್ಚಿಸಲು ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಯಿತು. ಈ ಟೀಸರ್​​ನಲ್ಲಿ ಅವರ ಭರ್ಜರಿ ಆ್ಯಕ್ಷನ್​ ಅವತಾರ ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ.

‘ಪಠಾಣ್​’ ಚಿತ್ರ 2023ರ ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:49 am, Mon, 21 November 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!