ಗೆದ್ದ ಖುಷಿಯಲ್ಲಿ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​ಗೆ ಮುತ್ತಿಟ್ಟ ಶಾರುಖ್ ಖಾನ್

ಗೌತಮ್ ಗಂಭೀರ್ ಅವರು ಕೆಕೆಆರ್​ನ ಮೆಂಟರ್​ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕೋಲ್ಕತ್ತ ನೈಟ್ ರೈಡರ್ಸ್​ಗೆ ಗೌತಮ್ ಗಂಭೀರ್ ಈ ಮೊದಲು ಕ್ಯಾಪ್ಟನ್ ಆಗಿದ್ದರು. ಅವರ ನಾಯಕತ್ವದಲ್ಲಿ ತಂಡಕ್ಕೆ ಎರಡು ಟ್ರೋಫಿಗಳು ಬಂದಿದ್ದವು. ಈಗ 10 ವರ್ಷಗಳ ಬಳಿಕ ಮತ್ತೊಮ್ಮೆ ಕೆಕೆಆರ್​ ಗೆಲುವಿನ ಕೇಕೆ ಹಾಕಿದೆ.

ಗೆದ್ದ ಖುಷಿಯಲ್ಲಿ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​ಗೆ ಮುತ್ತಿಟ್ಟ ಶಾರುಖ್ ಖಾನ್
ಶಾರುಖ್-ಗೌತಮ್
Follow us
ರಾಜೇಶ್ ದುಗ್ಗುಮನೆ
|

Updated on: May 27, 2024 | 7:01 AM

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೆಕೆಆರ್ (KKR)​ ನಡುವಿನ ಪಂದ್ಯದಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ಗೆಲುವು ಕಂಡಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಕೆಕೆಆರ್​ ಮೂರನೇ ಗೆಲುವು ಕಂಡಿದೆ. ಶಾರುಖ್ ಖಾನ್ ಅವರು ಈ ಗೆಲುವನ್ನು ಮಕ್ಕಳಾದ ಸುಹಾನಾ ಖಾನ್, ಅಬ್ರಾಮ್ ಖಾನ್ ಹಾಗೂ ಆರ್ಯನ್ ಖಾನ್ ಜೊತೆ ಸಂಭ್ರಮಿಸಿದರು. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 113 ರನ್​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕೆಕೆಆರ್​ ಈ ಗುರಿಯನ್ನು ಕೇವಲ 10.3 ಓವರ್​ನಲ್ಲಿ ತಲುಪಿ ಸುಲಭದ ಗೆಲುವನ್ನು ತನ್ನದಾಗಿಸಿಕೊಂಡಿತು.

ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಶಾರುಖ್ ಖಾನ್ ಅವರು ಹಗ್ ಕೊಟ್ಟರು. ಜೊತೆಗೆ ಪ್ರೀತಿಯಿಂದ ಮುತ್ತಿಟ್ಟರು. ಗೌತಮ್ ಗಂಭೀರ್ ಅವರು ಕೆಕೆಆರ್​ನ ಮೆಂಟರ್​ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕೋಲ್ಕತ್ತ ನೈಟ್ ರೈಡರ್ಸ್​ಗೆ ಗೌತಮ್ ಗಂಭೀರ್ ಈ ಮೊದಲು ಕ್ಯಾಪ್ಟನ್ ಆಗಿದ್ದರು. ಅವರ ನಾಯಕತ್ವದಲ್ಲಿ ತಂಡಕ್ಕೆ ಎರಡು ಟ್ರೋಫಿಗಳು ಬಂದಿದ್ದವು. ಈಗ 10 ವರ್ಷಗಳ ಬಳಿಕ ಮತ್ತೊಮ್ಮೆ ಕೆಕೆಆರ್​ ಗೆಲುವಿನ ಕೇಕೆ ಹಾಕಿದೆ.

ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು

ಕೆಕೆಆರ್​ ಗೆದ್ದ ಬಳಿಕ ಶಾರುಖ್ ಖಾನ್ ಅವರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಶಾರುಖ್ ಖಾನ್ ಅವರು ಮಗಳು ಸುಹಾನಾ ಅವರನ್ನು ಅಪ್ಪಿದರು. ಶಾರುಖ್ ಮಕ್ಕಳು ಕೂಡ ಈ ಗೆಲುವಿನಿಂದ ಸಾಕಷ್ಟು ಸಂತೋಷಪಟ್ಟರು. ಇನ್ನು ಈ ಬಾರಿ ಕೆಕೆಆರ್​ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ ಸುನಿಲ್ ನರೀನ್ ಅವರನ್ನು ಗೌತಮ್ ಗಂಭೀರ್ ಮೇಲಕ್ಕೆ ಎತ್ತಿ ಸಂಭ್ರಮಿಸಿದರು. 15 ಪಂದ್ಯಗಳಲ್ಲಿ ಸುನೀಲ್ ಅವರು 488 ರನ್​ಗಳನ್ನು ಬಾರಿಸಿದ್ದಲ್ಲದೆ, 17 ವಿಕೆಟ್ ಕಿತ್ತಿದ್ದಾರೆ. ಅವರಿಗೆ ಮೋಸ್ಟ್ ವ್ಯಾಲ್ಯುವೆಬಲ್ ಪ್ಲೇಯರ್ ಅವಾರ್ಡ್ ಸಿಕ್ಕಿದೆ.

ಶಾರುಖ್ ಖಾನ್ ಹಾಗೂ ಮಿಚೆಲ್ ಸ್ಟಾರ್ಕ್ ಕೆಲ ಹೊತ್ತು ಚರ್ಚೆ ನಡೆಸಿದ್ದು ಕಂಡು ಬಂದಿದೆ. ಈ ಬಾರಿ ಅತಿ ಹೆಚ್ಚಿನ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಅವರನ್ನು ಕೆಕೆಆರ್​ ಖರೀದಿಸಿದೆ. ಪ್ರಮುಖ ಪಂದ್ಯಗಳಲ್ಲಿ ಮಿಚೆಲ್ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ