AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಂಗ್’ ಚಿತ್ರದ ‘ತು ಮಿಲ್ ಜಾಯೇ’ ಹಾಡು ರಿಲೀಸ್; ‘ಪಠಾಣ್’ ಫೀಲ್ ಇದೆ ಎಂದ ನೆಟ್ಟಿಗರು

ಬಾಲಿವುಡ್ ನಟ ಶಾರುಖ್ ಖಾನ್ ಹುಟ್ಟುಹಬ್ಬಕ್ಕೆ 'ಕಿಂಗ್' ಸಿನಿಮಾದ 'ತು ಮಿಲ್ ಜಾಯೆ' ಹಾಡು ಬಿಡುಗಡೆಯಾಗಿದೆ. ಅರಿಜಿತ್ ಸಿಂಗ್ ಗಾಯನ ಮತ್ತು ಶಾರುಖ್-ದೀಪಿಕಾ ಕೆಮಿಸ್ಟ್ರಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಅನೇಕ ಅಭಿಮಾನಿಗಳು ಈ ಹಾಡಿನ ಶೈಲಿ ಹಾಗೂ ದೃಶ್ಯಗಳು 'ಪಠಾಣ್' ಸಿನಿಮಾವನ್ನೇ ನೆನಪಿಸುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ.

‘ಕಿಂಗ್’ ಚಿತ್ರದ ‘ತು ಮಿಲ್ ಜಾಯೇ’ ಹಾಡು ರಿಲೀಸ್; ‘ಪಠಾಣ್’ ಫೀಲ್ ಇದೆ ಎಂದ ನೆಟ್ಟಿಗರು
ದೀಪಿಕಾ-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Nov 02, 2026 | 11:10 AM

Share

ಮುಖ್ಯಾಂಶಗಳು

  • ಕಿಂಗ್ ಹುಟ್ಟುಹಬ್ಬಕ್ಕೆ 'ತು ಮಿಲ್ ಜಾಯೆ' ಧಮಾಕಾ
  • ಶಾರುಖ್-ದೀಪಿಕಾ ಕೆಮಿಸ್ಟ್ರಿ ಸೂಪರ್
  • ಎಡ್ ಶೀರನ್ ರ್ಯಾಪ್ ಸಾಥ್

ಬಾಲಿವುಡ್ ನಟ ಶಾರುಖ್ ಖಾನ್ ತಮ್ಮ 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಬಿಗ್ ಸರ್‌ಪ್ರೈಸ್ ಸಿಕ್ಕಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಮುಂಬರುವ ‘ಕಿಂಗ್’ ಸಿನಿಮಾದ ಮೊದಲ ಹಾಡು ‘ತು ಮಿಲ್ ಜಾಯೆ’ ನವೆಂಬರ್ 2ರ ಮಧ್ಯರಾತ್ರಿ ಬಿಡುಗಡೆಯಾಗಿದೆ. ಈ ಹಾಡು ಯೂಟ್ಯೂಬ್​​ನಲ್ಲಿ ಲಕ್ಷ ಲಕ್ಷ ವೀವ್ಸ್ ಪಡೆದಿದೆ. ಆದರೆ, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಈ ರೋಮ್ಯಾಂಟಿಕ್ ಹಾಗೂ ಆಕ್ಷನ್ ಮಿಳಿತದ ಹಾಡಿಗೆ ಸಚಿನ್-ಜಿಗರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅರಿಜಿತ್ ಸಿಂಗ್ ಮತ್ತು ಮಧುಬಂತಿ ಬಾಗ್ಚಿ ಅವರ ಮಧುರ ಧ್ವನಿಗೆ ಜಾಗತಿಕ ಗಾಯಕ ಎಡ್ ಶೀರನ್ ಇಂಗ್ಲಿಷ್ ರ್ಯಾಪ್ ಸಾಥ್ ನೀಡಿದ್ದಾರೆ. ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರ ಅದ್ಭುತ ಕೆಮಿಸ್ಟ್ರಿ ಮತ್ತೊಮ್ಮೆ ತೆರೆಮೇಲೆ ಮೋಡಿ ಮಾಡಿದೆ.

ಶಾರುಖ್ ಖಾನ್ ಮತ್ತು ಅರಿಜಿತ್ ಸಿಂಗ್ ಕಾಂಬಿನೇಷನ್ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ. ಅನೇಕ ಅಭಿಮಾನಿಗಳು ಈ ಹಾಡನ್ನು ಚಾರ್ಟ್‌ಬಸ್ಟರ್ ಎಂದು ಕರೆದಿದ್ದು, ಹಾಡಿನಲ್ಲಿ ಶಾರುಖ್ ಅವರ ಸಿಕ್ಸ್ ಪ್ಯಾಕ್ ಲುಕ್ ಹಾಗೂ ನಟನೆಯನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಹಾಡಿನ ಕೊನೆಯಲ್ಲಿ ಬರುವ ಶಾರುಖ್ ಖಾನ್ ಅವರ ಮಾಸ್ ಆಕ್ಷನ್ ಡೈಲಾಗ್ ಕೂಡ ಕಿಕ್ ನೀಡಿದೆ.

ಆದರೆ ಮತ್ತೊಂದೆಡೆ, ಈ ಹಾಡು ಶಾರುಖ್ ಅವರ ಹಿಂದಿನ ಹಿಟ್ ಸಿನಿಮಾ ‘ಪಠಾಣ್’ ಮತ್ತು ಸಿದ್ಧಾರ್ಥ್ ಆನಂದ್ ಅವರ ಇತರ ಸಿನಿಮಾಗಳ ಹಾಡುಗಳನ್ನು ನೆನಪಿಸುತ್ತಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹಾಡಿನ ಮ್ಯೂಸಿಕ್, ಸ್ಟೈಲಿಂಗ್ ಹಾಗೂ ದೃಶ್ಯಾವಳಿಗಳಲ್ಲಿ ಹೊಸತನವಿಲ್ಲ ಎಂಬ ಟೀಕೆಗಳೂ ಕೇಳಿಬಂದಿವೆ.

ಇದನ್ನೂ ಓದಿ: ಶಾರುಖ್ ಖಾನ್ ಜನ್ಮದಿನ: ಬರೀ ನಟನೆಯಲ್ಲ, 10,000 ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಕಿಂಗ್ ಖಾನ್

ಒಟ್ಟಾರೆಯಾಗಿ ‘ತು ಮಿಲ್ ಜಾಯೆ’ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ವೀಕ್ಷಣೆ ಪಡೆದುಕೊಂಡಿದೆ. ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಈ ಹಾಡು ಯೂಟ್ಯೂಬ್ ಹಾಗೂ ಮ್ಯೂಸಿಕ್ ಪ್ಲಾಟ್‌ಫಾರ್ಮ್‌ಗಳಲ್ಲಿ ಧೂಳೆಬ್ಬಿಸುತ್ತಿದ್ದು, ‘ಕಿಂಗ್’ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಸಿನಿಮಾ ಸೋಲುವ ಭೀತಿ ಅಭಿಮಾನಿಗಳನ್ನು ಕಾಡಿದೆ. ಡಿಸೆಂಬರ್ 24ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಇಂದು ಕಾಲಾಷ್ಟಮಿ; ಕಾಲಭೈರವನ ಆರಾಧನೆಗೆ ಸೂಕ್ತ ದಿನ
ಇಂದು ಕಾಲಾಷ್ಟಮಿ; ಕಾಲಭೈರವನ ಆರಾಧನೆಗೆ ಸೂಕ್ತ ದಿನ
ಮೆರವಣಿಗೆಯಲ್ಲಿ ಗಮನ ಸೆಳೆದ ರೋಬೋಟಿಕ್​ ಆನೆಗಳು!
ಮೆರವಣಿಗೆಯಲ್ಲಿ ಗಮನ ಸೆಳೆದ ರೋಬೋಟಿಕ್​ ಆನೆಗಳು!
ಹಾಸನಾಂಬ ಸನ್ನಿಧಾನಕ್ಕೆ ಹರಿದುಬರುತ್ತಿದೆ ಕೋಟಿ ಕೋಟಿ ದುಡ್ಡು!
ಹಾಸನಾಂಬ ಸನ್ನಿಧಾನಕ್ಕೆ ಹರಿದುಬರುತ್ತಿದೆ ಕೋಟಿ ಕೋಟಿ ದುಡ್ಡು!
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್