AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಜೊತೆಯಾಗಿ ಸಿನಿಮಾ ಮಾಡ್ತಾರೆ ಶಾರುಖ್​ ಖಾನ್​-ಸುಹಾನಾ ಖಾನ್​? ತಂದೆ-ಮಗಳ ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

Shah Rukh Khan: ಸುಹಾನಾ ಖಾನ್​ ನಟನೆಯ ಎರಡನೇ ಚಿತ್ರವು ಒಟಿಟಿ ಬದಲಿಗೆ ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. ಆ ಚಿತ್ರದಲ್ಲಿ ಶಾರುಖ್​ ಖಾನ್​ ಕೂಡ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ.

Suhana Khan: ಜೊತೆಯಾಗಿ ಸಿನಿಮಾ ಮಾಡ್ತಾರೆ ಶಾರುಖ್​ ಖಾನ್​-ಸುಹಾನಾ ಖಾನ್​? ತಂದೆ-ಮಗಳ ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ
ಶಾರುಖ್​ ಖಾನ್​, ಸುಹಾನಾ ಖಾನ್​
ಮದನ್​ ಕುಮಾರ್​
|

Updated on: Jun 26, 2023 | 8:38 PM

Share

ಬಾಲಿವುಡ್​ನಲ್ಲಿ ನೆಪೋಟಿಸಂ (Nepotisam) ಜಾಸ್ತಿ ಇದೆ ಎಂದು ಅನೇಕರು ಬಾಯಿ ಬಡಿದುಕೊಳ್ಳುತ್ತಾರೆ. ಆದರೆ ಅದಕ್ಕೆಲ್ಲ ಫಿಲ್ಮಿ ಕುಟುಂಬದ ಹಿನ್ನೆಲೆ ಇರುವ ಸೆಲೆಬ್ರಿಟಿಗಳು ಕಿಂಚಿತ್ತೂ ತಲೆ ಕೆಡಿಸಿಕೊಳ್ಳುವುದಿಲ್ಲ. ಸ್ಟಾರ್​ ನಟ-ನಟಿಯರ ಮಕ್ಕಳನ್ನು ಲಾಂಚ್​ ಮಾಡುವ ಟ್ರೆಂಡ್​ ನಡೆದುಕೊಂಡು ಬರುತ್ತಲೇ ಇದೆ. ನೆಪೋ ಕಿಡ್​ಗಳಿಗೆ ಪದೇ ಪದೇ ಅವಕಾಶ ಸಿಗುತ್ತಲೇ ಇದೆ. ನಟ ಶಾರುಖ್​ ಖಾನ್​ (Shah Rukh Khan) ಅವರ ಮಕ್ಕಳು ಈಗ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಶಾರುಖ್​ ಖಾನ್​ರ ಪುತ್ರ ಆರ್ಯನ್​ ಖಾನ್​ಗೆ ನಿರ್ದೇಶನದಲ್ಲಿ ಆಸಕ್ತಿ ಇದೆ. ಪುತ್ರಿ ಸುಹಾನಾ ಖಾನ್​ಗೆ ನಟಿಯಾಗಬೇಕು ಎಂಬ ತವಕ. ಈಗ ಒಂದು ಹೊಸ ಸುದ್ದಿ ಕೇಳಿಬಂದಿದೆ. ಸುಹಾನಾ ಖಾನ್​ (Suhana Khan) ಅವರ ಎರಡನೇ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಒಂದು ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಅವರು ಆ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂದು ವರದಿ ಪ್ರಕಟ ಆಗಿದೆ.

ಸುಹಾನಾ ಖಾನ್​ ಅವರು ಈಗಾಗಲೇ ‘ದಿ ಆರ್ಚೀಸ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ನೆಟ್​ಫ್ಲಿಕ್ಸ್​ ಒಟಿಟಿ ಮೂಲಕ ರಿಲೀಸ್​ ಆಗಲಿದೆ. ಸುಹಾನಾ ಅವರ ಎರಡನೇ ಚಿತ್ರವು ಒಟಿಟಿ ಬದಲಿಗೆ ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. ಆ ಚಿತ್ರವನ್ನು ಶಾರುಖ್​ ಖಾನ್​ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಮೂಲಕ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಅದರಲ್ಲಿ ಶಾರುಖ್​ ಖಾನ್​ ಅವರು ಒಂದು ಪಾತ್ರ ಮಾಡಲಿದ್ದಾರೆ ಎಂದು ಗಾಸಿಪ್​ ಹರಡಿದೆ.

ಇದನ್ನೂ ಓದಿ: Suhana Khan: ಎಲ್ಲಾ ಬಿಟ್ಟು ಕೃಷಿಯತ್ತ ಹೊರಳಿದ ಸುಹಾನಾ ಖಾನ್; ಒಂದೂವರೆ ಎಕರೆ ಕೃಷಿ ಭೂಮಿ ಖರೀದಿ

ಆಲಿಯಾ ಭಟ್​ ನಟನೆಯ ‘ಡಿಯರ್​ ಜಿಂದಗಿ’ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಒಂದು ಪಾತ್ರ ಮಾಡಿದ್ದರು. ಅತಿಥಿ ಪಾತ್ರಕ್ಕಿಂತಲೂ ತುಸು ಜಾಸ್ತಿ ಸ್ಕ್ರೀನ್​ ಸ್ಪೇಸ್​ ಅವರಿಗೆ ನೀಡಲಾಗಿತ್ತು. ಈಗ ಸುಹಾನಾ ಖಾನ್​ ನಟನೆಯ ಸಿನಿಮಾದಲ್ಲಿ ಶಾರುಖ್​ ಖಾನ್​ ಮಾಡಲಿರುವ ಪಾತ್ರ ಕೂಡ ಅದೇ ರೀತಿ ಇರಲಿದೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕಂತೂ ಈ ಸುದ್ದಿ ಬರೀ ಅಂತೆ-ಕಂತೆಯ ಹಂತದಲ್ಲಿದೆ. ಅಧಿಕೃತ ಮಾಹಿತಿ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Shah Rukh Khan: ಶಾರುಖ್​ ಖಾನ್​ ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 31 ವರ್ಷ; ಅಂದು ಮಾಡಿದ ತಪ್ಪನ್ನು ಇಂದು ಒಪ್ಪಿಕೊಂಡ ನಟ

ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮುನ್ನವೇ ಸುಹಾನಾ ಖಾನ್​ ಅವರಿಗೆ ಭಾರಿ ಜನಪ್ರಿಯತೆ ಸಿಕ್ಕಿದೆ. ಅಂತಾರಾಷ್ಟ್ರೀಯ ಮಟ್ಟದ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದಾರೆ. ಅವರ ಅನೇಕ ಫೋಟೋಗಳು ವೈರಲ್​ ಆಗಿವೆ. ಮೊದಲ ಸಿನಿಮಾ ತೆರೆಕಂಡ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಲಿದೆ. ಎರಡನೇ ಸಿನಿಮಾದಲ್ಲಿ ಶಾರುಖ್​ ಖಾನ್​ ಸಾಥ್​ ನೀಡಿದರೆ ಆ ಚಿತ್ರದ ಮೇಲೆ ಜನರಿಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ