ಶಾರುಖ್ ಖಾನ್ ಅಸಲಿ ವಯಸ್ಸೆಷ್ಟು? ಫ್ಯಾನ್ಸ್​ಗೆ ಹುಟ್ಟಿದೆ ದೊಡ್ಡ ಅನುಮಾನ

ಹಲವು ಜಾಹೀರಾತುಗಳಲ್ಲಿ ಶಾರುಖ್ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಹೊಸ ಜಾಹೀರಾತು ಪ್ರಸಾರ ಕಂಡಿದ್ದು, ಇದರಲ್ಲಿ ಅವರು ಸಖತ್ ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ.

ಶಾರುಖ್ ಖಾನ್ ಅಸಲಿ ವಯಸ್ಸೆಷ್ಟು? ಫ್ಯಾನ್ಸ್​ಗೆ ಹುಟ್ಟಿದೆ ದೊಡ್ಡ ಅನುಮಾನ
ಶಾರುಖ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 09, 2022 | 1:55 PM

ವನಟ ಶಾರುಖ್ ಖಾನ್ (Shah Rukh Khan) ಅವರು ದೊಡ್ಡ ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಸತತವಾಗಿ ಸೋಲು ಕಂಡರೂ ಈಗಲೂ ಪ್ರತಿ ಸಿನಿಮಾಗೆ 100 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಅವರು ಈಗ ಮೂರು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಶಾರುಖ್ ಅವರ ವಯಸ್ಸು ಈಗ 56. ಆದರೆ, ಅವರ ಅಸಲಿ ವಯಸ್ಸಿನ ಬಗ್ಗೆ ಫ್ಯಾನ್ಸ್​ಗೆ ಅನುಮಾನ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಹೊಸ ಜಾಹೀರಾತು.

ಶಾರುಖ್ ಖಾನ್ ಅವರ ನಟನೆಯ ‘ಜೀರೋ’ ಸಿನಿಮಾ ಮಕಾಡೆ ಮಲಗಿತು. ಈ ಚಿತ್ರ ತೆರೆಗೆ ಬಂದಿದ್ದು 2018ರಲ್ಲಿ. ಆ ಬಳಿಕ ಶಾರುಖ್ ಖಾನ್ ಅವರು ನಾಲ್ಕು ವರ್ಷ ಬ್ರೇಕ್ ತೆಗೆದುಕೊಂಡರು. ಈಗ ಒಟ್ಟೊಟ್ಟಿಗೆ ‘ಪಠಾಣ್​’, ‘ಡಂಕಿ’ ಹಾಗೂ ‘ಜವಾನ್​’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಹಲವು ಜಾಹೀರಾತುಗಳಲ್ಲಿ ಶಾರುಖ್ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಹೊಸ ಜಾಹೀರಾತು ಪ್ರಸಾರ ಕಂಡಿದ್ದು, ಇದರಲ್ಲಿ ಅವರು ಸಖತ್ ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?
Image
ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​

ಗೋದ್ರೆಜ್ ಶ್ಯಾಂಪೂ ಜಾಹೀರಾತಿನಲ್ಲಿ ಶಾರುಖ್ ಖಾನ್ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಯಾರೂ ಅವರ ವಯಸ್ಸು 55 ದಾಟಿದೆ ಎಂದು ಹೇಳುವುದಿಲ್ಲ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಶಾರುಖ್ ಖಾನ್ ವಯಸ್ಸು 56 ಎಂದು ವಿಕಿಪೀಡಿಯಾದಲ್ಲಿದೆ. ಆದರೆ, ಅವರ ವಯಸ್ಸು ಇನ್ನೂ ಕಡಿಮೆ ಇರಬಹುದು ಎನ್ನುವ ಅನುಮಾನ ನನಗೆ ಮೂಡಿದೆ’ ಎಂದು ಅಭಿಮಾನಿಗಳು ಹೇಳಿಕೊಳ್ಳುತ್ತಿದ್ದಾರೆ.

ಶಾರುಖ್ ಖಾನ್ ಈ ವಯಸ್ಸಿನಲ್ಲೂ ಯಂಗ್ ಆಗಿ ಕಾಣಿಸುತ್ತಾರೆ. ಈಗಲೂ ಅವರು 6 ಪ್ಯಾಕ್​, 8​ ಪ್ಯಾಕ್​ ಮೂಲಕ ಮಿಂಚುತ್ತಾರೆ. ಫಿಟ್​​ನೆಸ್​ಗೆ ಹೆಚ್ಚು ಆದ್ಯತೆ ನೀಡುವ ಅವರು ನಿತ್ಯ ಹಲವು ಗಂಟೆಗಳ ಕಾಲ ಜಿಮ್​ನಲ್ಲಿ ಕಳೆಯುತ್ತಾರೆ.

View this post on Instagram

A post shared by Godrej magic (@godrejmagic)

ಇದನ್ನೂ ಓದಿ: ಮುಂಬೈ ಡ್ರಗ್ಸ್​ ಪ್ರಕರಣ; ಶಾರುಖ್ ಖಾನ್ ಮಗ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ ಕ್ಲೀನ್ ಚಿಟ್

‘ಪಠಾಣ್​’ ಚಿತ್ರಕ್ಕೆ ವಾರ್ ಖ್ಯಾತಿಯ ಸಿದ್ದಾರ್ಥ್ ಆನಂದ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ. ಸಲ್ಮಾನ್ ಖಾನ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಜವಾನ್’ ಸಿನಿಮಾಗೆ ತಮಿಳಿನ ಅಟ್ಲೀ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೂರು ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

Published On - 1:14 pm, Sat, 9 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ