ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅಭಿಮಾನಿಯ ಕೊನೆಯ ಆಸೆ ಈಡೇರಿಸಿದ ಶಾರುಖ್ ಖಾನ್

ಪ್ರಿಯಾ ಚಕ್ರವರ್ತಿ ಎಂಬವವರು ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ಶಾರುಖ್ ಖಾನ್ ಬಳಿ ವಿಶೇಷ ಮನವಿ ಮಾಡಿದ್ದರು. ಇದಕ್ಕೆ ಶಾರುಖ್ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅಭಿಮಾನಿಯ ಕೊನೆಯ ಆಸೆ ಈಡೇರಿಸಿದ ಶಾರುಖ್ ಖಾನ್
ಅಭಿಮಾನಿ ಸಂಕಷ್ಟಕ್ಕೆ ಓಗುಟ್ಟು ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: May 24, 2023 | 2:22 PM

ನಟ ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್​ಸ್ಟಾರ್​. ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರಿಗೆ ಅಭಿಮಾನಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಶಾರುಖ್ ಅಭಿಮಾನಿ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರಿಗೆ ಶಾರುಖ್ ವಿಡಿಯೋ ಕಾಲ್ ಮಾಡಿದ್ದಾರೆ. ಈ ಮೂಲಕ ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಶಾರುಖ್ ಖಾನ್. ಸದ್ಯ ಶಾರುಖ್ ಖಾನ್ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳಿಗೆ ತೋರಿಸಿರುವ ಪ್ರೀತಿ ಕಂಡು ಶಾರುಖ್ ಖಾನ್ ಖುಷಿ ಆಗಿದ್ದಾರೆ.

ಪ್ರಿಯಾ ಚಕ್ರವರ್ತಿ ಎಂಬವವರು ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ಶಾರುಖ್ ಖಾನ್ ಬಳಿ ವಿಶೇಷ ಮನವಿ ಮಾಡಿದ್ದರು. ‘ನನ್ನ ತಾಯಿಗೆ ಕ್ಯಾನ್ಸರ್. ಅವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅವರಿಗೆ ಈಗ 57 ವರ್ಷ ವಯಸ್ಸು. ಶಾರುಖ್​​ ಖಾನ್​ನ ಭೇಟಿ ಮಾಡಬೇಕು ಎಂಬುದು ಅವರ ಕೊನೆಯ ಆಸೆ. ಅವರಿಗೆ ಎಷ್ಟು ದಿನ ಉಳಿದಿದೆಯೋ ಗೊತ್ತಿಲ್ಲ’ ಎಂದು ಪ್ರಿಯಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?

ಶಾರುಖ್ ಖಾನ್ ಅವರ ಕಣ್ಣಿಗೂ ಈ ಟ್ವಿಟ್ ಕಂಡಿದೆ. ಅವರು ವಿಡಿಯೋ ಕಾಲ್ ಮೂಲಕ ಅಭಿಮಾನಿ ಜೊತೆ ಮಾತನಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಶಾರುಖ್ ಖಾನ್ ಅವರು 30 ನಿಮಿಷಗಳ ಕಾಲ ಕ್ಯಾನ್ಸರ್ ರೋಗಿ ಬಳಿ ಮಾತನಾಡಿದ್ದಾರೆ. ಈ ಮೂಲಕ ಅವರು ಕೊನೆಯ ಆಸೆ ಈಡೇರಿಸಿದ್ದಾರೆ. ಶಾರುಖ್ ಖಾನ್ ಅವರು ಆಗಾಗ ಟ್ವಿಟರ್​ನಲ್ಲಿ ಅಭಿಮಾನಿಗಳ ಜೊತೆ ಸಂವಾದ ನಡೆಸುತ್ತಾರೆ.

ಆರ್ಯನ್ ಖಾನ್ ವೆಬ್​ ಸೀರಿಸ್​ನಲ್ಲಿ ಶಾರುಖ್

ಆರ್ಯನ್ ಖಾನ್ ಅವರು ಹೊಸ ವೆಬ್​ ಸೀರಿಸ್  ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚಿತ್ರರಂಗದ ಬಗ್ಗೆಯೇ ಈ ವೆಬ್ ಸರಣಿ ಸಿದ್ಧಗೊಳ್ಳಲಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಸರಣಿಯಲ್ಲಿ ಸ್ಟಾರ್​ಗಳ ದಂಡೇ ಇರಲಿದೆ ಎನ್ನಲಾಗುತ್ತಿದೆ. ಈ ಸರಣಿಗೆ ಸದ್ಯ ‘ಸ್ಟಾರ್​ಡಂ’ ಎಂದು ಶೀರ್ಷಿಕೆ ಇಡಲಾಗಿದೆ. ‘ಸ್ಟಾರ್​ಡಂ’ನಲ್ಲಿ ಆರು ಎಪಿಸೋಡ್​ಗಳು ಇರಲಿವೆಯಂತೆ. ಪ್ರತಿ ಎಪಿಸೋಡ್ 45 ನಿಮಿಷ ಇರಲಿದೆ ಎನ್ನಲಾಗುತ್ತಿದೆ. ಆರ್ಯನ್ ಖಾನ್ ತಂದೆ ಶಾರುಖ್ ಖಾನ್ ಅವರು ಹಲವು ವರ್ಷಗಳಿಂದ ಇಂಡಸ್ಟ್ರಿಯಲ್ಲಿ ತೊಡಗಿಕೊಂಡಿದ್ದಾರೆ. ಅವರಿಗೆ ಸಿನಿಮಾ ರಂಗದ ಒಳ ಮತ್ತು ಹೊರ ಗೊತ್ತಿದೆ. ಹೀಗಾಗಿ ಸಿನಿಮಾ ರಂಗದ ವಿಚಾರ ಇಟ್ಟುಕೊಂಡೇ ಅವರು ವೆಬ್ ಸೀರಿಸ್​ ಮಾಡುತ್ತಿದ್ದಾರೆ.

‘ಸ್ಟಾರ್​ಡಂ’ನಲ್ಲಿ ರಣವೀರ್ ಸಿಂಗ್ ಹಾಗೂ ಶಾರುಖ್ ಖಾನ್ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ. ರಾಮ್ ಕಪೂರ್ ಪತ್ನಿ ಗೌತಮಿ ಕಪೂರ್ ಅವರು ಇದರಲ್ಲಿ ನಟಿಸಿದ್ದಾರೆ. ಮೂಲಗಳ ಪ್ರಕಾರ ರಣವೀರ್ ಹಾಗೂ ಶಾರುಖ್ ಖಾನ್ ಬೇರೆಬೇರೆ ಎಪಿಸೋಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಉಳಿದ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ