Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​

Shah Rukh Khan Fans Meet: ಶಾರುಖ್​ ಖಾನ್​ ಕೇವಲ ಕೈ ಕುಲುಕಿ, ಒಂದು ಸೆಲ್ಫಿ ನೀಡಿ ವಾಪಸ್​ ಹೋಗಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಆಗಿದ್ದೇ ಬೇರೆ.

Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
ಶಾರುಖ್​ ಫ್ಯಾನ್ಸ್​ ಮೀಟ್​
Follow us
TV9 Web
| Updated By: ಮದನ್​ ಕುಮಾರ್​

Updated on:Oct 12, 2022 | 7:45 AM

ನಟ ಶಾರುಖ್​ ಖಾನ್​ (Shah Rukh Khan) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರು ಒಂದು ಭರ್ಜರಿ ಕಮ್​ಬ್ಯಾಕ್​ ಸಲುವಾಗಿ ಕಾಯುತ್ತಿದ್ದಾರೆ. ಈ ನಡುವೆ ಅವರು ತಮ್ಮ ಅಭಿಮಾನಿಗಳನ್ನು ವಿಶೇಷ ರೀತಿಯಲ್ಲಿ ಭೇಟಿ (Shah Rukh Khan Fans Meet) ಮಾಡಿದ್ದಾರೆ. ಅಷ್ಟೇ ಅಲ್ಲದೇ, 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ಆತಿಥ್ಯ ನೀಡಿದ್ದಾರೆ. ಶಾರುಖ್​ ಖಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು, ಮಾತುಕಥೆ ನಡೆಸಿ ಖುಷಿಪಟ್ಟಿರುವ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಚೆನ್ನೈನ (Chennai) ಕೆಲವೇ ಕೆಲವು ಅಭಿಮಾನಿಗಳಿಗೆ ಈ ಅವಕಾಶ ಸಿಕ್ಕಿದೆ.

2018ರಲ್ಲಿ ಬಂದ ‘ಜೀರೋ’ ಸಿನಿಮಾ ಹೀನಾಯವಾಗಿ ಸೋತ ಬಳಿಕ ಶಾರುಖ್​ ಖಾನ್ ಅವರು ಒಂದು ಗ್ಯಾಪ್​ ತೆಗೆದುಕೊಂಡರು. ಆದರೆ ಈಗ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗೆ ಅವರು ಚೆನ್ನೈನಲ್ಲಿ ‘ಜವಾನ್​’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಆದರೆ ಶೂಟಿಂಗ್​ ಮುಗಿದ ಬಳಿಕ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆದ ಶಾರುಖ್ ಮಗಳು ಸುಹಾನಾ ಖಾನ್
Image
Shah Rukh Khan: ಶಾರುಖ್​ ಖಾನ್​ ಬಾಲಿವುಡ್​ಗೆ ಕಾಲಿಟ್ಟು ಕಳೆಯಿತು 30 ವರ್ಷ; 14 ಬಾರಿ ‘ಫಿಲ್ಮ್​ಫೇರ್’​ ಪಡೆದ ಕಿಂಗ್​ ಖಾನ್
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ಎಲ್ಲ ನಗರದಲ್ಲೂ ಶಾರುಖ್​ ಖಾನ್​ ಅವರಿಗೆ ಅಭಿಮಾನಿ ಸಂಘಗಳು ಇವೆ. ‘ಎಸ್​ಆರ್​ಕೆ ಚೆನ್ನೈ ಫ್ಯಾನ್ಸ್​ ಕ್ಲಬ್​’ ಸದಸ್ಯರು ತಮ್ಮ ನೆಚ್ಚಿನ ನಟನನ್ನು ಭೇಟಿ ಆಗಬೇಕು ಎಂದು ಬಯಸಿದ್ದರು. ಶಾರುಖ್​ ಅವರ ಮ್ಯಾನೇಜರ್​ ಬಳಿ ಹೋಗಿ ಅಭಿಮಾನಿ ಸಂಘದವರು ಮನವಿ ಮಾಡಿಕೊಂಡಿದ್ದರು. ಆ ವಿಚಾರ ತಿಳಿದ ಶಾರುಖ್​ ಅವರು ಒಪ್ಪಿಕೊಂಡರು. ಶೂಟಿಂಗ್​ ಮುಗಿದ ಬಳಿಕ ಎಲ್ಲರನ್ನೂ ಭೇಟಿ ಮಾಡುವುದಾಗಿ ತಿಳಿಸಿದರು.

ಶಾರುಖ್​ ಅವರು ಕೇವಲ ಕೈ ಕುಲುಕಿ, ಒಂದು ಸೆಲ್ಫಿ ನೀಡಿ ವಾಪಸ್​ ಹೋಗಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಆಗಿದ್ದೇ ಬೇರೆ. ಬಂದಿರುವ 20 ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಲಾಯಿತು. ಏನು ಬೇಕಾದರೂ ಆರ್ಡರ್​ ಮಾಡಿಕೊಂಡು ತಿನ್ನಬಹುದು ಎಂದು ಆಫರ್ ನೀಡಲಾಯಿತು. ಬಳಿಕ ಶಾರುಖ್​ ಖಾನ್​ ಬಂದು ಎಲ್ಲರನ್ನೂ ಭೇಟಿ ಮಾಡಿದರು. ಅಭಿಮಾನಿಗಳ ಜೊತೆ ಕುಳಿತು ಮಾತನಾಡಿದರು. ಎಲ್ಲರ ಜತೆಗೂ ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ತಂದಿದ್ದು ಗಿಫ್ಟ್​ಗಳನ್ನು ಸ್ವೀಕರಿಸಿದರು. ಇಷ್ಟೆಲ್ಲ ಸಮಯ ನೀಡಿದ್ದಕ್ಕೆ ಫ್ಯಾನ್ಸ್​ ಸಖತ್​ ಖುಷಿ ಆಗಿದ್ದಾರೆ.

‘ಜವಾನ್​’ ಮಾತ್ರವಲ್ಲದೇ ‘ಡಂಕಿ’, ‘ಪಠಾಣ್​’ ಮುಂತಾದ ಸಿನಿಮಾಗಳಲ್ಲಿ ಶಾರುಖ್​ ಖಾನ್​ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಅವರ ಕಮ್​ಬ್ಯಾಕ್​ ಸಿನಿಮಾವನ್ನು ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:45 am, Wed, 12 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ