AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ

ಶಾರುಖ್ ಖಾನ್, ಸುಹಾನಾ ಖಾನ್ ನಟನೆಯ ‘ಕಿಂಗ್’ ಸಿನಿಮಾದ ಪ್ಲ್ಯಾನ್ ತಲೆಕೆಳಗಾಗಿದೆ. ದುಬೈ ಬದಲು ಮುಂಬೈನಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಸಿನಿಮಾ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ
Shah Rukh Khan
ಮದನ್​ ಕುಮಾರ್​
|

Updated on: Mar 30, 2026 | 10:41 PM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ‘ಕಿಂಗ್’ (King) ಸಿನಿಮಾದ ಚಿತ್ರೀಕರಣಕ್ಕೆ ಅನಿರೀಕ್ಷಿತ ಅಡೆತಡೆ ಎದುರಾಗಿದೆ. ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು!

ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ ಒಂದು ವಾರಗಳ ಕಾಲ ‘ಕಿಂಗ್’ ಸಿನಿಮಾಗೆ ಚಿತ್ರೀಕರಣ ನಡೆಸಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಸಹ ಪಡೆಯಲಾಗಿತ್ತು. ಆದರೆ, ಯುದ್ಧದ ಭೀತಿಯಿಂದಾಗಿ ಪ್ಲ್ಯಾನ್ ಬದಲಾಗಿದೆ. ಸಿನಿಮಾದ ತಾರಾಗಣ ಮತ್ತು ತಾಂತ್ರಿಕ ತಂಡದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ದುಬೈ ಪ್ಲ್ಯಾನ್ ರದ್ದಾದ ಬೆನ್ನಲ್ಲೇ ಚಿತ್ರತಂಡ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ. ಮುಂಬೈನ ವಿಲೆ ಪಾರ್ಲೆ ಬಳಿಯ ಸ್ಟುಡಿಯೋದಲ್ಲಿ ಈಗ ಚಿತ್ರೀಕರಣ ನಡೆಯಲಿದೆ. ಅಲ್ಲಿನ ಪ್ರೊಡಕ್ಷನ್ ವಿನ್ಯಾಸ ತಂಡವು ಮರುಭೂಮಿಯಂತಹ ಬೃಹತ್ ಸೆಟ್ ನಿರ್ಮಿಸುತ್ತಿದೆ. ಇಲ್ಲಿ ಶಾರುಖ್ ಖಾನ್ ಅವರ ಸಾಹಸ ದೃಶ್ಯಗಳು ಮತ್ತು ಚೇಸಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುವುದು.

ದುಬೈನಲ್ಲಿ ಶಾರುಖ್ ಖಾನ್ ಆ್ಯಕ್ಷನ್ ದೃಶ್ಯಗಳಲ್ಲಿ ಭಾಗಿಯಾಗಬೇಕಿತ್ತು. ಸುಹಾನಾ ಖಾನ್ ಮತ್ತು ಅನಿಲ್ ಕಪೂರ್ ಅವರು ಮರುಭೂಮಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳಬೇಕಿತ್ತು. ಈ ಚಿತ್ರದಲ್ಲಿ ಇವರಲ್ಲದೇ ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚನ್, ರಾಣಿ ಮುಖರ್ಜಿ, ಅಭಯ್ ವರ್ಮಾ, ಅರ್ಷದ್ ವಾರ್ಸಿ ಮತ್ತು ರಾಘವ್ ಜುಯಲ್ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

ಶಾರುಖ್ ಒಡೆತನದ ‘ರೆಡ್ ಚಿಲ್ಲಿಸ್ ಎಂಟರ್ಟೈನ್‌ಮೆಂಟ್’ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ವೃತ್ತಿಪರ ಹಂತಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಪಾಯಕಾರಿ ಜಗತ್ತಿನಲ್ಲಿ ಬದುಕುಳಿಯುವುದು ಹೇಗೆ ಎಂಬ ಬಗ್ಗೆ ಯುವತಿಯೊಬ್ಬಳಿಗೆ ಅವರು ತರಬೇತಿ ನೀಡುವ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ ಎನ್ನಲಾಗಿದೆ. ಈ ಬಹುನಿರೀಕ್ಷಿತ ಚಿತ್ರವು ಕ್ರಿಸ್‌ಮಸ್ ವೇಳೆಗೆ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!