AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟೇ ಟ್ರೋಲ್ ಆದರೂ ಕಡಿಮೆ ಆಗಿಲ್ಲ ಶಾರುಖ್ ಖಾನ್ ಖ್ಯಾತಿ; ಸ್ಟಾರ್ ನಟನ ಅಪರೂಪದ ಸಾಧನೆ

ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್, ಸಾರ್ವಕಾಲಿಕ 50 ಶ್ರೇಷ್ಠ ನಟರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ. ಈ ಮ್ಯಾಗಜಿನ್​ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಹೀರೋ ಶಾರುಖ್ ಖಾನ್ ಅನ್ನೋದು ವಿಶೇಷ.

ಎಷ್ಟೇ ಟ್ರೋಲ್ ಆದರೂ ಕಡಿಮೆ ಆಗಿಲ್ಲ ಶಾರುಖ್ ಖಾನ್ ಖ್ಯಾತಿ; ಸ್ಟಾರ್ ನಟನ ಅಪರೂಪದ ಸಾಧನೆ
ಶಾರುಖ್
TV9 Web
| Edited By: |

Updated on:Dec 21, 2022 | 9:25 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. 2018ರಲ್ಲಿ ತೆರೆಗೆ ಬಂದ ‘ಜೀರೋ’ ಸಿನಿಮಾ ಬಳಿಕ ಶಾರುಖ್ ಖಾನ್ ಅವರು ನಟನೆಯಿಂದ ಹಿಂದೆ ಸರಿದರು. ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎನ್ನುವಾಗಲೇ ಮಗ ಆರ್ಯನ್ ಖಾನ್ ಡ್ರಗ್​ ಕೇಸ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತು. ಈಗ ‘ಪಠಾಣ್​’ ಚಿತ್ರದ (Pathan Movie) ‘ಬೇಷರಂ ರಂಗ್​..’ ಹಾಡಿನ ವಿವಾದದಿಂದ ಶಾರುಖ್ ಖಾನ್ ಟೀಕೆಗೆ ಒಳಗಾಗುತ್ತಿದ್ದಾರೆ. ಆದರೆ, ಅವರ ಜನಪ್ರಿಯತೆ ಕೊಂಚವೂ ತಗ್ಗಿಲ್ಲ. ಇದಕ್ಕೆ ಹೊಸ ಸಾಕ್ಷ್ಯ ಸಿಕ್ಕಿದೆ.

ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್, ಸಾರ್ವಕಾಲಿಕ 50 ಶ್ರೇಷ್ಠ ನಟರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ. ಈ ಮ್ಯಾಗಜಿನ್​ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಹೀರೋ ಶಾರುಖ್ ಖಾನ್ ಅನ್ನೋದು ವಿಶೇಷ. ಶಾರುಖ್ ಖಾನ್ ಅವರ ಜನಪ್ರಿಯತೆಗೆ ಸಿಕ್ಕ ಸಾಕ್ಷಿಯಾಗಿದೆ. ಶಾರುಖ್ ಖಾನ್ ಮಾಡಿದ ಅಪರೂಪದ ಸಾಧನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪಟ್ಟಿಯಲ್ಲಿ ಹಾಲಿವುಡ್​ನ ಅನೇಕ ಹೀರೋಗಳ ಹೆಸರು ಇದೆ.

ಶಾರುಖ್ ಖಾನ್ ಮಾಡಿದ ಸಾಧನೆ ವಿಚಾರದ ಬಗ್ಗೆ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ. ‘ಯಾರು ಎಷ್ಟೇ ವಿವಾದ ಸೃಷ್ಟಿ ಮಾಡಬಹುದು. ಆದರೆ, ಶಾರುಖ್ ಖಾನ್ ಅವರ ಖ್ಯಾತಿ ಕಡಿಮೆ ಆಗುವುದಿಲ್ಲ’ ಎಂದಿದ್ದಾರೆ  ಫ್ಯಾನ್ಸ್.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರ 2023ರ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಧರಿಸಿದ್ದು ವಿವಾದ ಆಗಿತ್ತು. ಅನೇಕರು ಈ ಬಗ್ಗೆ ಅಪಸ್ವರ ತೆಗೆದಿದ್ದರು. ಕೆಲ ಮುಸ್ಲಿಂ ಸಮುದಾಯದವರೂ ಈ ಚಿತ್ರದ ಟೈಟಲ್​ ಬಗ್ಗೆ ಟೀಕೆ ಮಾಡಿದ್ದರು. ಪಠಾಣರಿಗೆ ಅವಮಾನ ಮಾಡುವ ಕೆಲಸ ಆಗುತ್ತಿದೆ ಎಂದು ಕೆಲವರು ಹೇಳಿದ್ದರು. ಸಿನಿಮಾ ರಿಲೀಸ್​ಗೂ ಮೊದಲೇ ಬೈಕಾಟ್​ ಟ್ರೆಂಡ್ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Wed, 21 December 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ