ಶಾರುಖ್ ಖಾನ್ ಜಗತ್ತಿನ ನಾಲ್ಕನೇ ಶ್ರೀಮಂತ ನಟ; ಅಬ್ಬಬ್ಬಾ ಅವರ ಒಟ್ಟೂ ಆಸ್ತಿ ಇಷ್ಟೊಂದಾ?

Shah Rukh Khan NetWorth: ಶಾರುಖ್ ಖಾನ್ ಅವರು ಈವರೆಗೆ 90ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿವೆ. 3 ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದ್ದಾರೆ.

ಶಾರುಖ್ ಖಾನ್ ಜಗತ್ತಿನ ನಾಲ್ಕನೇ ಶ್ರೀಮಂತ ನಟ; ಅಬ್ಬಬ್ಬಾ ಅವರ ಒಟ್ಟೂ ಆಸ್ತಿ ಇಷ್ಟೊಂದಾ?
ಶಾರುಖ್ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 12, 2023 | 9:19 AM

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರು ನಟನೆಯಿಂದ ನಾಲ್ಕು ವರ್ಷ ದೂರವೇ ಇದ್ದರು. ಈಗ ‘ಪಠಾಣ್​’ ಸಿನಿಮಾ (Pathan Movie) ಮೂಲಕ ಅವರು ದೊಡ್ಡ ಪರದೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಮಧ್ಯೆ ಶಾರುಖ್ ಖಾನ್ ಫ್ಯಾನ್ಸ್ ಖುಷಿಪಡುವ ವಿಚಾರವೊಂದು ಹೊರಬಿದ್ದಿದೆ. ವಿಶ್ವದ ನಾಲ್ಕನೇ ಶ್ರೀಮಂತ ನಟನಾಗಿ ಶಾರುಖ್ ಹೊರಹೊಮ್ಮಿದ್ದಾರೆ. ಟಾಪ್​ 10ರಲ್ಲಿ ಇರುವ ಭಾರತದ ಏಕೈಕ ಹೀರೋ ಶಾರುಖ್ ಎಂಬುದು ವಿಶೇಷ.

ಶಾರುಖ್ ಖಾನ್ ಅವರು ಈವರೆಗೆ 90ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿವೆ. 3 ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದ್ದಾರೆ. ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡ ನಟರಲ್ಲಿ ಶಾರುಖ್ ಕೂಡ ಒಬ್ಬರು. ಅವರು ಈಗ ವಿಶ್ವದ ನಾಲ್ಕನೇ ಶ್ರೀಮಂತ ಆಗಿರುವುದು ಅನೇಕರಿಗೆ ಖುಷಿ ತಂದಿದೆ.

ಇದನ್ನೂ ಓದಿ
Image
Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್
Image
Pathan Trailer: ಶಾರುಖ್ ಖಾನ್ ಚಿತ್ರಕ್ಕೆ ಮತ್ತೊಂದು ಪೆಟ್ಟು; ಆನ್​​ಲೈನ್​ನಲ್ಲಿ ‘ಪಠಾಣ್​’ ಚಿತ್ರದ ಟ್ರೇಲರ್ ಲೀಕ್​?
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ಟ್ವಿಟರ್​ನಲ್ಲಿ ವರ್ಲ್ಡ್​ ಆಫ್ ಸ್ಟಾಟಿಸ್ಟಿಕ್ಸ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ವಿಶ್ವದ ಶ್ರೀಮಂತ ನಟರ ಸಾಲಿನಲ್ಲಿ ಹಾಲಿವುಡ್​ನ ಜೆರ್ರಿ ಸೈನ್​ಫಿಲ್ಡ್​, ಟೈಲರ್ ಪೆರ್ರಿ, ಡ್ವೇನ್ ಜಾನ್ಸನ್​ ಅನುಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಶಾರುಖ್ ಖಾನ್ ಇದ್ದಾರೆ. ಅವರ ಒಟ್ಟಾರೆ ಆಸ್ತಿ 6,282 ಕೋಟಿ ರೂಪಾಯಿ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದ 10 ನಟರ ಪೈಕಿ 9 ಮಂದಿ ಹಾಲಿವುಡ್​ನವರು. ಶಾರುಖ್ ಮಾತ್ರ ಬಾಲಿವುಡ್​ನವರು.

ಇದನ್ನೂ ಓದಿ: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್

ಶಾರುಖ್ ಖಾನ್ ಸಿನಿಮಾದಲ್ಲಿ ನಟಿಸುವುದರ ಜತೆಗೆ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಆ ಮೂಲಕ ಅವರು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅವರು ಐಪಿಎಲ್​​ ತಂಡ ಹೊಂದಿದ್ದಾರೆ. ಕೋಲ್ಕತ್ತ ನೈಟ್​ ರೈಡರ್ಸ್ ಇವರ ಒಡೆತನದಲ್ಲಿದೆ. ಇದರಿಂದಲೂ ಸಾಕಷ್ಟು ಹಣ ಬರುತ್ತದೆ. ಅವರು ಹಲವು ಬ್ರ್ಯಾಂಡ್​ಗಳಿಗೆ ಅಂಬಾಸಿಡರ್ ಆಗಿದ್ದಾರೆ.

‘ಪಠಾಣ್’ ರಿಲೀಸ್​ಗೆ  ರೆಡಿ

‘ಪಠಾಣ್​’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜನವರಿ 25ರಂದು ಚಿತ್ರ ರಿಲೀಸ್ ಆಗುತ್ತಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿರುವುದು ವಿಶೇಷ. ಈ ಸಿನಿಮಾದಲ್ಲಿ ರಾ ಏಜೆಂಟ್ ಆಗಿ ಶಾರುಖ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:04 am, Thu, 12 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್