ಶಾರುಖ್ ಮುಂದಿನ ಸಿನಿಮಾಕ್ಕಾಗಿ ಕಾಯಬೇಕು ಇನ್ನೂ ಎರಡು ವರ್ಷ; ಫ್ಯಾನ್ಸ್​ಗೆ ನಿರಾಸೆ

ಬಾಲಿವುಡ್​ನಲ್ಲಿ ಶಾರುಖ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರ ಮಕ್ಕಳು ಕೂಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಶಾರುಖ್​ ಖಾನ್​ ಅವರ ಮಗಳು ಸುಹಾನಾ ಖಾನ್​ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಜೊತೆ ಶಾರುಖ್ ಮಾಡಲಿರುವ ಸಿನಿಮಾ 2026ರಲ್ಲಿ ರಿಲೀಸ್ ಆಗಲಿದೆ.

ಶಾರುಖ್ ಮುಂದಿನ ಸಿನಿಮಾಕ್ಕಾಗಿ ಕಾಯಬೇಕು ಇನ್ನೂ ಎರಡು ವರ್ಷ; ಫ್ಯಾನ್ಸ್​ಗೆ ನಿರಾಸೆ
ಶಾರುಖ್-ಸುಹಾನಾ
Follow us
|

Updated on: Sep 05, 2024 | 8:04 AM

ಶಾರುಖ್ ಖಾನ್ ಅವರು 2018ರಲ್ಲಿ ‘ಜೀರೋ’ ಸಿನಿಮಾ ಮಾಡಿದ ಬಳಿಕ ಅವರ ನಟನೆಯ ಸಿನಿಮಾ ರಿಲೀಸ್ ಆಗಿದ್ದು 2023ರಲ್ಲಿ. ಆ ವರ್ಷ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳು ರಿಲೀಸ್ ಆದವು. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿತ್ತು. ಆದರೆ, ಈಗ ಅಭಿಮಾನಿಗಳಿಗೆ ಬೇಸರ ಆಗುವಂಥ ಸುದ್ದಿ ಒಂದು ಸಿಕ್ಕಿದೆ. ಶಾರುಖ್ ಖಾನ್ ಅವರ ಮುಂದಿನ ಸಿನಿಮಾ ಇನ್ನು ರಿಲೀಸ್ ಆಗೋದು 2026ರಲ್ಲಿ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಬೇಸರಗೊಂಡಿದ್ದಾರೆ.

ಶಾರುಖ್ ಖಾನ್ ಅವರು ಮಗಳು ಸುಹಾನಾ ಖಾನ್ ಜೊತೆ ಸಿನಿಮಾ ಮಾಡುತ್ತಿದ್ದು, ಇದಕ್ಕೆ ‘ಕಿಂಗ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಅಭಿಷೇಕ್ ಬಚ್ಚನ್ ಅವುರ ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಜನವರಿ 2025ರಲ್ಲಿ ಆರಂಭ ಆಗಲಿದೆ. ಸಿನಿಮಾ ರಿಲೀಸ್ ಆಗೋದು 2026ರಲ್ಲಿ ಎಂದು ವರದಿ ಆಗಿದೆ.

ಸದ್ಯ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರದ ಶೂಟಿಂಗ್ ಯುರೋಪ್​ನಲ್ಲಿ ನಡೆಯಲಿದೆ. ಅಲ್ಲಿನ ಜನವರಿ ವಾತಾವರಣದಲ್ಲೇ ಶೂಟ್ ಮಾಡುವ ಅಗತ್ಯತೆ ಇದೆ. ಈ ಕಾರಣದಿಂದಲೇ ನಿರ್ದೇಶಕ ಸುಜಯ್ ಘೋಷ್ ಅವರು ಜನವರಿಯಲ್ಲಿ ಸಿನಿಮಾ ಶೂಟ್ ಆರಂಭಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ:‘ಚಾರ್ ಬೋಟಲ್ ವೋಡ್ಕಾ‘ ಹಾಡು ಬರೆದಾಗ ಹನಿ ಸಿಂಗ್‌ಗೆ ಎಚ್ಚರಿಕೆ ನೀಡಿದ್ದ ಶಾರುಖ್ ಖಾನ್ 

ಶಾರುಖ್ ಖಾನ್​ಗೆ ಜನವರಿ ಲಕ್ಕಿ. 2023ರ ಜನವರಿಯಲ್ಲಿ ರಿಲೀಸ್ ಆದ ‘ಪಠಾಣ್’ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಹೀಗಾಗಿ, 2026ರ ಜನವರಿಯಲ್ಲಿ ‘ಕಿಂಗ್’ ಚಿತ್ರವನ್ನು ರಿಲೀಸ್ ಮಾಡುವ ಆಲೋಚನೆ ಶಾರುಖ್ ಖಾನ್​ಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅಭಿಷೇಕ್ ಅವರನ್ನು ವಿಲನ್ ಪಾತ್ರದಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ