Shah Rukh Khan: 56ನೇ ವಯಸ್ಸಿನಲ್ಲೂ ಕಟ್ಟುಮಸ್ತಾಗಿದೆ ಶಾರುಖ್​ ಬಾಡಿ; ಶರ್ಟ್​ಲೆಸ್​ ಫೋಟೋ ವೈರಲ್​

Shah Rukh Khan Shirtless Photo: 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿ ಆಗಿದ್ದಾರೆ.

Shah Rukh Khan: 56ನೇ ವಯಸ್ಸಿನಲ್ಲೂ ಕಟ್ಟುಮಸ್ತಾಗಿದೆ ಶಾರುಖ್​ ಬಾಡಿ; ಶರ್ಟ್​ಲೆಸ್​ ಫೋಟೋ ವೈರಲ್​
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 25, 2022 | 8:47 PM

ನಟ ಶಾರುಖ್​ ಖಾನ್​ (Shah Rukh Khan) ಅವರು ಸತತ ಸೋಲು ಅನುಭವಿಸಿದ ಬಳಿಕ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಲು ಸಜ್ಜಾಗುತ್ತಿದ್ದಾರೆ. ಹೊಸ ಸಿನಿಮಾಗಳ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ. ಈಗ ಅವರು ನಟಿಸುತ್ತಿರುವ ‘ಪಠಾಣ್​’ (Pathaan), ‘ಡಂಕಿ’, ‘ಜವಾನ್​’ ಮುಂತಾದ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಹೆಚ್ಚು ಮಾಡುವ ರೀತಿಯಲ್ಲಿ ಶಾರುಖ್​ ಖಾನ್​ ಅವರು ಒಂದು ಹೊಸ ಫೋಟೋ (Shah Rukh Khan Photo) ಹಂಚಿಕೊಂಡಿದ್ದಾರೆ. ಅದನ್ನು ಕಂಡು ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ. ಈ ಫೋಟೋದಲ್ಲಿ ಶಾರುಖ್​ ಖಾನ್​ ಅವರು ಶರ್ಟ್​ಲೆಸ್​ ಆಗಿ ಕಾಣಿಸಿಕೊಂಡಿ​ದ್ದಾರೆ. ಅವರ ಕಟ್ಟುಮಸ್ತಾದ ಬಾಡಿ ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಅಚ್ಚರಿ ಆಗಿದೆ. ಕಮೆಂಟ್​ಗಳ ಮೂಲಕ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

ಶಾರುಖ್​ ಖಾನ್​ ಅವರಿಗೆ ಈಗ 56 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸುತ್ತಾರೆ. ತಮ್ಮನ್ನು ತೆರೆಮೇಲೆ ನೋಡುವ ಅಭಿಮಾನಿಗಳನ್ನು ಖುಷಿಪಡಿಸಲು ಸಿಕ್ಸ್ ಪ್ಯಾಕ್ಸ್​ ಮಾಡಿಕೊಂಡು ಶಾರುಖ್​ ಖಾನ್​ ಅವರು ಕ್ಯಾಮೆರಾ ಎದುರಿಸಿದ್ದಾರೆ. ಅಂದಹಾಗೆ, ಅವರು ಈ ರೀತಿ ದೇಹ ಹುರಿಗೊಳಿಸಿಕೊಂಡಿರುವುದು ‘ಪಠಾಣ್​’ ಚಿತ್ರಕ್ಕಾಗಿ. ಆ ಸಿನಿಮಾಗಾಗಿ ತಾವೂ ಕೂಡ ಕಾಯುತ್ತಿರುವುದಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆದ ಶಾರುಖ್ ಮಗಳು ಸುಹಾನಾ ಖಾನ್
Image
Shah Rukh Khan: ಶಾರುಖ್​ ಖಾನ್​ ಬಾಲಿವುಡ್​ಗೆ ಕಾಲಿಟ್ಟು ಕಳೆಯಿತು 30 ವರ್ಷ; 14 ಬಾರಿ ‘ಫಿಲ್ಮ್​ಫೇರ್’​ ಪಡೆದ ಕಿಂಗ್​ ಖಾನ್
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ ಅಭಿನಯಿಸುತ್ತಿದ್ದಾರೆ. ಖ್ಯಾತ ನಟ ಜಾನ್​ ಅಬ್ರಹಾಂ ಕೂಡ ಈ ಚಿತ್ರದಲ್ಲಿ ಒಂದು ಮುಖ್ಯವಾದ ಪಾತ್ರ ಮಾಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ. 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಶಾರುಖ್​ ಖಾನ್​ ನಟಿಸುತ್ತಿದ್ದಾರೆ. ಆ ಎಲ್ಲ ಚಿತ್ರಗಳು 2023ರಲ್ಲಿ ತೆರೆಗೆ ಬರಲಿವೆ. ಹಾಗಾಗಿ 2023ರ ಪೂರ್ತಿ ವರ್ಷ ಶಾರುಖ್​ಗೆ ಮೀಸಲು ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. 2018ರಲ್ಲಿ ‘ಜೀರೋ’ ಸಿನಿಮಾ ಸೋತ ಬಳಿಕ ಅವರು ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ. ಹಾಗಾಗಿ ಹೊಸ ಚಿತ್ರಕ್ಕಾಗಿ ಶಾರುಖ್​ ಫ್ಯಾನ್ಸ್​ ಕಾಯುತ್ತಿದ್ದಾರೆ.

‘ಓಂ ಶಾಂತಿ ಓಂ’, ‘ಹ್ಯಾಪಿ ನ್ಯೂ ಇಯರ್​’, ‘ಚೆನ್ನೈ ಎಕ್ಸ್​ಪ್ರೆಸ್​’ ಬಳಿಕ ಶಾರುಖ್​ ಮತ್ತು ದೀಪಿಕಾ ಪಡುಕೋಣೆ ಅವರು ಜೊತೆಯಾಗಿ ನಟಿಸುತ್ತಿರುವ ಚಿತ್ರ ‘ಪಠಾಣ್’. ನಾಲ್ಕನೇ ಬಾರಿ ಒಂದಾಗಿರುವ ಈ ಜೋಡಿ ಮೇಲೆ ಅಭಿಮಾನಿಗಳಿಗೆ ಭರವಸೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ