AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಜೂಹಿ ಚಾವ್ಲಾ ಪುತ್ರಿ ಬಗ್ಗೆ ಹೆಮ್ಮೆಯ ಮಾತುಗಳನ್ನು ಆಡಿದ ನಟ ಶಾರುಖ್​ ಖಾನ್​; ಫೋಟೋ ವೈರಲ್​

Juhi Chawla Daughter: ಜೂಹಿ ಚಾವ್ಲಾ ಪುತ್ರಿ ಬಗ್ಗೆ ಶಾರುಖ್​ ಖಾನ್​ ಅವರು ಹೆಮ್ಮೆಯಿಂದ ಟ್ವೀಟ್​ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋ ವೈರಲ್​ ಆಗಿದೆ.

Shah Rukh Khan: ಜೂಹಿ ಚಾವ್ಲಾ ಪುತ್ರಿ ಬಗ್ಗೆ ಹೆಮ್ಮೆಯ ಮಾತುಗಳನ್ನು ಆಡಿದ ನಟ ಶಾರುಖ್​ ಖಾನ್​; ಫೋಟೋ ವೈರಲ್​
ಶಾರುಖ್ ಖಾನ್, ಜಾನ್ವಿ ಮೆಹ್ತಾ
ಮದನ್​ ಕುಮಾರ್​
|

Updated on: May 19, 2023 | 5:00 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಒಂದಿಲ್ಲೊಂದು ಕಾರಣಕ್ಕೆ ಪ್ರತಿ ದಿನ ಸುದ್ದಿ ಆಗುತ್ತಾರೆ. ಸಿನಿಮಾಗಳ ಜೊತೆಯಲ್ಲಿ ಅವರ ವೈಯಕ್ತಿಕ ವಿಚಾರಗಳು ಕೂಡ ಸದ್ದು ಮಾಡುತ್ತವೆ. ಎಲ್ಲರಿಗೂ ತಿಳಿದಿರುವಂತೆ ಶಾರುಖ್​ ಖಾನ್​ ಅವರ ಸ್ನೇಹಿತರ ಬಳಗ ತುಂಬ ದೊಡ್ಡದು. ಚಿತ್ರರಂಗದಲ್ಲಿ ಅವರಿಗೆ ಅನೇಕ ಸ್ನೇಹಿತರಿದ್ದಾರೆ. ಆ ಪೈಕಿ ನಟಿ ಜೂಹಿ ಚಾವ್ಲಾ (Juhi Chawla) ಜೊತೆಯೂ ಅವರಿಗೆ ಉತ್ತಮ ಒಡನಾಟ ಇದೆ. ಈ ಹಿಂದೆ ಶಾರುಖ್​ ಪುತ್ರ ಆರ್ಯನ್​ ಖಾನ್​ ಜೈಲು ಸೇರಿದ್ದಾಗ ಜೂಹಿ ಚಾವ್ಲಾ ಅವರು ಸಹಾಯಕ್ಕೆ ಬಂದಿದ್ದರು. ಈಗ ಜೂಹಿ ಚಾವ್ಲಾ ಪುತ್ರಿ ಬಗ್ಗೆ ಶಾರುಖ್​ ಖಾನ್​ ಅವರು ಹೆಮ್ಮೆಯಿಂದ ಟ್ವೀಟ್​ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋ ವೈರಲ್​ ಆಗಿದೆ. ಅಷ್ಟಕ್ಕೂ ಜೂಹಿ ಚಾವ್ಲಾ ಪುತ್ರಿ (Juhi Chawla Daughter) ಬಗ್ಗೆ ಅವರು ಈಗ ಟ್ವೀಟ್​ ಮಾಡಲು ಕಾರಣ ಏನು? ಇಲ್ಲಿದೆ ಉತ್ತರ..

ಸೆಲೆಬ್ರಿಟಿಗಳ ಮಕ್ಕಳಿಗೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಸಿಗುತ್ತದೆ ಎಂಬುದು ನಿಜ. ಹಾಗಂತ ಅವರು ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಮಾಡುವುದಿಲ್ಲ. ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದು ಬರುತ್ತಾರೆ. ಈ ವಿಚಾರದಲ್ಲಿ ಜೂಹಿ ಚಾವ್ಲಾ ಮಗಳು ಜಾನ್ವಿ ಮೆಹ್ತಾ ಕೂಡ ಹಿಂದೆ ಬಿದ್ದಿಲ್ಲ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಜಾನ್ವಿ ಮೆಹ್ತಾ ಅವರು ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಪದವಿ ಶಿಕ್ಷಣ ಪೂರೈಸಿದ್ದಾರೆ. ಆ ಸಂಭ್ರಮದ ಫೋಟೋವನ್ನು ಜೂಹಿ ಚಾವ್ಲಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ. ಇದನ್ನು ಶಾರುಖ್​ ಖಾನ್​​ ರಿಟ್ವೀಟ್​ ಮಾಡಿಕೊಂಡಿದ್ದು, ‘ಇದು ಅಮೋಘ. ಸೆಲೆಬ್ರೇಟ್​ ಮಾಡಲು ಆಕೆ ವಾಪಸ್​ ಬರುವುದನ್ನೇ ಕಾಯುತ್ತಿದ್ದೇನೆ. ತುಂಬ ಹೆಮ್ಮೆ ಎನಿಸುತ್ತಿದೆ. ಲವ್​ ಯೂ ಜಾನ್ಸ್​’ ಎಂದು ಬರೆದುಕೊಂಡಿದ್ದಾರೆ.

ಶಾರುಖ್​ ಖಾನ್​ ಕುಟುಂಬಕ್ಕೆ ನೆರವಾಗಿದ್ದ ಜೂಹಿ ಚಾವ್ಲಾ:

ಡ್ರಗ್ಸ್ ಪಾರ್ಟಿ ಮಾಡಿದ ಆರೋಪದಲ್ಲಿ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಶಾರುಖ್​ ಖಾನ್​ ಕುಟುಂಬಕ್ಕೆ ಮುಜುಗರ ಆಗಿತ್ತು. ಹಲವು ದಿನಗಳ ಕಾಲ ಆರ್ಯನ್​ ಖಾನ್​ ಅವರು ಜೈಲಿನಲ್ಲಿ ಇರಬೇಕಾಗಿತ್ತು. ಜಾಮೀನು ಪಡೆಯುವ ಸಂದರ್ಭದಲ್ಲಿ ಜೂಹಿ ಚಾವ್ಲಾ ಅವರು ಒಂದು ಲಕ್ಷ ರೂಪಾಯಿ ಬಾಂಡ್​ಗೆ ಸಹಿ ಹಾಕಿದ್ದರು. ಈ ಎರಡೂ ಕುಟುಂಬದ ನಡುವಿನ ಸ್ನೇಹ ಯಾವ ರೀತಿ ಇದೆ ಎಂಬುದಕ್ಕೆ ಆ ಘಟನೆ ಸಾಕ್ಷಿ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು