Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

Pathaan Movie Trailer | Burj Khalifa: ಶಾರುಖ್​ ಖಾನ್​ ಅವರಿಗೆ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಫ್ಯಾನ್ಸ್​ ಇದ್ದಾರೆ. ದುಬೈನಲ್ಲೂ ಅವರನ್ನು ಇಷ್ಟ ಪಡುವ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Jan 15, 2023 | 10:57 AM

ನಟ ಶಾರುಖ್​ ಖಾನ್​ (Shah Rukh Khan) ಅವರು ನಾಲ್ಕು ವರ್ಷಗಳ ಬಳಿಕ ಕಮ್​ಬ್ಯಾಕ್​ ಮಾಡುತ್ತಿರುವುದರಿಂದ ನಿರೀಕ್ಷೆ ಜೋರಾಗಿದೆ. ಅವರು ಅಭಿನಯಿಸಿರುವ ‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್​ ಆಗಲು ಸಜ್ಜಾಗಿದೆ. ಈ ನಡುವೆ ಈ ಚಿತ್ರಕ್ಕೆ ಒಂದು ವರ್ಗದ ಜನರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದಾಗಿನಿಂದ ಕೆಲವು ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸುತ್ತಲೇ ಇವೆ. ‘ಪಠಾಣ್​’ ಚಿತ್ರ (Pathaan Movie) ಬಿಡುಗಡೆ ಆಗಬಾರದು ಎಂದು ಕೆಲವರು ಪಟ್ಟು ಹಿಡಿದ್ದಿದ್ದಾರೆ. ಭಾರತದಲ್ಲಿ ಇಷ್ಟೆಲ್ಲ ವಿರೋಧ ವ್ಯಕ್ತವಾಗುತ್ತಿರುವಾಗಲೇ ಶಾರುಖ್​ ಖಾನ್​ ಅವರು ದುಬೈಗೆ (Dubai) ತೆರಳಿ ತಮ್ಮ ಸಿನಿಮಾದ ಪ್ರಚಾರ ಮಾಡಿದ್ದಾರೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ‘ಪಠಾಣ್​’ ಸಿನಿಮಾದ ಟ್ರೇಲರ್​ ಪ್ರದರ್ಶನ ಮಾಡಲಾಗಿದೆ.

ಶಾರುಖ್​ ಖಾನ್​ ಅವರಿಗೆ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಫ್ಯಾನ್ಸ್​ ಇದ್ದಾರೆ. ದುಬೈನಲ್ಲೂ ಅವರನ್ನು ಇಷ್ಟ ಪಡುವ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ದುಬೈ ಪ್ರವಾಸೋದ್ಯಮ ಇಲಾಖೆ ಜೊತೆಗೆ ಶಾರುಖ್​ ಉತ್ತಮ ನಂಟು ಹೊಂದಿದ್ದಾರೆ. ಅವರ ಸಿನಿಮಾಗಳು ಅಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತವೆ. ಹಾಗಾಗಿ ದುಬೈನಲ್ಲಿ ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಪ್ರಚಾರ ಮಾಡಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​

ವಿಶ್ವದ ಅತಿ ಎತ್ತರದ ಕಟ್ಟಡ ಎನಿಸಿಕೊಂಡಿರುವ ಬುರ್ಜ್​ ಖಲೀಫಾ ಮೇಲೆ ‘ಪಠಾಣ್​’ ಚಿತ್ರದ ಟ್ರೇಲರ್​ ಬಿತ್ತರ ಆಗುತ್ತಿರುವುದನ್ನು ಶಾರುಖ್​ ಖಾನ್​ ಅವರು ಕಣ್ತುಂಬಿಕೊಂಡಿದ್ದಾರೆ. ಅಲ್ಲದೇ, ಸಿನಿಮಾದ ಒಂದೆರಡು ಡೈಲಾಗ್​ಗಳನ್ನು ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ದುಬೈನಲ್ಲಿ ನಡೆದ ಈ ಪ್ರಚಾರ ಕಾರ್ಯಕ್ರಮದ ವಿಡಿಯೋಗಳನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: Shah Rukh Khan: ಎಷ್ಟೇ ವಿರೋಧ ಬಂದ್ರೂ ಜಗ್ಗದ ಶಾರುಖ್​ ಖಾನ್​; ‘ಪಠಾಣ್​’ ಟೈಟಲ್​ ಬದಲಾಗಬೇಕು ಎಂದವರಿಗೆ ಇಲ್ಲಿದೆ ಉತ್ತರ

‘ಪಠಾಣ್​’ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಹಲವು ದೇಶಗಳಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ಶಾರುಖ್​ ಖಾನ್​ ಅವರು ಈ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​ ಮಾಡಿಕೊಂಡು ಕಷ್ಟಪಟ್ಟಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ಅವರು ನಟಿಸಿದ್ದಾರೆ. ‘ಪಠಾಣ್​’ ಟ್ರೇಲರ್​ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

View this post on Instagram

A post shared by Maha (@mahasrk1)

ಈ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ‘ಪಠಾಣ್​’ ರಿಲೀಸ್​ ಆಗುತ್ತಿರುವುದರಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್ ಅವರು ಜೋಡಿಯಾಗಿ ನಟಿಸಿರುವ ನಾಲ್ಕನೇ ಸಿನಿಮಾ ಇದು. ಆ ಕಾರಣದಿಂದಲೂ ‘ಪಠಾಣ್​’ ಹೈಪ್​ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:54 am, Sun, 15 January 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ