‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Dunki Movie Budget: ‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡಿದವರನ್ನೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?
ಶಾರುಖ್​ ಖಾನ್​
Follow us
|

Updated on: Dec 27, 2023 | 6:29 PM

ನಟ ಶಾರುಖ್​ ಖಾನ್​ ಅವರು ‘ಡಂಕಿ’ (Dunki) ಸಿನಿಮಾದಲ್ಲಿ ತಾಪ್ಸಿ ಪನ್ನು, ವಿಕ್ಕಿ ಕೌಶಲ್​ ಮುಂತಾದವರ ಜೊತೆ ತೆರೆ ಹಂಚಿಕೊಂಡಿದ್ದಾರೆ. ನಿರೀಕ್ಷಿಸಿದ ಮಟ್ಟದಲ್ಲಿ ಈ ಸಿನಿಮಾ ಕಲೆಕ್ಷನ್​ ಮಾಡಿಲ್ಲ. ಹಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ 130 ಕೋಟಿ ರೂಪಾಯಿ ದಾಟುವಲ್ಲಿ ಯಶಸ್ವಿ ಆಗಿದೆ. ಅದೇ ಖುಷಿಯಲ್ಲಿ ಶಾರುಖ್​ ಖಾನ್​ (Shah Rukh Khan) ಅವರು ಅಭಿಮಾನಿಗಳ ಜೊತೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಬಜೆಟ್​ (Dunki Movie Budget) ಬಗ್ಗೆ ಪ್ರಶ್ನೆ ಮಾಡಿದವರಿಗೆ ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಡಂಕಿ ಮಾಡಿದವರ ಬಳಿಯೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ಈ ಪ್ರಶ್ನೆಗೆ ಶಾರುಖ್​ ಖಾನ್​ ಅವರು ನಿಖರ ಉತ್ತರ ನೀಡಿಲ್ಲ.

Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

‘ಅಣ್ಣ.. ಯಾರದ್ದು ಬಿಸ್ನೆಸ್​ ಇದೆಯೋ ಅವರೇ ಅದನ್ನು ಮಾಡಲಿ. ನೀನು ನಿನ್ನ ಸಮಯವನ್ನು ಬೇರೆ ಯಾವುದಾದರೂ ವಿಷಯಕ್ಕೆ ನೀಡು’ ಎಂದು ಶಾರುಖ್​ ಖಾನ್​ ಅವರು ಉತ್ತರಿಸಿದ್ದಾರೆ. ಆ ಮೂಲಕ ಅವರು ನಿಜವಾದ ಬಜೆಟ್​ ಏನು ಎಂಬುದನ್ನು ಬಹಿರಂಗ ಮಾಡಿಲ್ಲ. ಈ ಸಿನಿಮಾಗೆ ಶಾರುಖ್​ ಖಾನ್​ ಪತ್ನಿ ಗೌರಿ ಖಾನ್​ ಹಾಗೂ ರಾಜ್​ಕುಮಾರ್​ ಹಿರಾನಿ ಅವರು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.

ಡಿಸೆಂಬರ್​ 21ರಂದು ‘ಡಂಕಿ’ ಸಿನಿಮಾ ಬಿಡುಗಡೆ ಆಯಿತು. ಮರುದಿನವೇ (ಡಿಸೆಂಬರ್​ 22) ‘ಸಲಾರ್​’ ಚಿತ್ರ ತೆರೆಕಂಡಿತು. ಹಾಗಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಕ್ಲ್ಯಾಶ್​ ಏರ್ಪಟ್ಟಿತು. ‘ಡಂಕಿ’ ಸಿನಿಮಾ ವಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದರಿಂದ ಹೆಚ್ಚು ಕಲೆಕ್ಷನ್​ ಆಗಲಿಲ್ಲ. ಈ ಮೊದಲು ಬಿಡುಗಡೆ ಆಗಿದ್ದ ಶಾರುಖ್​ ಖಾನ್​ ಅವರ ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿದ್ದವು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ