AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಕೋಟಿ ರೂಪಾಯಿ ಗಳಿಸಿದ ‘ಪಠಾಣ್​’ ಚಿತ್ರದಿಂದ ಶಾರುಖ್​ ಖಾನ್​ಗೆ ಸಿಕ್ಕ ಹಣ ಎಷ್ಟು?

Shah Rukh Khan Remuneration: ‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್ ಅವರು ಸಂಭಾವನೆ ಪಡೆದಿರಲಿಲ್ಲ. ಬಂದ ಲಾಭದಲ್ಲಿ ಶೇಕಡ ಇಂತಿಷ್ಟು ಹಣ ತಮಗೆ ಸೇರಬೇಕು ಎಂದು ಅವರು ಒಪ್ಪಂದ ಮಾಡಿಕೊಂಡಿದ್ದರು.

ಸಾವಿರಾರು ಕೋಟಿ ರೂಪಾಯಿ ಗಳಿಸಿದ ‘ಪಠಾಣ್​’ ಚಿತ್ರದಿಂದ ಶಾರುಖ್​ ಖಾನ್​ಗೆ ಸಿಕ್ಕ ಹಣ ಎಷ್ಟು?
ಶಾರುಖ್ ಖಾನ್
ಮದನ್​ ಕುಮಾರ್​
|

Updated on:Apr 17, 2023 | 10:52 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಹಲವು ವರ್ಷಗಳಿಂದ ಸೋಲಿನ ಸುಳಿಗೆ ಸಿಲುಕಿದ್ದ ಅವರಿಗೆ ಈ ವರ್ಷದ ಆರಂಭದಲ್ಲೇ ‘ಪಠಾಣ್​’ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿತು. ಈ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 1000 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ‘ಯಶ್​ ರಾಜ್​ ಫಿಲ್ಮ್ಸ್​’ (Yash Raj Films) ಸಂಸ್ಥೆಗೆ ಈ ಸಿನಿಮಾದಿಂದ ಒಳ್ಳೆಯ ಲಾಭ ಆಯಿತು. ಬಾಕ್ಸ್​ ಆಫೀಸ್​ ಮಾತ್ರವಲ್ಲದೇ ಆಡಿಯೋ ಹಕ್ಕುಗಳ ಮಾರಾಟದಿಂದಲೂ ಬಹುಕೋಟಿ ರೂಪಾಯಿ ಬಿಸ್ನೆಸ್​ ಆಯಿತು. ಒಟ್ಟಾರೆಯಾಗಿ ಪಠಾಣ್​’ (Pathaan) ಚಿತ್ರದಿಂದ ಶಾರುಖ್​ ಖಾನ್​ ಅವರ ಜೇಬು ಸೇರಿದ ಹಣ ಎಷ್ಟು ಎಂಬ ಬಗ್ಗೆ ‘ಬಾಲಿವುಡ್ ಹಂಗಾಮಾ’ ವರದಿ ಮಾಡಿದೆ. ಅದರ ಪ್ರಕಾರ ಶಾರುಖ್​ ಖಾನ್​ ಅವರು ಬರೋಬ್ಬರಿ 200 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ.

‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್ ಅವರು ಸಂಭಾವನೆ ಪಡೆದಿರಲಿಲ್ಲ. ಬಂದ ಲಾಭದಲ್ಲಿ ಶೇಕಡ 60ರಷ್ಟು ತಮಗೆ ಸೇರಬೇಕು ಎಂದು ಅವರು ಒಪ್ಪಂದ ಮಾಡಿಕೊಂಡಿದ್ದರು. ಆ ನಿರ್ಧಾರದಿಂದ ಶಾರುಖ್​ಗೆ ಭರ್ಜರಿ ಲಾಭ ಆಗಿದೆ. ಬಂಡವಾಳ ಕಳೆದು, ಭಾರತ ಹಾಗೂ ವಿದೇಶದಲ್ಲಿ ಸಿನಿಮಾವನ್ನು ವಿತರಣೆ ಮಾಡಿದವರ ಪಾಲನ್ನೂ ಬಿಟ್ಟು ಯಶ್​ ರಾಜ್​ ಸಂಸ್ಥೆಗೆ ಅಂದಾಜು 333 ಕೋಟಿ ರೂಪಾಯಿ ಲಾಭ ಸಿಕ್ಕಿದೆ. ಅದರಲ್ಲಿ ಶೇಕಡ 60 ಪಡೆದ ಶಾರುಖ್​ ಖಾನ್​ ಅವರು ಸುಮಾರು 200 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ.

ಇದನ್ನೂ ಓದಿ: Time 100 Reader Poll: ವಿಶ್ವದ ನೂರು ಪ್ರಭಾವಿ ವ್ಯಕ್ತಿಗಳಲ್ಲಿ ಶಾರುಖ್​ ಖಾನ್​ ನಂ.1; ಮೆಸ್ಸಿಯನ್ನೂ ಮೀರಿಸಿದ ‘ಪಠಾಣ್​’ ಹೀರೋ

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಎಲ್ಲ ಕಲಾವಿದರ ಸಂಭಾವನೆಯನ್ನೂ ಸೇರಿ ಒಟ್ಟು 270 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಪಠಾಣ್​’ ಸಿನಿಮಾವನ್ನು ನಿರ್ಮಾಣ ಮಾಡಲಾಗಿತ್ತು. ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಬಹಳ ಅದ್ದೂರಿಯಾಗಿ ಈ ಚಿತ್ರವನ್ನು ತೆರೆಗೆ ತಂದರು. ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ, ಡಿಂಪಲ್​ ಕಪಾಡಿಯಾ ಮುಂತಾದ ಕಲಾವಿದರ ಪಾತ್ರಗಳು ಕೂಡ ಸಖತ್​ ಹೈಲೈಟ್​ ಆದವು. ಹಾಡುಗಳಂತೂ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದುಕೊಂಡವು.

ಇದನ್ನೂ ಓದಿ: ‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಶಾರುಖ್​ ಖಾನ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಮುಂಬರುವ ಸಿನಿಮಾಗಳ ಮೇಲೆ ಎಲ್ಲಿಲ್ಲದಷ್ಟು ನಿರೀಕ್ಷೆ ಹುಟ್ಟಿದೆ. ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ಶಾರುಖ್​ ಖಾನ್​ ಅವರು ‘ಡಂಕಿ’ ಸಿನಿಮಾ ಮಾಡುತ್ತಿದ್ದಾರೆ. ತಮಿಳಿನ ನಿರ್ದೇಶಕ ಅಟ್ಲಿ ಕುಮಾರ್​ ಜೊತೆ ‘ಜವಾನ್​’ ಸಿನಿಮಾ ಮಾಡುತ್ತಿದ್ದಾರೆ. ಈ ಎರಡೂ ಚಿತ್ರಗಳು ಶಾರುಖ್​ ವೃತ್ತಿ ಜೀವನಕ್ಕೆ ಇನ್ನಷ್ಟು ಮೈಲೇಜ್​ ನೀಡುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:52 pm, Mon, 17 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!