Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

Pathaan | Shah Rukh Khan: ಅಹಾನಾ ಎಂಬ ಪುಟ್ಟ ಬಾಲಕಿ ‘ಪಠಾಣ್’ ಸಿನಿಮಾ ವೀಕ್ಷಿಸಿದ್ದಾಳೆ. ತನಗೆ ಈ ಚಿತ್ರ ಇಷ್ಟ ಆಗಿಲ್ಲ ಎಂದು ಆಕೆ ನೇರವಾಗಿ ತಿಳಿಸಿದ್ದಾಳೆ.

Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​
ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on: Feb 06, 2023 | 7:00 AM

ಹಿಂದಿ ಚಿತ್ರರಂಗಕ್ಕೆ ‘ಪಠಾಣ್​’ (Pathaan Movie) ಸಿನಿಮಾದಿಂದ ಹೊಸ ಚೈತನ್ಯ ಸಿಕ್ಕಿದೆ. 2022ರಲ್ಲಿ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ 2023ರ ಆರಂಭದಲ್ಲೇ ಅಬ್ಬರಿಸಿದೆ. ನಟ ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ ಸಿನಿಮಾವನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ವಿಶ್ವಾದ್ಯಂತ 700 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ (Pathaan Box Office Collection) ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ. ಎರಡನೇ ವೀಕೆಂಡ್​ನಲ್ಲೂ ಅನೇಕ ಕಡೆಗಳಲ್ಲಿ ‘ಪಠಾಣ್​’ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ‘ನನಗೆ ಪಠಾಣ್​ ಚಿತ್ರ ಇಷ್ಟ ಆಗಿಲ್ಲ’ ಎಂದು ಚಿಕ್ಕ ಬಾಲಕಿಯೊಬ್ಬಳು ನೇರವಾಗಿ ಹೇಳಿದ್ದಾಳೆ. ಆ ವಿಡಿಯೋ ಟ್ವಿಟರ್​ನಲ್ಲಿ ವೈರಲ್​ ಆಗಿದೆ. ಅದನ್ನು ನೋಡಿರುವ ಶಾರುಖ್ ಖಾನ್​ (Shah Rukh Khan) ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅಹಾನಾ ಎಂಬ ಬಾಲಕಿ ‘ಪಠಾಣ್’ ಸಿನಿಮಾ ವೀಕ್ಷಿಸಿದ್ದಾಳೆ. ಚಿತ್ರ ನೋಡಿದ ಬಳಿಕ ಆಕೆಯ ಪಾಲಕರು ಅವಳ ಅಭಿಪ್ರಾಯ ಕೇಳಿದ್ದಾರೆ. ನಿನಗೆ ಸಿನಿಮಾ ಇಷ್ಟ ಆಯ್ತಾ ಎಂದು ಪ್ರಶ್ನಿಸಿ​ದ್ದಕ್ಕೆ ಆಕೆ ನೇರವಾಗಿ ‘ಇಲ್ಲ’ ಎಂದು ಉತ್ತರಿಸಿದ್ದಾಳೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಶಾರುಖ್​ ಖಾನ್​ಗೆ ಟ್ಯಾಗ್​ ಮಾಡಲಾಗಿದೆ. ಅದಕ್ಕೆ ಶಾರುಖ್​ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

‘ಓಹ್​.. ಇನ್ನೂ ಕಷ್ಟಪಟ್ಟು ಕೆಲಸ ಮಾಡಬೇಕು ಈಗ. ಚಿಕ್ಕ ವಯಸ್ಸಿನ ವೀಕ್ಷಕರು ನಿರಾಶರಾಗಬಾರದು. ದೇಶದ ಯುವ ಜನತೆಯ ವಿಷಯ ಇದು. ಆಕೆಗೆ ಡಿಡಿಎಲ್​ಜೆ ಸಿನಿಮಾ ತೋರಿಸಿ ಪ್ಲೀಸ್​. ಆಕೆ ರೊಮ್ಯಾಂಟಿಕ್​ ಚಿತ್ರ ಇಷ್ಟಪಡುವ ಹುಡುಗಿ ಎನಿಸುತ್ತದೆ’ ಎಂದು ಶಾರುಖ್​ ಖಾನ್​ ಅವರು ಟ್ವೀಟ್​ ಮಾಡಿದ್ದಾರೆ.

‘ಪಠಾಣ್​’ ಚಿತ್ರದ ನಿಜವಾದ ಕಲೆಕ್ಷನ್​ ಎಷ್ಟು?

‘ಪಠಾಣ್​’ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ಶಾರುಖ್​ ಖಾನ್​ ಅವರು ಅಭಿಮಾನಿಗಳ ಜೊತೆ ಟ್ವಿಟರ್​​ನಲ್ಲಿ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಪಠಾಣ್​ ಸಿನಿಮಾದ ನಿಜವಾದ ಕಲೆಕ್ಷನ್​ ಬಗ್ಗೆ ವ್ಯಕ್ತಿಯೊಬ್ಬರು ಪ್ರಶ್ನೆ ಎತ್ತಿದ್ದಾರೆ. ಅದಕ್ಕೆ ಶಾರುಖ್ ಖಾನ್​ ನೀಡಿದ ಉತ್ತರ ಎಲ್ಲರ ಗಮನ ಸೆಳೆದಿದೆ.

‘ಪಠಾಣ್​ ಸಿನಿಮಾದ ಕಲೆಕ್ಷನ್ ಇಷ್ಟೇನಾ’ ಎಂದು ರಾಜ್​ ಶ್ರೀವಾಸ್ತವ ಎಂಬ ವ್ಯಕ್ತಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್​ ಖಾನ್​ ಅವರು ಊಹಿಸಲಾಗದಂತಹ ಉತ್ತರ ನೀಡಿದ್ದಾರೆ. ‘5 ಸಾವಿರ ಕೋಟಿ ಪ್ರೀತಿ. 3 ಸಾವಿರ ಕೋಟಿ ಮೆಚ್ಚುಗೆ. 3250 ಕೋಟಿ ಅಪ್ಪುಗೆ. 2 ಬಿಲಿಯನ್​ ನಗು.. ಇನ್ನೂ ಎಣಿಸಲಾಗುತ್ತಿದೆ. ನಿನ್ನ ಅಕೌಂಟೆಂಟ್​ ಏನು ಹೇಳುತ್ತಿದ್ದಾರೆ?’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ