AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ 76ನೇ ಜನ್ಮದಿನ: ‘ನರೇಂದ್ರ ಭಾಯ್’ ಎಂದು ಶುಭ ಹಾರೈಸಿದ ಸಲ್ಮಾನ್ ಖಾನ್

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಾಲಿವುಡ್ ನಟ-ನಟಿಯರು ಶುಭ ಕೋರಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಮತ್ತು ಕಂಗನಾ ರಣಾವತ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿ, ಅವರ ದೇಶಸೇವೆಯನ್ನು ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ 76ನೇ ಜನ್ಮದಿನ: ‘ನರೇಂದ್ರ ಭಾಯ್’ ಎಂದು ಶುಭ ಹಾರೈಸಿದ ಸಲ್ಮಾನ್ ಖಾನ್
Narendra Modi, Salman KhanImage Credit source: PTI
ಮದನ್​ ಕುಮಾರ್​
|

Updated on:Sep 17, 2026 | 9:27 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ (ಸೆಪ್ಟೆಂಬರ್ 17) ತಮ್ಮ 76ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಬಾಲಿವುಡ್‌ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್, ಸಲ್ಮಾನ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಮತ್ತು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಅವರು ಪ್ರಾರ್ಥಿಸಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಅವರು ವಿಶ್ ಮಾಡಿದ ರೀತಿ ಗಮನ ಸೆಳೆದಿದೆ.

ಶಾರುಖ್ ಖಾನ್ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ, ‘ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಮತ್ತು ಸಂತೋಷ ಸಿಗಲಿ. ದೇಶದ ಜನರಿಗೆ ಸ್ಫೂರ್ತಿ ನೀಡುವ ಶಕ್ತಿ ಮತ್ತು ಸಕಾರಾತ್ಮಕತೆ ನಿಮ್ಮಲ್ಲಿ ಎಂದೆಂದಿಗೂ ಇರಲಿ’ ಎಂದು ಬರೆದುಕೊಂಡಿದ್ದಾರೆ.

ನಟ ಸಲ್ಮಾನ್ ಖಾನ್ ಸರಳವಾಗಿ ಶುಭಕೋರಿದ್ದು, ‘ಜನ್ಮದಿನದ ಶುಭಾಶಯಗಳು ಗೌರವಾನ್ವಿತ ಪ್ರಧಾನಿ ಸಾಹೇಬ್. ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ನರೇಂದ್ರ ಭಾಯ್ ಮೋದಿ. ಜೈ ಹಿಂದ್’ ಎಂದು ಟ್ವೀಟ್ ಮಾಡಿದ್ದಾರೆ. ಅವರ ಈ ಪೋಸ್ಟ್ ವೈರಲ್ ಆಗಿದೆ.

ಅಜಯ್ ದೇವಗನ್ ಅವರು ಪ್ರಧಾನಿಯವರ ನಿರಂತರ ಸೇವೆಯನ್ನು ಶ್ಲಾಘಿಸಿ, ‘ವರ್ಷದಿಂದ ವರ್ಷಕ್ಕೆ ನೀವು ಯಾವುದೇ ದಣಿವಿಲ್ಲದೇ ದೇಶದ ಸೇವೆ ಮಾಡುತ್ತಿರುವುದನ್ನು ನೋಡುವುದೇ ನಿಜವಾದ ಸೇವೆಯ ಸಂಕೇತ. ಭಾರತದ ಪ್ರತಿಯೊಬ್ಬ ಪ್ರಜೆಯ ಮೇಲಿನ ನಿಮ್ಮ ಬದ್ಧತೆ ನನ್ನ ಮನಸ್ಸಿಗೆ ತಲುಪಿದೆ. ನಿಮಗೆ ನೂರು ಕಾಲ ಉತ್ತಮ ಆರೋಗ್ಯ ಮತ್ತು ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಆಶಿಸಿದ್ದಾರೆ.

ಇನ್ನು ಅಕ್ಷಯ್ ಕುಮಾರ್ ಅವರು, ಪ್ರಧಾನಿಯವರ ಜನ್ಮದಿನವನ್ನು ಸೇವಾ ಸಂಕಲ್ಪವಾಗಿ ಆಚರಿಸುತ್ತಿರುವುದನ್ನು ಮೆಚ್ಚಿ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಈ ದಿನವನ್ನು ಅರ್ಥಪೂರ್ಣವಾಗಿಸೋಣ ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಹುಟ್ಟುಹಬ್ಬ: ಪವನ್-ಕಮಲ್ ಸಹಿತ ಹಲವು ಸೆಲೆಬ್ರಿಟಿಗಳಿಂದ ಶುಭಾಶಯ

ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಅವರು ದೀಪ ಬೆಳಗಿಸಿ ಪ್ರಾರ್ಥಿಸುತ್ತಿರುವ ವೀಡಿಯೊ ಹಂಚಿಕೊಂಡು, ದೇಶಸೇವೆಯಲ್ಲಿ 25 ವರ್ಷ ಪೂರೈಸುತ್ತಿರುವ ಪ್ರಧಾನಿ ಮೋದಿಯವರ ಕಾರ್ಯವನ್ನು ಶ್ಲಾಘಿಸಿ ಶುಭಾಶಯ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:26 pm, Thu, 17 September 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ