ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ

ಬಾಲಿವುಡ್​ನಲ್ಲಿ ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಈ ಮೂವರಿಗೆ ಸ್ಥಾನ ಸಿಕ್ಕಿಲ್ಲ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸೆಲೆಬ್ರಿಟಿಗಳಿಗೂ ಆಹ್ವಾನ ಪತ್ರಿಕೆ ತಲುಪಿಲ್ಲ.

ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ
ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಆಮಿರ್​ ಖಾನ್​
Follow us
ಮದನ್​ ಕುಮಾರ್​
|

Updated on: Jan 19, 2024 | 4:21 PM

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆ (Ram Mandir Inauguration) ನಡೆಯಲಿದೆ. ಅಂದು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಅನೇಕ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸಿನಿಮಾ ನಟ-ನಟಿಯರ ಹೆಸರುಗಳು ಆಹ್ವಾನಿತರ ಪಟ್ಟಿಯಲ್ಲಿ ಇವೆ. ಈಗಾಗಲೇ ಆಹ್ವಾನ ಪತ್ರಿಕೆಯ ಫೋಟೋ ವೈರಲ್​ ಆಗಿದೆ. ಈ ನಡುವೆ ಭಾರತೀಯ ಚಿತ್ರರಂಗದ ಕೆಲವು ಪ್ರಮುಖ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸಲ್ಮಾನ್​ ಖಾನ್​ (Salman Khan), ಆಮಿರ್​ ಖಾನ್​, ಶಾರುಖ್​ ಖಾನ್​ (Shah Rukh Khan) ಮುಂತಾದ ನಟರನ್ನು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಸುದ್ದಿಯಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಈ ಸೆಲೆಬ್ರಿಟಿಗಳ ಹೆಸರು ಕಾಣಿಸಿಲ್ಲ.

ಬಾಲಿವುಡ್​ನಲ್ಲಿ ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಈ ಮೂವರಿಗೆ ಸ್ಥಾನ ಸಿಕ್ಕಿಲ್ಲ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸೆಲೆಬ್ರಿಟಿಗಳಿಗೂ ಆಹ್ವಾನ ಪತ್ರಿಕೆ ತಲುಪಿಲ್ಲ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಇದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ 1 ಕೆಜಿ ಚಿನ್ನ ನೀಡಿದ ಕನ್ನಡಿಗ

ಹಿಂದಿ ಚಿತ್ರರಂಗದ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರನ್ನು ಆಹ್ವಾನಿಸಲಾಗಿದೆ. ಆದರೆ ಅವರ ಸೊಸೆ, ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಆಹ್ವಾನ ನೀಡಿಲ್ಲ. ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್​, ಕರೀನಾ ಕಪೂರ್​ ಖಾನ್​, ಸೈಫ್​ ಅಲಿ ಖಾನ್​, ಕರಣ್​ ಜೋಹರ್​, ಶಿಲ್ಪಾ ಶೆಟ್ಟಿ, ಸಂಜಯ್ ದತ್​ ಮುಂತಾದ ಕಲಾವಿದರಿಗೂ ಆಹ್ವಾನ ತಲುಪಿಲ್ಲ. ಅಂತಿಮವಾಗಿ ಯಾವೆಲ್ಲ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಾಯಣ ಆಧಾರಿತ ನೃತ್ಯ ಪ್ರದರ್ಶನ ಮಾಡಲಿರುವ ಹೇಮಾ ಮಾಲಿನಿ

ಅಕ್ಷಯ್​ ಕುಮಾರ್​, ರಜನಿಕಾಂತ್​, ಆಯುಷ್ಮಾನ್​ ಖುರಾನಾ, ಕಂಗನಾ ರಣಾವತ್​, ಆಲಿಯಾ ಭಟ್​, ರಣಬೀರ್​ ಕಪೂರ್​, ರಣದೀಪ್​ ಹೂಡಾ, ಅನುಷ್ಕಾ ಶರ್ಮಾ, ರಜನಿಕಾಂತ್​, ಅನುಪಮ್​ ಖೇರ್​, ಮಾಧುರಿ ದೀಕ್ಷಿತ್​, ರಿಷಬ್​ ಶೆಟ್ಟಿ, ಯಶ್​, ಅಜಯ್​ ದೇವಗನ್​, ಪ್ರಭಾಸ್​, ರಾಮ್​ ಚರಣ್​, ಸನ್ನಿ ಡಿಯೋಲ್​, ಮೋಹನ್​ಲಾಲ್​, ಸಂಜಯ್​ ಲೀಲಾ ಬನ್ಸಾಲಿ, ಚಿರಂಜೀವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ತಲುಪಿರುವ ಬಗ್ಗೆ ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್