8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

Shah Rukh Khan 8 Pack Abs: 56ನೇ ವಯಸ್ಸಿನಲ್ಲಿ 8 ಪ್ಯಾಕ್ಸ್​ ಆ್ಯಬ್ಸ್​ ಮಾಡುವುದು ಎಂದರೆ ತಮಾಷೆಯ ಮಾತಲ್ಲ. ಆ ಕಾರಣಕ್ಕಾಗಿ ಶಾರುಖ್​ ಖಾನ್​ ಅವರಿಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?
ಶಾರುಖ್​ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Mar 27, 2022 | 11:38 AM

ನಟ ಶಾರುಖ್​ ಖಾನ್​ (Shah Rukh Khan) ಅವರು ಈಗ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಲು ಕಾದಿದ್ದಾರೆ. ಅದಕ್ಕಾಗಿ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರು ಹೇಗಾದರೂ ಮಾಡಿ ಒಂದು ಗೆಲುವು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಸದ್ಯ ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ (Pathaan Movie) ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ಈ ಸಿನಿಮಾದಲ್ಲಿ ಅಭಿಮಾನಿಗಳು ಶಾರುಖ್​ ಖಾನ್​ ಅವರನ್ನು ಹೊಸ ಅವತಾರದಲ್ಲಿ ನೋಡಲಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ‘ಪಠಾಣ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರಿಬ್ಬರ ಲುಕ್​ ಈಗಾಗಲೇ ಬಹಿರಂಗ ಆಗಿದೆ. ಈಗಿನದ್ದು ಶಾರುಖ್​ ಖಾನ್​ ಸರದಿ. ಕೆಲವೇ ದಿನಗಳ ಹಿಂದೆ ಶಾರುಖ್​ ಅವರ ಕೆಲವು ಫೋಟೋಗಳನ್ನು ಯಾರೋ ಲೀಕ್​ ಮಾಡಿದ್ದರು. ಅವು ಸಿಕ್ಕಾಪಟ್ಟೆ ವೈರಲ್​ ಆಗಿದ್ದವು. ಈಗ ಅಧಿಕೃತವಾಗಿ ಶಾರುಖ್​ ಖಾನ್​ ಅವರೇ ತಮ್ಮ ಹೊಸ ಫೋಟೋವನ್ನು (Shah Rukh Khan New Photo) ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ 8 ಪ್ಯಾಕ್ಸ್​ ಆ್ಯಬ್ಸ್​ ಗಮನ ಸೆಳೆಯುತ್ತಿದೆ. ಇದನ್ನು ಕಂಡು ಶಾರುಖ್​ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಬಗೆಬಗೆಯಲ್ಲಿ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಬಾಲಿವುಡ್​ನಲ್ಲಿ ‘ಪಠಾಣ್​’ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡುತ್ತಿದ್ದು, ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಬಾಡಿ ಟ್ರಾನ್ಸ್​ಫಾರ್ಮೇಷನ್​ ಮಾಡಿಕೊಂಡಿದ್ದಾರೆ. 8 ಪ್ಯಾಕ್ಸ್​ ಆ್ಯಬ್ಸ್​ ಮಾಡಿಕೊಂಡು ಪೋಸ್​ ನೀಡುತ್ತಿದ್ದಾರೆ. ಈ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಅವರು ಜಬರ್ದಸ್ತ್​ ಕ್ಯಾಪ್ಷನ್​ ನೀಡಿದ್ದಾರೆ. ‘ಶಾರುಖ್​ ಖಾನ್​ ಒಂದು ವೇಳೆ ಸ್ವಲ್ಪವೇ ತಡ ಮಾಡಿದರೂ.. ಪಠಾಣ್​ನನ್ನು ಹಿಡಿಯೋದು ಹೇಗೆ? ಆ್ಯಪ್ಸ್​ ಮತ್ತು ಆ್ಯಬ್ಸ್​ ಎಲ್ಲವನ್ನೂ ಮಾಡ್ತೀನಿ’ ಎಂದು ಶಾರುಖ್​ ಖಾನ್​ ಬರೆದುಕೊಂಡಿದ್ದಾರೆ.

ಶಾರುಖ್​ ಖಾನ್​ ಹಂಚಿಕೊಂಡಿರುವ ಈ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೇ ಹಲವಾರು ಸೆಲೆಬ್ರಿಟಿಗಳು ಕೂಡ ಈ ಫೋಟೋಗೆ ಕಮೆಂಟ್​ ಮಾಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಈಗ 56 ವರ್ಷ ವಯಸ್ಸು. ಈ ಪ್ರಾಯದಲ್ಲೂ 8 ಪ್ಯಾಕ್ಸ್​ ಆ್ಯಬ್ಸ್​ ಮಾಡುವುದು ಎಂದರೆ ತಮಾಷೆಯ ಮಾತಲ್ಲ. ಆ ಕಾರಣಕ್ಕಾಗಿ ಅವರಿಗೆ 56 ವರ್ಷ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ. ಅಪ್​ಲೋಡ್​ ಮಾಡಿ ಕೆಲವೇ ಗಂಟೆಗಳು ಕಳೆಯುವುದರೊಳಗೆ 25 ಲಕ್ಷಕ್ಕೂ ಅಧಿಕ ಜನರು ಈ ಫೋಟೋವನ್ನು ಲೈಕ್​ ಮಾಡಿದ್ದಾರೆ.

View this post on Instagram

A post shared by Shah Rukh Khan (@iamsrk)

ಶಾರುಖ್​ ಖಾನ್ ಅವರಿಗೆ ಸಿನಿಮಾದಿಂದ ಗೆಲುವು ಸಿಗದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೋಲುಂಡಿತು. ಆ ಬಳಿಕ ಶಾರುಖ್​ ಅಭಿನಯದ ಯಾವುದೇ ಸಿನಿಮಾ ತೆರೆ ಕಂಡಿಲ್ಲ. ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿಯೂ ಅವರು ಸಾಕಷ್ಟು ಸಮಯ ತೆಗೆದುಕೊಂಡರು. ಈ ನಡುವೆ ಮಗ ಆರ್ಯನ್​ ಖಾನ್​ ಡ್ರಗ್ಸ್​ ಪಾರ್ಟಿ ಆರೋಪದ ಮೇಲೆ ಜೈಲು ಸೇರಿದ್ದರಿಂದ ಅವರಿಗೆ ಕೊಂಚ ಹಿನ್ನಡೆ ಆಗಿತ್ತು. ಈಗ ಭರ್ಜರಿ ತಯಾರಿಯೊಂದಿಗೆ ಪ್ರೇಕ್ಷಕರ ಎದುರು ಬರಲು ಶಾರುಖ್​ ಖಾನ್​ ಸಜ್ಜಾಗಿದ್ದಾರೆ. ಇತ್ತೀಚೆಗೆ ಅವರು ದುಬೈ ಪ್ರವಾಸೋದ್ಯಮ ಇಲಾಖೆಗಾಗಿ ಒಂದು ಜಾಹೀರಾತಿನಲ್ಲಿ ನಟಿಸಿದ್ದರು. ಹಾಡಿನ ರೂಪದಲ್ಲಿ ಆ ಜಾಹೀರಾತು ಮೂಡಿಬಂದಿತ್ತು. ಅದನ್ನು ನೋಡಿದ ಫ್ಯಾನ್ಸ್​ ಥ್ರಿಲ್​ ಆಗಿದ್ದರು. ಈಗ ಎಲ್ಲರೂ ‘ಪಠಾಣ್​’ ಸಿನಿಮಾಗಾಗಿ ಕಾಯುವಂತಾಗಿದೆ. ಈ ಚಿತ್ರದಿಂದ ಮುಂದಿನ ಅಪ್​ಡೇಟ್​ ತಿಳಿಯಲು ಅಭಿಮಾನಿಗಳಲ್ಲಿ ಕಾತರ ಹೆಚ್ಚಿದೆ.

ಇದನ್ನೂ ಓದಿ:

ದೀಪಿಕಾ ಪಡುಕೋಣೆ ಬಿಕಿನಿ ಫೋಟೋಗಳು ಲೀಕ್​; ಶಾರುಖ್​ ಕೂಡ ಇದ್ದಾರೆ ಅಂತ ಪತ್ತೆಹಚ್ಚಿದ ಫ್ಯಾನ್ಸ್​

ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ