AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​

ಕೋರ್ಟ್​ನಲ್ಲಿ ಸಾಲುಸಾಲು ವಿಚಾರಣೆ ನಡೆಸಲಾಯಿತಾದರೂ ಆರ್ಯನ್​ಗೆ ಜಾಮೀನು ಸಿಕ್ಕಿರಲಿಲ್ಲ. ಮುಂಬೈನ ಎನ್​​ಡಿಪಿಎಸ್​ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು.

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​
ಆರ್ಯನ್​ ಖಾನ್​
TV9 Web
| Edited By: |

Updated on:Oct 20, 2021 | 3:00 PM

Share

ರೇವ್​​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್​ ಖಾನ್ ಜೈಲಿನಲ್ಲಿ ಸಾಕಷ್ಟು ದಿನ ಕಳೆದಿದ್ದಾರೆ. ಕೋರ್ಟ್​ನಲ್ಲಿ ಸಾಲುಸಾಲು ವಿಚಾರಣೆ ನಡೆಸಲಾಯಿತಾದರೂ ಜಾಮೀನು ಸಿಕ್ಕಿರಲಿಲ್ಲ. ಮುಂಬೈನ ಎನ್​​ಡಿಪಿಎಸ್​ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಇಂದು (ಅಕ್ಟೋಬರ್​ 20) ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದೆ. ಈ ವೇಳೆ ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ. 

ಆರ್ಯನ್​ ಜತೆಗೆ ಇತರ ಆರೋಪಿಗಳ ಜಾಮೀನು ಕೂಡ ತಿರಸ್ಕರಿಸಲಾಗಿದೆ. ಹೀಗಾಗಿ, ಈಗ ಆರ್ಯನ್​ ಪರ ವಕೀಲರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಮತ್ತೊಂದಷ್ಟು ದಿನ ಆರ್ಯನ್​ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

ಆರ್ಯನ್​ ಪರ ವಕೀಲರು ಹೇಳಿದ್ದೇನು?

‘ಅಕ್ಟೋಬರ್ 3ರಿಂದ ಆರ್ಯನ್​ ವಿಚಾರಣೆ ನಡೆಸಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್​​​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಎನ್​ಸಿಬಿ ವಿರೋಧ ಮಾಡಿತ್ತು. ಹೀಗಾಗಿಯೇ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನಿರಾಕರಿಸಿದೆ. ಎನ್​​ಸಿಬಿ ಕಸ್ಟಡಿ ಅಗತ್ಯವಿಲ್ಲ ಎಂದು ಆರ್ಯನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದಿದ್ದರು ಅಮಿತ್​ ದೇಸಾಯಿ.

‘ಆರ್ಯನ್ ಖಾನ್​ಗೆ  ಯಾರು ಆಹ್ವಾನ ನೀಡಿದ್ದರೋ ಅವರನ್ನು ಬಂಧಿಸಿಲ್ಲ. ಪ್ರತೀಕ್ ಗಾಬಾ ಎಂಬಾತ ಆರ್ಯನ್ ಖಾನ್ ಅವರನ್ನು ಪಾರ್ಟಿಗೆ ಆಹ್ವಾನಿಸಿದ್ದ. ಆತನನ್ನು ಬಂಧಿಸಬೇಕಿತ್ತು. ಎನ್‌ಡಿಪಿಎಸ್ ಕಾಯಿದೆಯ 27 ಎ ಸೆಕ್ಷನ್ ​ ಕಳ್ಳಸಾಗಣಿಕೆಗೆ ಸಂಬಂಧಿಸಿದೆ. ಈ ಸೆಕ್ಷನ್ ಆರ್ಯನ್ ಖಾನ್‌ಗೆ ಅನ್ವಯಿಸುವುದಿಲ್ಲ. ಆರ್ಯನ್​ ಯಾವುದೇ ಅಕ್ರಮ ಕಳ್ಳಸಾಗಣೆಯಲ್ಲಿ ಭಾಗಿಯಾಗಿಲ್ಲ. ಈ ಸೆಕ್ಷನ್ ವಿಧಿಸಿರುವುದು ಅಸಂಬದ್ಧ’  ಎಂದು ಆರ್ಯನ್ ಖಾನ್ ಪರ ವಕೀಲ ಅಮಿತ್ ದೇಸಾಯಿ ವಾದ ಮಂಡಿಸಿದ್ದರು.

‘ಇವರು ಡ್ರಗ್ಸ್ ಪೆಡ್ಲರ್​​ಗಳು ಅಲ್ಲ. ಡ್ರಗ್ಸ್ ಕಳ್ಳ ಸಾಗಾಟವನ್ನು ಮಾಡಿಲ್ಲ. ಇವರೆಲ್ಲಾ ಚಿಕ್ಕ ಮಕ್ಕಳು. ಅವರು ಪಾಠವನ್ನು ಕಲಿತಿದ್ದಾರೆ. ಜೈಲಿನಲ್ಲಿ ದೀರ್ಘ ಅವಧಿಯವರೆಗೂ ಇರುವುದು ಬೇಡ. ಆರ್ಯನ್ ಖಾನ್​ಗೆ ಜಾಮೀನು ನೀಡಿ’ ಎಂದು ಅಮಿತ್ ದೇಸಾಯಿ ಕೋರ್ಟ್​ಗೆ ಮನವಿ ಮಾಡಿದ್ದರು.

ಎನ್​ಸಿಬಿ ಪರ ವಕೀಲರು ಹೇಳಿದ್ದೇನು?

ಎನ್​ಸಿಬಿ ಪರ ವಕೀಲರಾದ ಅನಿಲ್​​ ಸಿಂಗ್ ವಾದಮಂಡಿಸಿದರು. ‘ಡ್ರಗ್ಸ್ ಕಳ್ಳ ಸಾಗಣೆ ಬಹಳ‌‌ ಗಂಭೀರ, ಕಳಕಳಿಯ ವಿಷಯ. ರೇವ್ ಪಾರ್ಟಿಗಳಲ್ಲಿ ಯುವಜನತೆ ಡ್ರಗ್ಸ್ ಸೇವನೆ ಮಾಡುತ್ತಾರೆ. ಇದರಿಂದ ದೇಶಕ್ಕೆ ತೊಂದರೆ ಆಗುತ್ತದೆ. ಇದು ಒಂದಿಬ್ಬರ ಡ್ರಗ್ಸ್ ಸೇವನೆಗೆ ಸಂಬಂಧಪಟ್ಟಿದ್ದಲ್ಲ. ನಾವು ಇಡೀ ಜಾಲದ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಆರ್ಯನ್ ಖಾನ್​​​ನನ್ನು‌ ಪಾರ್ಟಿಗೆ ಆಹ್ವಾನಿಸಲಾಗಿತ್ತು. ಯಾರು, ಯಾವಾಗ ಆಹ್ವಾನಿಸಿದರು ಎಂದು ಹೇಳುತ್ತಿಲ್ಲ. ಅವರಿಗೆ ಜಾಮೀನು ನೀಡಬಾರದು’ ಎಂದಿದ್ದರು ಅನಿಲ್​​ ಸಿಂಗ್.

ಇದನ್ನೂ ಓದಿ: Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

Published On - 2:47 pm, Wed, 20 October 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್