AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಡಂಕಿ’ ಸಿನಿಮಾ ಬಜೆಟ್​ ಇಷ್ಟೇನಾ? ರಿಕವರಿಗೆ ಎರಡೇ ದಿನ ಸಾಕು?

ರಾಜ್​ಕುಮಾರ್ ಹಿರಾನಿ ಹಾಗೂ ಶಾರುಖ್ ಪತ್ನಿ ಗೌರಿ ಖಾನ್ ಒಟ್ಟಾಗಿ ‘ಡಂಕಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಎರಡೇ ದಿನದಲ್ಲಿ ಬಜೆಟ್​ನ ರಿಕವರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Shah Rukh Khan: ‘ಡಂಕಿ’ ಸಿನಿಮಾ ಬಜೆಟ್​ ಇಷ್ಟೇನಾ? ರಿಕವರಿಗೆ ಎರಡೇ ದಿನ ಸಾಕು?
ಶಾರುಖ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 23, 2023 | 2:43 PM

Share

ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ (Dunki Movie) ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿರುವುದರಿಂದ ಶಾರುಖ್ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಮೊದಲು ರಿಲೀಸ್ ಆದ ಶಾರುಖ್ ಖಾನ್ ಸಿನಿಮಾಗಳಿಗಿಂತ ‘ಡಂಕಿ’ ಸಿನಿಮಾ ತುಂಬಾನೇ ಭಿನ್ನವಾಗಿ ಇರಲಿದೆಯಂತೆ. ಈ ಚಿತ್ರದ ಬಜೆಟ್ ಬಗ್ಗೆಯೂ ಒಂದಷ್ಟು ಮಾಹಿತಿ ಸಿಕ್ಕಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ 250 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡಿದೆ. ‘ಜವಾನ್’ ಸಿನಿಮಾದ ಬಜೆಟ್ 300 ಕೋಟಿ ರೂಪಾಯಿ ಮೇಲಿದೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿವೆ. ‘ಜವಾನ್’ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡಿದರೆ, ‘ಪಠಾಣ್’ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಡಿಸೆಂಬರ್ 22ರಂದು ರಿಲೀಸ್ ಆಗಲಿರುವ ಶಾರುಖ್ ನಟನೆಯ ‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದಾರೆ.

‘ಡಂಕಿ’ ಸಿನಿಮಾದ ಬಜೆಟ್ ಕೇವಲ 85 ಕೋಟಿ ರೂಪಾಯಿ! ಈ ವಿಚಾರ ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ರಾಜ್​ಕುಮಾರ್ ಹಿರಾನಿ ಸಿನಿಮಾಗಳಲ್ಲಿ ಹೆಚ್ಚಿನ ಆ್ಯಕ್ಷನ್ ಇರುವುದಿಲ್ಲ. ನಮ್ಮ ಎದುರು ನಡೆಯುವ ವಿಚಾರಗಳನ್ನೇ ಇಟ್ಟುಕೊಂಡು ಅವರು ಸಿನಿಮಾ ಮಾಡುತ್ತಾರೆ. ‘ಡಂಕಿ’ ಸಿನಿಮಾನೂ ಸಿಂಪಲ್ ಆಗಿ ಮೂಡಿ ಬಂದಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಚಿತ್ರದ ಬಜೆಟ್​ 100 ಕೋಟಿ ರೂಪಾಯಿ ಮೀರಿಲ್ಲ. 75 ದಿನಗಳಲ್ಲಿ ಶೂಟಿಂಗ್ ಮುಗಿಸುವ ಟಾರ್ಗೆಟ್​ನ ರಾಜ್​ಕುಮಾರ್ ಹಿರಾನಿ ಇಟ್ಟುಕೊಂಡಿದ್ದರು. ಅಂದುಕೊಂಡ ಡೇಟ್​ಗೆ ಅವರು ಶೂಟ್ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾದ ಬಜೆಟ್ ಮಿತಿ ಮೀರಿಲ್ಲ.

ರಾಜ್​ಕುಮಾರ್ ಹಿರಾನಿ ಹಾಗೂ ಶಾರುಖ್ ಪತ್ನಿ ಗೌರಿ ಖಾನ್ ಒಟ್ಟಾಗಿ ‘ಡಂಕಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಎರಡೇ ದಿನದಲ್ಲಿ ಬಜೆಟ್​ನ ರಿಕವರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

‘ಜವಾನ್’ ಹಾಗೂ ‘ಪಠಾಣ್’ ರೀತಿ ‘ಡಂಕಿ’ ಆ್ಯಕ್ಷನ್ ಸಿನಿಮಾ ಅಲ್ಲ. ಈ ಕಾರಣದಿಂದ ಮೊದಲ ದಿನ ಈ ಚಿತ್ರ 50+ ಕೋಟಿ ರೂಪಾಯಿ ಗಳಿಕೆ ಮಾಡೋದು ಅನುಮಾನ ಎನ್ನಲಾಗುತ್ತಿದೆ. ಸಿನಿಮಾ ಬಗ್ಗೆ ಒಳ್ಳೆಯ ಟಾಕ್​ ಶುರುವಾದಂತೆ ನಂತರದ ದಿನಗಳಲ್ಲಿ ಸಿನಿಮಾದ ಗಳಿಕೆ ಹೆಚ್ಚುತ್ತಾ ಹೋಗಲಿದೆ. ರಾಜ್​ಕುಮಾರ್ ಹಿರಾನಿ ಅವರು ಈ ವರೆಗೆ ಸೋಲು ಕಂಡಿಲ್ಲ. ಹೀಗಾಗಿ, ‘ಡಂಕಿ’ ಕೂಡ ಗೆಲ್ಲಲಿದೆ ಎಂಬುದು ಅನೇಕರ ಊಹೆ.

ಇದನ್ನೂ ಓದಿ: ‘ಏಕೆ ಟಾಮ್​ ಕ್ರೂಸ್ ರೀತಿ ಬೈಕ್ ಸ್ಟಂಟ್ಸ್ ಪ್ರಯತ್ನಿಸಬಾರದು?’; ಶಾರುಖ್ ಖಾನ್ ಕೊಟ್ರು ಉತ್ತರ

ಶಾರುಖ್ ಖಾನ್ ಜೊತೆ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಬೋಮನ್ ಇರಾನಿ ಮೊದಲಾದವರು ನಟಿಸಿದ್ದಾರೆ. ಲಂಡನ್​ಗೆ ಹೋಗುವ ಕನಸು ಕಾಣುವ ಐವರ ಕಥೆಯನ್ನು ಈ ಚಿತ್ರ ಹೊಂದಿರಲಿದೆ. ರೊಮ್ಯಾನ್ಸ್, ಕಾಮಿಡಿ ಸಿನಿಮಾದಲ್ಲಿ ಹೈಲೈಟ್ ಆಗಲಿದೆ. ಡಿಸೆಂಬರ್ 22ರಂದು ಸಿನಿಮಾ ರಿಲೀಸ್ ಆಗುತ್ತಿದೆ. ‘ಸಲಾರ್’ ಎದುರು ‘ಡಂಕಿ’ ಫೈಟ್​ಗೆ ಇಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್