ಗೆಳೆಯರ ಭಾವುಕ ಪಯಣ: ‘ಡಂಕಿ’ ಸಿನಿಮಾದಿಂದ ಹೊರಬಂತು ಭಾವುಕ ಹಾಡು

Dunki: ‘ಡಂಕಿ’ ಸಿನಿಮಾದ ಎರಡನೇ ಹಾಡು ಇದೀಗ ಬಿಡುಗಡೆ ಆಗಿದೆ. ಮೊದಲಿಗೆ ಶಾರುಖ್-ತಾಪ್ಸಿ ನಡುವಿನ ಯುಗಳ ಗೀತೆ ಬಿಡುಗಡೆ ಆಗಿತ್ತು, ಇದೀಗ ಭಾವುಕ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಗೆಳೆಯರ ಭಾವುಕ ಪಯಣ: ‘ಡಂಕಿ’ ಸಿನಿಮಾದಿಂದ ಹೊರಬಂತು ಭಾವುಕ ಹಾಡು
ಡಂಕಿ ಸಿನಿಮಾ
Follow us
ಮಂಜುನಾಥ ಸಿ.
|

Updated on:Dec 01, 2023 | 6:00 PM

ಶಾರುಖ್ ಖಾನ್ (Shah Rukh Khan) ವರ್ಷದ ಆರಂಭದಿಂದಲೂ ಗೆಲುವಿನ ಕುದುರೆಯ ಮೇಲೆಯೇ ಇದ್ದಾರೆ. ಮೊದಲು ಬಿಡುಗಡೆ ಆದ ‘ಪಠಾಣ್’ ಬ್ಲಾಕ್ ಬಸ್ಟರ್ ಆಯ್ತು. ಅದರ ಹಿಂದೆ ಬಂದ ‘ಜವಾನ್’ ಸಹ ಸೂಪರ್ ಡೂಪರ್ ಹಿಟ್ ಆಯ್ತು. ಅದಾದ ಬಳಿಕ ಈಗ ಮತ್ತೊಂದು ಬ್ಲಾಕ್ ಬಸ್ಟರ್ ನೀಡಲು ಶಾರುಖ್ ಖಾನ್ ತಯಾರಾಗಿದ್ದಾರೆ. ಭಾರತದ ಈಗಿನ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರಾದ ರಾಜ್​ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಸಿನಿಮಾನಲ್ಲಿ ಶಾರುಖ್ ನಟಿಸಿದ್ದು ಈ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

‘ಡಂಕಿ’ ಸಿನಿಮಾದ ಟೀಸರ್ ಹಾಗೂ ಒಂದು ಹಾಡು ಈಗಾಗಲೇ ಬಿಡುಗಡೆ ಆಗಿ ಗಮನ ಸೆಳೆದಿದೆ. ಇದೀಗ ಮೂರನೇ ಹಾಡು ಬಿಡುಗಡೆ ಆಗಿದೆ. ‘ಡಂಕಿ’ ಸಿನಿಮಾದ ಲುಟ್ ಪುಟ್ ಗಯಾ ಹಾಡು ಈ ಮೊದಲು ಬಿಡುಗಡೆ ಆಗಿ ಮೋಡಿ ಮಾಡಿದೆ. ಶಾರುಖ್ ಹಾಗೂ ತಾಪ್ಸಿ ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ ಸೇರಿದೆ. ಇದೀಗ ‘ಡಂಕಿ’ ಸಿನಿಮಾದ ಎಮೋಷನಲ್ ಹಾಡು ಬಿಡುಗಡೆಯಾಗಿದೆ. ‘ನಿಕ್ಲೆ ದ ಕಭಿ ಹಮ್ ಘರ್ ಸೆ’ ಎಂಬ ಸಾಹಿತ್ಯದ ಹಾಡು ಭಾವುಕವಾಗಿದೆ. ಈ ಹಾಡಿಗೆ ಜಾವೇದ್ ಅಖ್ತಾರ್ ಸಾಹಿತ್ಯ ಬರೆದಿದ್ದು, ಸೋನು ನಿಗಂ ಕಂಠ ನೀಡಿದ್ದಾರೆ, ಪ್ರೀತಂ ಸಂಗೀತ ಹಾಡಿನ ಶ್ರೀಮಂತಿಕೆ ಹೆಚ್ಚಿಸಿದೆ.

ಇದನ್ನೂ ಓದಿ:‘ಡಂಕಿ’ ಕ್ರೇಜ್: ಶಾರುಖ್ ಖಾನ್ ಸಿನಿಮಾ ನೋಡಲು ವಿದೇಶದಿಂದ ಬರುತ್ತಿದ್ದಾರೆ ಅಭಿಮಾನಿಗಳು

ನಾಲ್ಕು ಜನ ಸ್ನೇಹಿತರು ಒಂದು ದೇಶವನ್ನು ಬಿಟ್ಟು ಮತ್ತೊಂದು ದೇಶಕ್ಕೆ ಹೋಗುವುದ್ದೇ ಚಿತ್ರದ ಕಥೆ. ಆ ಕಥೆಯ ಎಮೋಷನಲ್ ಪಯಣವನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಹಾಡಿನಲ್ಲಿ ಅಲ್ಲಲ್ಲಿ ವಿಡಿಯೋ ತುಣುಕುಗಳು, ಚಿತ್ರಗಳನ್ನು ಬಳಸಲಾಗಿದ್ದು, ಸುಂದರವಾದ ದೃಶ್ಯಗಳನ್ನು ಸಹ ತೋರಿಸಲಾಗಿದೆ. ‘3 ಇಡಿಯಟ್ಸ್’, ‘ಲಗೆ ರಹೋ ಮುನ್ನಾಭಾಯಿ’, ‘ಪಿಕೆ’, ‘ಸಂಜು’, ‘ಮುನ್ನಾಭಾಯಿ ಎಂಬಿಬಿಎಸ್’ ರೀತಿಯ ಅತ್ಯುತ್ತಮ ಸಿನಿಮಾಗಳನ್ನು ನೀಡಿರುವ ರಾಜ್ಕುಮಾರ್ ಹಿರಾನಿ ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಜೊತೆ ಸೇರಿ ‘ಡಂಕಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಶಾರುಖ್ ಖಾನ್ ಗೆ ನಾಯಕಿಯಾಗಿ ತಾಪ್ಸಿ ಪನ್ನು, ವಿಕ್ಕಿ ಕೌಶಲ್ ಸೇರಿದಂತೆ ಇನ್ನೂ ಕೆಲವು ನಟರು ನಟಿಸಿದ್ದಾರೆ. ಭಾರತದಿಂದ ಅಕ್ರಮವಾಗಿ ಕೆಲ ಯುವಕರು ವಿದೇಶಕ್ಕೆ ತೆರಳುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

‘ಡಂಕಿ’ ಸಿನಿಮಾವನ್ನು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್‌ಟೈನ್ಮೆಂಟ್ ಹಾಗೂ ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಹಾಗೂ ಜಿಯೋ ಸಿನಿಮಾಸ್ ಬ್ಯಾನರ್‌ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್ 21ಕ್ಕೆ ‘ಡಂಕಿ’ ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾ ಪಕ್ಕಾ 1000 ಕೋಟಿಗೂ ಹೆಚ್ಚು ಮೊತ್ತ ಗಳಿಸಲಿದೆ ಎಂದು ಬಾಕ್ಸ್ ಆಫೀಸ್ ವಿಶ್ಲೇಷಕರು ಭವಿಷ್ಯ ನುಡಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Fri, 1 December 23

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ