ಬಾಕ್ಸ್ ಆಫೀಸ್​ನಲ್ಲಿ ‘ಸಲಾರ್’ Vs ‘ಡಂಕಿ’; ಪ್ರಭಾಸ್-ಶಾರುಖ್ ಮಧ್ಯೆ ಗೆಲ್ಲೋರು ಯಾರು?

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾ ಹಾಗೂ ಶಾರುಖ್ ಸಿನಿಮಾ ಮುಖಾಮುಖಿ ಆಗುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಶಾರುಖ್ ಅಭಿನಯದ ‘ಜೀರೋ’ ಹಾಗೂ ಹೊಂಬಾಳೆ ನಿರ್ಮಾಣದ ‘ಡಂಕಿ’ ಸಿನಿಮಾ ಒಟ್ಟಾಗಿ ರಿಲೀಸ್ ಆಗಿತ್ತು. ಆ ವೇಳೆ ‘ಕೆಜಿಎಫ್’ ಗೆದ್ದಿತ್ತು.

ಬಾಕ್ಸ್ ಆಫೀಸ್​ನಲ್ಲಿ ‘ಸಲಾರ್’ Vs ‘ಡಂಕಿ’; ಪ್ರಭಾಸ್-ಶಾರುಖ್ ಮಧ್ಯೆ ಗೆಲ್ಲೋರು ಯಾರು?
ಶಾರುಖ್​-ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on:Sep 26, 2023 | 7:57 AM

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ ಹೋಯಿತು. ಈಗ ಸಿನಿಮಾ ಕ್ರಿಸ್​ಮಸ್​ಗೆ ಬರೋಕೆ ರೆಡಿ ಆಗಿದೆ. ಒಂದೊಮ್ಮೆ ಈ ಸುದ್ದಿ ನಿಜವೇ ಆದಲ್ಲಿ ‘ಸಲಾರ್’ ಹಾಗೂ ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಮಧ್ಯೆ ಭರ್ಜರಿ ಕ್ಲ್ಯಾಶ್ ಏರ್ಪಡಲಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ. ಹೊಂಬಾಳೆ ಫಿಲ್ಮ್ಸ್ ಶೀಘ್ರವೇ ಈ ಬಗ್ಗೆ ಘೋಷಣೆ ಮಾಡಲಿದೆ.

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿತ್ತು. ಮೂಲಗಳ ಪ್ರಕಾರ ‘ಕೆಜಿಎಫ್ 2’ ಚಿತ್ರಕ್ಕೂ ‘ಸಲಾರ್’ಗೂ ಲಿಂಕ್ ಇದೆ ಎಂದು ಹೇಳಲಾಗುತ್ತಿದೆ. ಈಗ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

‘ಹೌದು ಇದು ನಿಜ. ಎಸ್​ಆರ್​ಕೆ vs ಪ್ರಭಾಸ್. ಈ ಕ್ರಿಸ್​ಮಸ್​ಗೆ ‘ಡಂಕಿ’ vs ಸಲಾರ್. ಸಲಾರ್ ಕ್ರಿಸ್​ಮಸ್​ಗೆ ರಿಲೀಸ್ ಆಗಲಿದೆ ಎಂದು ಪ್ರದರ್ಶಕರಿಗೆ ಮೇಲ್ ಬಂದಿದೆ. ಶುಕ್ರವಾರ (ಸೆಪ್ಟೆಂಬರ್ 29) ನಿರ್ಮಾಪಕರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ’ ಎಂದು ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಸಲಾರ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಕಡೆಗೂ ಮೌನ ಮುರಿದ ‘ಹೊಂಬಾಳೆ ಫಿಲ್ಮ್ಸ್​’

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾ ಹಾಗೂ ಶಾರುಖ್ ಸಿನಿಮಾ ಮುಖಾಮುಖಿ ಆಗುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಶಾರುಖ್ ಅಭಿನಯದ ‘ಜೀರೋ’ ಹಾಗೂ ಹೊಂಬಾಳೆ ನಿರ್ಮಾಣದ ‘ಕೆಜಿಎಫ್’ ಸಿನಿಮಾ ಒಟ್ಟಾಗಿ ರಿಲೀಸ್ ಆಗಿತ್ತು. ಆ ವೇಳೆ ‘ಕೆಜಿಎಫ್’ ಗೆದ್ದಿತ್ತು. ಈಗ ಯಾವ ಸಿನಿಮಾ ರೂಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಗ್ಗೆ ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Tue, 26 September 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್