2ನೇ ದಿನವೂ ಸುನಾಮಿ ಎಬ್ಬಿಸಿದ ‘ಜವಾನ್’; ಭಾರತದಲ್ಲಿ 120 ಕೋಟಿ ರೂ. ದಾಟಿದ ಕಲೆಕ್ಷನ್
ಇಷ್ಟು ದಿನಗಳ ಕಾಲ ಬಾಲಿವುಡ್ ಬಾಕ್ಸ್ ಆಫೀಸ್ನಲ್ಲಿ ‘ಗದರ್ 2’ ಸಿನಿಮಾ ಸದ್ದು ಮಾಡುತ್ತಿತ್ತು. ಈಗ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕಮಾಲ್ ಮಾಡುತ್ತಿದೆ. ಮೊದಲ ಎರಡು ದಿನಗಳ ಕಾಲ ಅನೇಕ ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಂಡಿದೆ. ಎರಡೇ ದಿನದಲ್ಲಿ ಈ ಸಿನಿಮಾಗೆ ನೂರಾರು ಕೋಟಿ ರೂ. ಕಮಾಯಿ ಆಗಿದೆ.
ಈ ವರ್ಷ ಶಾರುಖ್ ಖಾನ್ ಅವರು ಎರಡನೇ ಸೂಪರ್ ಹಿಟ್ ಚಿತ್ರ ನೀಡಿದ್ದಾರೆ. ವರ್ಷದ ಆರಂಭದಲ್ಲಿ ‘ಪಠಾಣ್’ ಸಿನಿಮಾ ಅಬ್ಬರಿಸಿತ್ತು. ಈಗ ‘ಜವಾನ್’ ಸಿನಿಮಾ (Jawan Movie) ಕೂಡ ಸಖತ್ ಸದ್ದು ಮಾಡುತ್ತಿದೆ. ಸೆಪ್ಟೆಂಬರ್ 7ರಂದು ‘ಜವಾನ್’ ಸಿನಿಮಾ ಬಿಡುಗಡೆ ಆಯಿತು. ಮೊದಲ ದಿನ ಹಿಂದಿ, ತೆಲುಗು, ತಮಿಳು ಭಾಷೆಗಳಿಂದ ಈ ಸಿನಿಮಾಗೆ ಅಂದಾಜು 75 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಎರಡನೇ ದಿನ ಕೂಡ ಬಾಕ್ಸ್ ಆಫೀಸ್ನಲ್ಲಿ (Jawan Day 2 Collection) ಸುನಾಮಿ ಎದ್ದಿದೆ. 2ನೇ ದಿನ 50ರಿಂದ 53 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅಂದರೆ, ಎರಡೇ ದಿನಕ್ಕೆ ‘ಜವಾನ್’ ಸಿನಿಮಾದ ಕಲೆಕ್ಷನ್ 120 ಕೋಟಿ ರೂಪಾಯಿ ದಾಟಿದಂತಾಗುತ್ತದೆ. ವಿದೇಶಿ ಕಲೆಕ್ಷನ್ ಸೇರಿಸಿದರೆ ಈ ಮೊತ್ತ ಇನ್ನೂ ದೊಡ್ಡದಾಗಲಿದೆ. ಈ ಗೆಲುವಿನಿಂದ ಶಾರುಖ್ ಖಾನ್ (Shah Rukh Khan) ಅವರ ಮುಖದಲ್ಲಿ ನಗು ಅರಳಿದೆ.
ಸೌತ್ ಸಿನಿಮಾ ಮತ್ತು ಬಾಲಿವುಡ್ ಮಿಶ್ರಣದ ರೀತಿಯಲ್ಲಿ ‘ಜವಾನ್’ ಚಿತ್ರ ಮೂಡಿಬಂದಿದೆ. ತಮಿಳಿನ ಯಶಸ್ವಿ ನಿರ್ದೇಶಕ ಅಟ್ಲಿ ಅವರು ಈ ಸಿನಿಮಾದ ಮೂಲಕ ಇದೇ ಮೊದಲ ಬಾರಿಗೆ ಬಾಲಿವುಡ್ಗೆ ಕಾಲಿಟ್ಟಿದ್ದಾರೆ. ನಯನತಾರಾ, ಪ್ರಿಯಾಮಣಿ, ವಿಜಯ್ ಸೇತುಪತಿ ಮುಂತಾದ ದಕ್ಷಿಣದ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ತೆರೆ ಹಿಂದೆ ಕೂಡ ಸೌತ್ ಸಿನಿಮಾ ಇಂಡಸ್ಟ್ರಿಯ ಪ್ರತಿಭಾವಂತರು ಕೆಲಸ ಮಾಡಿದ್ದಾರೆ. ಇನ್ನು, ಬಾಲಿವುಡ್ ಕಲಾವಿದರಾದ ದೀಪಿಕಾ ಪಡುಕೋಣೆ, ಸುನಿಲ್ ಗ್ರೋವರ್ ಮುಂತಾದವರು ಕೂಡ ‘ಜವಾನ್’ ಚಿತ್ರದ ಮೆರುಗು ಹೆಚ್ಚಿಸಿದ್ದಾರೆ.
ಇದನ್ನೂ ಓದಿ: ‘ಜವಾನ್’ ಅಬ್ಬರಕ್ಕೆ ಹೆದರಿದ ಕಂಗನಾ ರಣಾವತ್? ಮುಂದಕ್ಕೆ ಹೋಯ್ತು ‘ಚಂದ್ರಮುಖಿ 2’ ಬಿಡುಗಡೆ ದಿನಾಂಕ
ಇಷ್ಟು ದಿನಗಳ ಕಾಲ ಬಾಲಿವುಡ್ ಬಾಕ್ಸ್ ಆಫೀಸ್ನಲ್ಲಿ ‘ಗದರ್ 2’ ಸಿನಿಮಾ ಸದ್ದು ಮಾಡುತ್ತಿತ್ತು. ಆ ಸಿನಿಮಾ 300 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್ ಮಾಡಿದೆ. ಈಗ ‘ಜವಾನ್’ ಸಿನಿಮಾ ಕಮಾಲ್ ಮಾಡುತ್ತಿದೆ. ಮೊದಲ ಎರಡು ದಿನಗಳ ಕಾಲ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡಿದೆ. ಆ್ಯಕ್ಷನ್ ಪ್ರಿಯರು ಈ ಸಿನಿಮಾವನ್ನು ಸಖತ್ ಇಷ್ಟಪಟ್ಟಿದ್ದಾರೆ. ಪ್ರೇಕ್ಷಕರಿಂದ ಉತ್ತಮವಾದ ಬಾಯಿ ಮಾತಿನ ಪ್ರಚಾರ ಸಿಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ‘ಜವಾನ್’ ಸಿನಿಮಾಗೆ ಬಾಕ್ಸ್ ಆಫೀಸ್ನಲ್ಲಿ ಅತ್ಯುತ್ತಮವಾಗಿ ಕಮಾಯಿ ಆಗುತ್ತಿದೆ.
ಇದನ್ನೂ ಓದಿ: ‘ಜವಾನ್’ ಸಿನಿಮಾದ ಜಯಭೇರಿಯ ಹಿಂದಿರುವ ಮೋಡಿಗಾರ ಅಟ್ಲಿ
ಶಾರುಖ್ ಖಾನ್ ಅವರ ‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಮೂಲಕ ‘ಜವಾನ್’ ಸಿನಿಮಾ ನಿರ್ಮಾಣ ಆಗಿದೆ. ಗೌರಿ ಖಾನ್ ಅವರು ಈ ಚಿತ್ರದ ನಿರ್ಮಾಪಕಿ. ಅದ್ದೂರಿ ಬಜೆಟ್ನಲ್ಲಿ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಭರ್ಜರಿ ಕಲೆಕ್ಷನ್ ಆಗುತ್ತಿರುವುದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಲಾಭ ಆಗುತ್ತಿದೆ. ಇನ್ನೂ ಹಲವು ದಿನಗಳ ಕಾಲ ಈ ಸಿನಿಮಾದ ಅಬ್ಬರ ಮುಂದುವರಿಯಲಿದೆ. ಶಾರುಖ್ ಖಾನ್ ಅವರು ಬಾಲಿವುಡ್ನಲ್ಲಿ ತಾವು ಕಿಂಗ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ನಿರ್ದೇಶಕ ಅಟ್ಲಿ ಅವರಿಗೆ ಬಾಲಿವುಡ್ನಲ್ಲಿ ಬೇಡಿಕೆ ಹೆಚ್ಚಾಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.