AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ‘ಜವಾನ್’ ಆಡಿಯೋ; ಟಿ-ಸೀರಿಸ್ ಪಾಲಾದ ಹಕ್ಕು

‘ಜವಾನ್’ ಚಿತ್ರದ ಆಡಿಯೋ ಹಕ್ಕನ್ನು ಖರೀದಿಸಲು ಭರ್ಜರಿ ಪೈಪೋಟಿ ಮೂಡಿತ್ತು.  ಈಗ ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆ ಟಿ-ಸೀರೀಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ‘ಜವಾನ್’ ಆಡಿಯೋ; ಟಿ-ಸೀರಿಸ್ ಪಾಲಾದ ಹಕ್ಕು
ಜವಾನ್
ರಾಜೇಶ್ ದುಗ್ಗುಮನೆ
|

Updated on: Jul 01, 2023 | 2:55 PM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಚಿತ್ರ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ವಿಶ್ವಾದ್ಯಂತ 1000+ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದಾರೆ. ಸತತ ಸೋಲುಗಳಿಂದ ಕಂಗೆಟ್ಟು ನಾಲ್ಕು ವರ್ಷ ಬ್ರೇಕ್ ಪಡೆದಿದ್ದ ಶಾರುಖ್ ಖಾನ್ ಅವರು ಈ ಚಿತ್ರದ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದರು. ಈಗ ‘ಜವಾನ್’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ತಮಿಳಿನ ಅಟ್ಲಿ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಆಡಿಯೋ ಹಕ್ಕು ಬರೋಬ್ಬರಿ 36 ಕೋಟಿ ರೂಪಾಯಿಗೆ ಮಾರಾಟ ಆದ ಬಗ್ಗೆ ವರದಿ ಆಗಿದೆ.

ಶಾರುಖ್ ಖಾನ್ ಸಿನಿಮಾಗಳು ಒಳ್ಳೆಯ ಬಿಸ್ನೆಸ್ ಮಾಡುತ್ತವೆ. ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತದೆ. ‘ಜವಾನ್​’ ಚಿತ್ರಕ್ಕಾಗಿ ಶಾರುಖ್ ಜೊತೆ ಅಟ್ಲಿ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದ ಆಡಿಯೋ ಹಕ್ಕನ್ನು ಖರೀದಿಸಲು ಭರ್ಜರಿ ಪೈಪೋಟಿ ಮೂಡಿತ್ತು.  ಈಗ ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆ ಟಿ-ಸೀರೀಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ‘ವಿಕ್ರಮ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗ ಅವರು ‘ಜವಾನ್’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಹಾಡುಗಳ ಮೇಲೆ ನಿರೀಕ್ಷೆ ಹೆಚ್ಚಿದೆ. ಇದೇ ಕಾರಣಕ್ಕೆ ಟಿ-ಸೀರಿಸ್ ಇಷ್ಟು ದೊಡ್ಡ ಮೊತ್ತದ ಹಣ ಕೊಟ್ಟು ಹಾಡುಗಳನ್ನು ಖರೀದಿಸಿದೆ.

ಇದನ್ನೂ ಓದಿ: ಕಮಲ್ ಹಾಸನ್ ಜೊತೆ ನಟಿಸಲು ಷರತ್ತು ಇರಿಸಿದ್ದ ಶಾರುಖ್ ಖಾನ್: ಕಮಲ್​ರನ್ನು ಕಾಪಾಡಿದ್ದು ಅದೇ ಷರತ್ತು

‘ರೆಡ್ ಚಿಲ್ಲೀಸ್​ ಎಂಟರ್​ಟೇನ್​ಮೆಂಟ್​’ ಅಡಿಯಲ್ಲಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಹೋಂ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿರುವುದರಿಂದ ಶಾರುಖ್ ಹೆಚ್ಚು ಗಮನಹರಿಸಿ ಸಿನಿಮಾ ಮಾಡುತ್ತಿದ್ದಾರೆ. ‘ಜವಾನ್’ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ. ಶಾರುಖ್ ಖಾನ್ ಜೊತೆ ನಯನತಾರಾ, ವಿಜಯ್ ಸೇತುಪತಿ, ಯೋಗಿ ಬಾಬು, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ ಸುನೀಲ್ ಗ್ರೋವರ್ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಸಂಜಯ್ ದತ್, ದೀಪಿಕಾ ಪಡುಕೋಣೆ ಮೊದಲಾದವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ