AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Shah Rukh Khan: ‘ಪಠಾಣ್​’ ರೀತಿ ‘ಜವಾನ್​’ ಕೂಡ ಮಾಡಲಿದೆ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್​; ಸಿಕ್ಕಿದೆ ಮುನ್ಸೂಚನೆ

Jawan Movie: ‘ಜವಾನ್’ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿರುವುದರಿಂದ, ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿವೆ. ದೊಡ್ಡ ಮೊತ್ತ ಕೊಟ್ಟು ಹಕ್ಕುಗಳನ್ನು ಖರೀದಿಸಿರುವ ಸುದ್ದಿ ಬಂದಿದೆ.

​Shah Rukh Khan: ‘ಪಠಾಣ್​’ ರೀತಿ ‘ಜವಾನ್​’ ಕೂಡ ಮಾಡಲಿದೆ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್​; ಸಿಕ್ಕಿದೆ ಮುನ್ಸೂಚನೆ
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jun 08, 2023 | 7:35 PM

Share

ನಟ ಶಾರುಖ್​ ಖಾನ್​ (​Shah Rukh Khan) ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ಟ್ರ್ಯಾಕ್​ಗೆ ಮರಳಿದ್ದಾರೆ. ಈಗ ಅವರು ಅಭಿನಯಿಸುತ್ತಿರುವ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಬಜೆಟ್​ನ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಜವಾನ್​’ (​Jawan Movie) ಪಾತ್ರವಾಗುತ್ತಿದೆ. ಈ ಚಿತ್ರವನ್ನು ಶಾರುಖ್ ಖಾನ್ ಅವರ ‘ರೆಡ್ ಚಿಲ್ಲೀಸ್ ಎಂಟರ್​ಟೈನ್​ಮೆಂಟ್’ ಸಂಸ್ಥೆ ನಿರ್ಮಿಸುತ್ತಿದೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಾದ ಅಟ್ಲಿ ಕುಮಾರ್ (​Atlee Kumar)​ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಜವಾನ್’ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿರುವುದರಿಂದ, ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿವೆ. ದೊಡ್ಡ ಮೊತ್ತ ಕೊಟ್ಟು ಹಕ್ಕುಗಳನ್ನು ಖರೀದಿಸಿರುವ ಸುದ್ದಿ ಬಂದಿದೆ.

ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರುಖ್ ಖಾನ್​ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ ಸಾವಿರ ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿತ್ತು. ಈಗ ಆ ಸಿನಿಮಾದ ರೀತಿಯೇ ‘ಜವಾನ್​’ ಚಿತ್ರ ಕೂಡ ಬಿಸ್ನೆಸ್​ ಮಾಡುವ ಮುನ್ಸೂಚನೆ ಸಿಕ್ಕಿದೆ. ‘ಜವಾನ್’ ಚಿತ್ರದ ಒಟಿಟಿ, ಸ್ಯಾಟಿಲೈಟ್ ಮತ್ತು ಆಡಿಯೋ ಹಕ್ಕುಗಳಿಗೆ ಬೇರೆಬೇರೆ ಸಂಸ್ಥೆಗಳು ದೊಡ್ಡ ಆಫರ್ ನೀಡಿವೆ ಎನ್ನಲಾಗುತ್ತಿದೆ. ಭಾರಿ ಮೊತ್ತಕ್ಕೆ ಹಕ್ಕುಗಳು ಸೇಲ್​ ಆಗಿರುವ ಸುದ್ದಿ ಇದೆ. ಆದರೆ, ಎಷ್ಟು ಕೋಟಿಗೆ ಹಕ್ಕುಗಳು ಮಾರಾಟವಾಗಿವೆ ಎಂಬ ಮಾಹಿತಿಯನ್ನು ಚಿತ್ರತಂಡದವರು ಬಹಿರಂಗಗೊಳಿಸಿಲ್ಲ.

ಇದನ್ನೂ ಓದಿ: Allu Arjun: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​

ಆಕ್ಷನ್ ಥ್ರಿಲ್ಲರ್ ಶೈಲಿಯ ‘ಜವಾನ್​’ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಅಭಿನಯಿಸಿದ್ದಾರೆ. ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್ ಅವರು ಈ ಚಿತ್ರದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಆದಷ್ಟು ಬೇಗ ಈ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Jawan: ಶಾರುಖ್​ ಖಾನ್​-ಸಂಜಯ್​ ದತ್​ ಮುಖಾಮುಖಿ; ‘ಜವಾನ್​’ ಚಿತ್ರದಲ್ಲಿ ಭರ್ಜರಿ ಫೈಟ್​

ಸಾನ್ಯಾ ಮಲ್ಹೋತ್ರಾ ಅವರು ಸಹ ಈ ಬಹುನಿರೀಕ್ಷಿತ ಚಿತ್ರದಲ್ಲಿ ನಟಿಸಿರಬಹುದು ಎಂಬ ಗುಮಾನಿ ಹಲವರಿಗೆ ಮೂಡಿತ್ತು. ಆ ಬಗ್ಗೆ ಕೆಲವು ವರದಿಗಳು ಪ್ರಕಟ ಆಗಿದ್ದವು. ಈಗ ಆ ಗುಮಾನಿ ನಿಜವಾಗಿದೆ. ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಸಾನ್ಯಾ ಮಲ್ಹೋತ್ರಾ ಅವರು ಖುಷಿಯಾಗಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ತಮಿಳು ಚಿತ್ರರಂಗದಲ್ಲಿ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿರುವ ಅಟ್ಲಿ ಕುಮಾ​ರ್​ ಜೊತೆ ಶಾರುಖ್​ ಖಾನ್​ ಅವರು ಮೊದಲ ಬಾರಿ ಕೈ ಜೋಡಿಸಿರುವುದರಿಂದ ಹೈಪ್​ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್