ಶಾರುಖ್ ಖಾನ್​ಗಾಗಿ ಬೇರೆ ಚಿತ್ರಗಳಿಂದ ಲುಕ್​ನ ಕದಿಯಲಾಯಿತೇ? ‘ಜವಾನ್​’ ಚಿತ್ರದ ಬಗ್ಗೆ ಹುಟ್ಟಿದೆ ಚರ್ಚೆ

Jawan Movie: ಶಾರುಖ್ ಖಾನ್ ಅವರು ಅಟ್ಲಿ ಜೊತೆ ಸೇರಿ ಏನೋ ಹೊಸದನ್ನು ಮಾಡಲು ಹೊರಟಿದ್ದಾರೆ ಎಂಬ ಭರವಸೆ ಮೂಡಿದೆ. ಹೀಗಿರುವಾಗಲೇ ಶಾರುಖ್ ಲುಕ್​ ಮೇಲೆ ಕದ್ದ ಆರೋಪ ಎದುರಾಗಿದೆ.

ಶಾರುಖ್ ಖಾನ್​ಗಾಗಿ ಬೇರೆ ಚಿತ್ರಗಳಿಂದ ಲುಕ್​ನ ಕದಿಯಲಾಯಿತೇ? ‘ಜವಾನ್​’ ಚಿತ್ರದ ಬಗ್ಗೆ ಹುಟ್ಟಿದೆ ಚರ್ಚೆ
ಜವಾನ್​ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Jul 11, 2023 | 7:52 AM

‘ಜವಾನ್’ ಸಿನಿಮಾದ (Jawan Movie) ಪ್ರಿವ್ಯೂ ಜುಲೈ 10ರಂದು ರಿಲೀಸ್ ಆಗಿ ಸಾಕಷ್ಟು ಸದ್ದು ಮಾಡುತ್ತಿದೆ. 20 ಗಂಟೆಯಲ್ಲಿ ಈ ಪ್ರಿವ್ಯೂ 4 ಕೋಟಿ ಬಾರಿ ವೀಕ್ಷಣೆ ಕಂಡಿದೆ ಅನ್ನೋದು ವಿಶೇಷ. ಶಾರುಖ್ ಖಾನ್ (Shah Rukh Khan) ಅವರು ಹಲವು ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಟಪ್​ಗಳನ್ನು ಬೇರೆ ಬೇರೆ ಕಡೆಯಿಂದ ಕದಿಯಲಾಗಿದೆ ಎಂಬ ಆರೋಪವನ್ನು ಅನೇಕರು ಮಾಡಿದ್ದಾರೆ. ಈ ಆರೋಪದಿಂದ ಚಿತ್ರತಂಡಕ್ಕೆ ಹಿನ್ನಡೆ ಆಗುವ ಸಾಧ್ಯತೆ ಹೆಚ್ಚಿದೆ. ಶಾರುಖ್ ಕಟ್ಟಾಭಿಮಾನಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತು. ಇದೇ ಹುಮ್ಮಸಿನಲ್ಲಿ ಶಾರುಖ್ ಖಾನ್ ಅವರು ‘ಜವಾನ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಪ್ರಿವ್ಯೂ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಶಾರುಖ್ ಖಾನ್ ಅವರು ಅಟ್ಲಿ ಜೊತೆ ಸೇರಿ ಏನೋ ಹೊಸದನ್ನು ಮಾಡಲು ಹೊರಟಿದ್ದಾರೆ ಎಂಬ ಭರವಸೆ ಮೂಡಿದೆ. ಹೀಗಿರುವಾಗಲೇ ಶಾರುಖ್ ಲುಕ್​ ಮೇಲೆ ಕದ್ದ ಆರೋಪ ಎದುರಾಗಿದೆ.

‘ಜವಾನ್’ ಪ್ರಿವ್ಯೂನಲ್ಲಿ ಮಗುವನ್ನು ಎತ್ತಿಕೊಳ್ಳುವ ದೃಶ್ಯವೊಂದು ಬರುತ್ತದೆ. ಇದನ್ನು ಅನೇಕರು ‘ಬಾಹುಬಲಿ 2’ ಚಿತ್ರದಲ್ಲಿ ಬರುವ ದೃಶ್ಯಕ್ಕೆ ಹೋಲಿಕೆ ಮಾಡಿದ್ದಾರೆ. ಶಾರುಖ್ ಖಾನ್ ಅವರು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವ ಮಾದರಿಯ ದೃಶ್ಯ ಒಂದು ಬರುತ್ತದೆ. ಇದನ್ನು, ವಿಕ್ರಮ್ ನಟನೆಯ ‘ಅಪರಿಚಿತ್’ ಚಿತ್ರಕ್ಕೆ ಕಂಪ್ಯಾರ್ ಮಾಡಲಾಗಿದೆ. ಶಾರುಖ್ ಖಾನ್ ಅವರು ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದು, ಇದನ್ನು ‘ಡಾರ್ಕ್​ ಮ್ಯಾನ್’ ಚಿತ್ರಕ್ಕೆ ಹೋಲಿಸಲಾಗಿದೆ.

ಇಷ್ಟಕ್ಕೇ ನಿಂತಿಲ್ಲ. ಶಾರುಖ್ ಖಾನ್ ಅವರು ತಲೆಯ ಮೇಲೆ ಸಂಪೂರ್ಣವಾಗಿ ಕೂದಲು ಇಲ್ಲದೆ ಕಾಣಿಸಿಕೊಳ್ಳುತ್ತಾರೆ. ಇದನ್ನು ‘ಶಿವಾಜಿ’ ಚಿತ್ರದಲ್ಲಿ ಬರುವ ರಜನಿಕಾಂತ್ ಪಾತ್ರಕ್ಕೆ ಹೋಲಿಕೆ ಮಾಡಲಾಗಿದೆ. ಒಟ್ಟಾರೆ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ.

ಇದನ್ನೂ ಓದಿ: Shah Rukh Khan: ಬಿಡುಗಡೆಗೂ ಮುನ್ನವೇ ‘ಜವಾನ್​’ ಚಿತ್ರವನ್ನು ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ ಕರಣ್​ ಜೋಹರ್​

‘ಜವಾನ್’ ಚಿತ್ರದಲ್ಲಿ ಶಾರುಖ್​ಗೆ ಜೊತೆಯಾಗಿ ನಯನತಾರಾ ನಟಿಸಿದ್ದಾರೆ. ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ನಿರ್ದೇಶಕ ಅಟ್ಲಿ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಶಾರುಖ್ ಖಾನ್ ಹೋಂ ಬ್ಯಾನರ್ ‘ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಮೂಲಕ ಸಿನಿಮಾ ಸಿದ್ಧಗೊಳ್ಳುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್