Jawan: ಯಾವಾಗ ಬರುತ್ತೆ ‘ಜವಾನ್​’ ಟೀಸರ್​? ಧಮಾಕ ಶುರು ಮಾಡಲು ಶಾರುಖ್​ ಖಾನ್​ ರೆಡಿ

‘ಜವಾನ್​’ ಸಿನಿಮಾದ ಬಿಡುಗಡೆಗೆ ಇನ್ನು 2 ತಿಂಗಳು ಮಾತ್ರ ಬಾಕಿ ಇದೆ. ಹಾಗಾಗಿ ಈಗಿನಿಂದಲೇ ಪ್ರಚಾರ ಕಾರ್ಯ ಶುರುಮಾಡಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ.

Jawan: ಯಾವಾಗ ಬರುತ್ತೆ ‘ಜವಾನ್​’ ಟೀಸರ್​? ಧಮಾಕ ಶುರು ಮಾಡಲು ಶಾರುಖ್​ ಖಾನ್​ ರೆಡಿ
ಜವಾನ್​ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Jun 28, 2023 | 3:34 PM

ನಟ ಶಾರುಖ್​ ಖಾನ್​ (Shah Rukh Khan) ಅವರ ಅಭಿಮಾನಿಗಳು ‘ಜವಾನ್​’ ಸಿನಿಮಾಗಾಗಿ ಕಾಯುತ್ತಿದ್ದಾರೆ. ‘ಪಠಾಣ್​’ ಚಿತ್ರದ ಮೂಲಕ ಭರ್ಜರಿ ಕಮ್​ಬ್ಯಾಕ್​ ಮಾಡಿದ ಶಾರುಖ್​ ಅವರು ‘ಜವಾನ್​’ (Jawan) ಸಿನಿಮಾದಿಂದ ಮತ್ತೊಮ್ಮೆ ದೊಡ್ಡ ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಈ ಸಿನಿಮಾದ ಬಗ್ಗೆ ಹೈಪ್​ ಹೆಚ್ಚಾಗಲು ಹಲವು ಕಾರಣಗಳಿವೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ವಿಜಯ್​ ಸೇತುಪತಿ, ನಯನತಾರಾ ಮುಂತಾದ ಘಟಾನುಘಟಿ ಕಲಾವಿದರು ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈಗ ‘ಜವಾನ್​’ ಟೀಸರ್​ (Jawan teaser) ಬಗ್ಗೆ ಹೊಸ ಸುದ್ದಿ ಕೇಳಿಬಂದಿದೆ. ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲು ಈ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

ಸೆಪ್ಟೆಂಬರ್​ 7ರಂದು ‘ಜವಾನ್​’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೆ ಇನ್ನು 2 ತಿಂಗಳು ಮಾತ್ರ ಬಾಕಿ ಇದೆ. ಹಾಗಾಗಿ ಈಗಿನಿಂದಲೇ ಪ್ರಚಾರ ಕಾರ್ಯ ಶುರುಮಾಡಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ. ಜುಲೈ 7 ಅಥವಾ ಜುಲೈ 15ರಂದು ‘ಜವಾನ್​’ ಟೀಸರ್​ ಅನಾವರಣ ಆಗುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಇದೊಂದು ಆ್ಯಕ್ಷನ್ ಸಿನಿಮಾ ಆಗಿರಲಿದ್ದು, ಟೀಸರ್​ನಲ್ಲಿ ಸಾಹಸ ದೃಶ್ಯಗಳ ಝಲಕ್​ ಕಾಣಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Suhana Khan: ಜೊತೆಯಾಗಿ ಸಿನಿಮಾ ಮಾಡ್ತಾರೆ ಶಾರುಖ್​ ಖಾನ್​-ಸುಹಾನಾ ಖಾನ್​? ತಂದೆ-ಮಗಳ ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

‘ತುಂಬ ಅದ್ದೂರಿಯಾಗಿ ಜವಾನ್ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಗುವುದು. ಈವರೆಗೂ ಕಾಣಿಸಿಕೊಂಡಿರದ ಗೆಟಪ್​ನಲ್ಲಿ ಶಾರುಖ್​ ಖಾನ್​ ಪಾತ್ರ ಇರಲಿದೆ. ಡಿಜಿಟಲ್​ ಪ್ಲಾಟ್​ಫಾರ್ಮ್​ಗಳಲ್ಲಿ ಬಹಳ ಗ್ರ್ಯಾಂಡ್​ ಆಗಿ ಟೀಸರ್​ ಹಂಚಿಕೊಳ್ಳಲಾಗುವುದು’ ಎನ್ನುತ್ತಿವೆ ಚಿತ್ರತಂಡದ ಮೂಲಗಳು. ಈ ಬಗ್ಗೆ ‘ಜವಾನ್​’ ಬಳಗದಿಂದ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಇತ್ತೀಚೆಗೆ ಶಾರುಖ್​ ಖಾನ್​ ಅವರು ಟ್ವಿಟರ್​ನಲ್ಲಿ ಫ್ಯಾನ್ಸ್​ ಜೊತೆ ಪ್ರಶ್ನೋತ್ತರ ನಡೆಸಿದ್ದರು. ಆ ವೇಳೆ ಟೀಸರ್​ ರಿಲೀಸ್​ ಬಗ್ಗೆ ಅವರು ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ.

ಇದನ್ನೂ ಓದಿ: Shah Rukh Khan: ಶಾರುಖ್​ ಖಾನ್​ ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 31 ವರ್ಷ; ಅಂದು ಮಾಡಿದ ತಪ್ಪನ್ನು ಇಂದು ಒಪ್ಪಿಕೊಂಡ ನಟ

ಶಾರುಖ್​ ಖಾನ್​ ಚಿತ್ರರಂಗಕ್ಕೆ ಕಾಲಿಟ್ಟ 31 ವರ್ಷ ಕಳೆದಿದೆ. ಇಂದಿಗೂ ಅವರು ಅದೇ ಚಾರ್ಮ್​ ಉಳಿಸಿಕೊಂಡಿದ್ದಾರೆ. ‘ಪಠಾಣ್​’ ಗೆದ್ದ ಬಳಿಕ ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಈಗ ಅವರ ಮಕ್ಕಳು ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಪುತ್ರ ಆರ್ಯನ್​ ಖಾನ್​ ನಿರ್ದೇಶಕನಾಗಿ ವೃತ್ತಿಜೀವನ ಆರಂಭಿಸುತ್ತಿದ್ದಾರೆ. ಮಗಳು ಸುಹಾನಾ ಖಾನ್​ಗೆ ನಟನೆ ಬಗ್ಗೆ ಆಸಕ್ತಿ ಇದೆ. ಅವರ ಮೊದಲ ಚಿತ್ರ ‘ದಿ ಆರ್ಚೀಸ್​’ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ