AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 2400 ರೂಪಾಯಿಗೆ ಮಾರಾಟ ಆಗುತ್ತಿದೆ ‘ಜವಾನ್’ ಸಿನಿಮಾ ಟಿಕೆಟ್; ಕನಿಷ್ಠ ಬೆಲೆ ಎಷ್ಟು?

ಶಾರುಖ್ ಖಾನ್ ಅವರು ಮಾಸ್ ಅವತಾರ ತಾಳುತ್ತಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಸಖತ್ ಆ್ಯಕ್ಷನ್ ಮೆರೆದಿದ್ದರು. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಅನ್ನೋದಕ್ಕೆ ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್​ಗಳೇ ಸಾಕ್ಷಿ. ಇದರಿಂದ ಸಹಜವಾಗಿಯೇ ಟಿಕೆಟ್ ದರ ಹೆಚ್ಚಿದೆ.

ಬೆಂಗಳೂರಿನಲ್ಲಿ 2400 ರೂಪಾಯಿಗೆ ಮಾರಾಟ ಆಗುತ್ತಿದೆ ‘ಜವಾನ್’ ಸಿನಿಮಾ ಟಿಕೆಟ್; ಕನಿಷ್ಠ ಬೆಲೆ ಎಷ್ಟು?
ಜವಾನ್​ ಸಿನಿಮಾ ಪೋಸ್ಟರ್​
Follow us
ರಾಜೇಶ್ ದುಗ್ಗುಮನೆ
|

Updated on: Sep 01, 2023 | 2:28 PM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಟ್ರೇಲರ್ ಮೂಲಕ ಗಮನ ಸೆಳೆಯುತ್ತಿದೆ. ಈ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ಹಲವು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೆ ಒಂದು ವಾರ ಇರುವಾಗ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಶಾರುಖ್ ಖಾನ್ ನಟನೆಯ ಈ ಚಿತ್ರದ ಟಿಕೆಟ್ ಬೆಲೆ ಗಗನಕ್ಕೇರಿದೆ. ಬೆಂಗಳೂರಿನಲ್ಲಿ 2400 ರೂಪಾಯಿವರೆಗೆ ‘ಜವಾನ್’ ಸಿನಿಮಾದ ಟಿಕೆಟ್​ಗಳು ಮಾರಾಟ ಆಗುತ್ತಿವೆ.

ಶಾರುಖ್ ಖಾನ್ ಅವರು ಮಾಸ್ ಅವತಾರ ತಾಳುತ್ತಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಸಖತ್ ಆ್ಯಕ್ಷನ್ ಮೆರೆದಿದ್ದರು. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಅನ್ನೋದಕ್ಕೆ ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್​ಗಳೇ ಸಾಕ್ಷಿ . ಇದೊಂದು ರೀತಿಯಲ್ಲಿ ದಕ್ಷಿಣ ಭಾರತ ಹಾಗೂ ಬಾಲಿವುಡ್​ ಸಮ್ಮಿಶ್ರಣದ ಸಿನಿಮಾ. ಈ ಚಿತ್ರದಲ್ಲಿ ಶಾರುಖ್ ಖಾನ್ ಹೀರೋ ಆಗಿ ನಟಿಸಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ‘ಜವಾನ್’ ನಿರ್ದೇಶನ ಮಾಡಿದ್ದಾರೆ. ನಯನತಾರಾ ಚಿತ್ರದ ನಾಯಕಿ. ತಮಿಳು ಹೀರೋ ವಿಜಯ್ ಸೇತುಪತಿ ವಿಲನ್ ಪಾತ್ರ ಮಾಡಿದ್ದಾರೆ. ಬಾಲಿವುಡ್ ನಾಯಕಿಯರಾದ ಸಾನ್ಯಾ ಮಲ್ಹೋತ್ರಾ ಹಾಗೂ ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದ ಭಾರತದಾದ್ಯಂತ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

ಬೆಂಗಳೂರಿನ ಡೈರೆಕ್ಟರ್ಸ್ ಕಟ್ ಥಿಯೇಟರ್​ನಲ್ಲಿ ‘ಜವಾನ್’ ಟಿಕೆಟ್ ದರ 2400 ರೂಪಾಯಿ ಇದೆ. ಐಷಾರಾಮಿ ಮಲ್ಟಿಪ್ಲೆಕ್ಸ್ ಆಗಿರುವುದರಿಂದ ಟಿಕೆಟ್ ದರ ಇಷ್ಟೊಂದು ದುಬಾರಿ ಇದೆ. ಇನ್ನು, ಸಾಮಾನ್ಯ ಮಲ್ಟಿಪ್ಲೆಕ್ಸ್​ಗಳಲ್ಲೂ ಟಿಕೆಟ್ ದರ ಜೋರಾಗಿಯೇ ಇದೆ. ಲುಲು ಮಾಲ್​ನಲ್ಲಿರುವ ಸಿನಿಪೊಲಿಸ್​ನಲ್ಲಿ ರಾತ್ರಿ ಶೋಗಳ ಟಿಕೆಟ್ ಬೆಲೆ ಗರಿಷ್ಟ 1600 ರೂಪಾಯಿ ಇದೆ. ಬಿನ್ನಿಪೇಟೆ ಸಿನಿಪೊಲಿಸ್​ನಲ್ಲಿ ಗರಿಷ್ಠ ಬೆಲೆ 750 ರೂಪಾಯಿ ಇದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

ಬಹುತೇಕ ಮಲ್ಟಿಪ್ಲೆಕ್ಸ್​ನಲ್ಲಿ 250 ರೂಪಾಯಿಯಿಂದ ‘ಜವಾನ್’ ಸಿನಿಮಾ ಟಿಕೆಟ್ ಬೆಲೆ ಆರಂಭ ಆಗುತ್ತಿದೆ. ಸಿಂಗಲ್ ಸ್ಕ್ರೀನ್​ಗಳಲ್ಲಿನ ದರದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಟಿಕೆಟ್ ದರ ಇಷ್ಟೊಂದು ದುಬಾರಿ ಆದರೆ ಜನಸಾಮಾನ್ಯರು ಸಿನಿಮಾ ನೋಡೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಮೊದಲು ಸರ್ಕಾರದಿಂದ ಈ ರೀತಿಯ ಕ್ರಮ ಜಾರಿಗೆ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​