ಹೆಚ್ಚಿತು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕ್ರೇಜ್​; 21 ದಿನ ಮೊದಲೇ ಬುಕಿಂಗ್ ಓಪನ್

ದುಬೈ ಸೇರಿದಂತೆ ವಿದೇಶದ ಕೆಲವು ಕಡೆಗಳಲ್ಲಿ ‘ಜವಾನ್’ ಸಿನಿಮಾಗೆ ಬುಕಿಂಗ್ ಓಪನ್ ಆಗಿದೆ. ಹಿಂದಿ ವರ್ಷನ್​ನ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಆಗಸ್ಟ್​ 15ರಂದು ಬುಕಿಂಗ್ ಶುರು ಆಗಿದೆ. ಈ ಚಿತ್ರ ರಿಲೀಸ್ ಆಗುತ್ತಿರುವುದು ಸೆಪ್ಟೆಂಬರ್ 7ರಂದು. ಅಂದರೆ, ಸಿನಿಮಾ ರಿಲೀಸ್​ಗೆ ಇನ್ನೂ 21 ದಿನ ಬಾಕಿ ಇದೆ. ಆಗಲೇ ಬುಕಿಂಗ್ ಓಪನ್ ಆಗಿದ್ದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಹೆಚ್ಚಿತು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕ್ರೇಜ್​; 21 ದಿನ ಮೊದಲೇ ಬುಕಿಂಗ್ ಓಪನ್
ಶಾರುಖ್​ ಖಾನ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Aug 16, 2023 | 4:51 PM

‘ಜವಾನ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸೃಷ್ಟಿ ಆಗಿರೋ ಕ್ರೇಜ್ ಎಷ್ಟು ದೊಡ್ಡದು ಅನ್ನೋದು ಪದೇ ಪದೇ ಸಾಬೀತಾಗುತ್ತಲೇ ಇದೆ. ಈ ಚಿತ್ರದ ಬಗ್ಗೆ ಶಾರುಖ್ ಖಾನ್ (Shah Rukh Khan) ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ತಮಿಳು ನಿರ್ದೇಶಕ ಅಟ್ಲಿ. ಈ ಕಾರಣಕ್ಕೆ ದಕ್ಷಿಣದವರಿಗೂ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ಕೇವಲ ಭಾರತ ಮಾತ್ರವಲ್ಲದೇ ವಿದೇಶದಲ್ಲೂ ‘ಜವಾನ್’ ಸಿನಿಮಾ (Jawan Movie) ವೀಕ್ಷಣೆಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದಕ್ಕೆ ಹೊಸ ಸಾಕ್ಷ್ಯವೊಂದು ಸಿಕ್ಕಿದೆ. ‘ಪಠಾಣ್’ ಸಿನಿಮಾ ಸೂಪರ್ ಹಿಟ್ ಆಯಿತು. ಶಾರುಖ್ ಖಾನ್ ಅವರು ಈ ಚಿತ್ರದ ಮೂಲಕ ದೊಡ್ಡ ಮಟ್ಟದ ಕಂಬ್ಯಾಕ್ ಮಾಡಿದರು. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾಗಳ ಬಗೆಗಿನ ಕ್ರೇಜ್ ಹೆಚ್ಚಿದೆ. ‘ಜವಾನ್’ ಕೂಡ ಹಿಟ್ ಆಗಲಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಚಿತ್ರದ ಹೈಪ್ ದಿನ ಕಳೆದಂತೆ ಹೆಚ್ಚುತ್ತಿದೆ.

ದುಬೈ ಸೇರಿದಂತೆ ವಿದೇಶದ ಕೆಲವು ಕಡೆಗಳಲ್ಲಿ ‘ಜವಾನ್’ ಸಿನಿಮಾಗೆ ಬುಕಿಂಗ್ ಓಪನ್ ಆಗಿದೆ. ಹಿಂದಿ ವರ್ಷನ್​ನ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಆಗಸ್ಟ್​ 15ರಂದು ಬುಕಿಂಗ್ ಶುರು ಆಗಿದೆ. ಈ ಚಿತ್ರ ರಿಲೀಸ್ ಆಗುತ್ತಿರುವುದು ಸೆಪ್ಟೆಂಬರ್ 7ರಂದು. ಅಂದರೆ, ಸಿನಿಮಾ ರಿಲೀಸ್​ಗೆ ಇನ್ನೂ 21 ದಿನ ಬಾಕಿ ಇದೆ. ಆಗಲೇ ಬುಕಿಂಗ್ ಓಪನ್ ಆಗಿದ್ದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಜವಾನ್​’ ತಂಡದವರ ವಿರುದ್ಧವೇ ಕೇಸ್ ಹಾಕಿದ ಶಾರುಖ್ ಖಾನ್; ಏನು ಕಾರಣ?

‘ಜವಾನ್​’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಲು ಹಲವು ಕಾರಣ ಇದೆ. ಶಾರುಖ್ ಖಾನ್ ಅವರು ಈ ಚಿತ್ರದಲ್ಲಿ ಮಾಸ್ ಅವತಾರ ತಾಳಿದ್ದಾರೆ. ವಿವಿಧ ಗೆಟಪ್​ನಲ್ಲಿ ಅವರು ಪ್ರೇಕ್ಷಕರ ಎದುರು ಬರಲಿದ್ದಾರೆ ಎಂಬುದು ಪ್ರಿವ್ಯೂ ವಿಡಿಯೋದಲ್ಲಿ ಗೊತ್ತಾಗಿದೆ. ಮಾಸ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದಿರುವ ಅಟ್ಲಿ ‘ಜವಾನ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ದಕ್ಷಿಣದ ಸ್ಟಾರ್​ಗಳಾದ ವಿಜಯ್ ಸೇತುಪತಿ, ನಯನತಾರಾ ಹಾಗೂ ದೀಪಿಕಾ ಪಡುಕೋಣೆ ಸಿನಿಮಾದಲ್ಲಿ ನಟಿಸಿದ್ದಾರೆ. ಅನೇಕ ಕಲಾವಿದರು ಅತಿಥಿ ಪಾತ್ರದಲ್ಲಿ ನಟಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜೋರಾಯ್ತು ‘ಜವಾನ್​’ ಚಿತ್ರದ ಹವಾ; ಕೆಲವೇ ನಿಮಿಷಗಳಲ್ಲಿ ಮಿಲಿಯನ್​ ದಾಟಿದ ‘ಜಿಂದಾ ಬಂದಾ’ ಹಾಡಿನ ವೀಕ್ಷಣೆ

ಶಾರುಖ್ ಖಾನ್ ಅವರು ‘ಡಂಕಿ’ ಸಿನಿಮಾ ಕೆಲಸದಲ್ಲೂ ಬ್ಯುಸಿ ಇದ್ದಾರೆ. ರಾಜ್​ಕುಮಾರ್ ಹಿರಾನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ತಂಡ ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ಆ ಚಿತ್ರ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ