ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ

Shah Rukh Khan: ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ‘ಜವಾನ್’ ಸಿನಿಮಾ ಜಪಾನಿ ಭಾಷೆಯಲ್ಲಿ, ಜಪಾನ್ ದೇಶದಲ್ಲಿ ಬಿಡುಗಡೆ ಆಗುತ್ತಿದೆ.

ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Sep 13, 2024 | 6:47 PM

ಭಾರತದ ಸಿನಿಮಾಗಳಿಗೆ ಜಪಾನ್ನಲ್ಲಿ ಸಖತ್ ಬೇಡಿಕೆ ಇದೆ ಎಂಬುದು ನಿಮಗೆ ಗೊತ್ತೇ? ಈ ಮೊದಲು ಪ್ರಭಾಸ್ ನಟನೆಯ ‘ಬಾಹುಬಲಿ’ ಸಿನಿಮಾ ಇಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಕನ್ನಡದ ‘ಕೆಜಿಎಫ್’, ರಾಮ್ ಚರಣ್ ಹಾಗೂ ಜೂನಿಯರ್ ಎನ್ಟಿಆರ್ ನಟನೆಯ ‘ಆರ್ಆರ್ಆರ್’ ಕೂಡ ಇಲ್ಲಿ ರಿಲೀಸ್ ಆಗಿತ್ತು. ಈಗ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಸರದಿ. ಚಿತ್ರ ನವೆಂಬರ್ 29ರಂದು ಜಪಾನ್ನಲ್ಲಿ ತೆರೆಗೆ ಬರುತ್ತಿದೆ.

ಅಟ್ಲಿ ಅವರು ‘ಜವಾನ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಗಮನ ಸೆಳೆದಿದೆ. ಈಗ ಈ ಚಿತ್ರವನ್ನು ಜಪಾನ್ಗೆ ಡಬ್ ಮಾಡಿ ರಿಲೀಸ್ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ತಂಡದ ಕಡೆಯಿಂದ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಪ್ಡೇಟ್ ನೀಡಲಾಗಿದೆ.

‘ಜವಾನ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿತ್ತು. ಈ ಸಿನಿಮಾ 2023ರ ಸೆಪ್ಟೆಂಬರ್ನಲ್ಲಿ ರಿಲೀಸ್ ಆಗಿ 1,148 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಸಿನಿಮಾ ಜಪಾನ್ನಲ್ಲಿ ಬಿಡುಗಡೆ ಕಾಣುತ್ತಿರುವುದರಿಂದ ಅಲ್ಲಿಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ:‘ಜವಾನ್’ ಸಿನಿಮಾ ಒಪ್ಪಿಕೊಳ್ಳೋಕೆ ಅಸಲಿ ಕಾರಣ ಕೊಟ್ಟ ನಯನತಾರಾ

‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಮೂಲಕ ಗೌರಿ ಖಾನ್ ಹಾಗೂ ಗೌರವ್ ವರ್ಮಾ ಅವರು ‘ಜವಾನ್’ ಸಿನಿಮಾ ನಿರ್ಮಾಣ ಮಾಡಿದ್ದರು. ಶಾರುಖ್ ಖಾನ್, ವಿಜಯ್ ಸೇತುಪತಿ, ನಯನತಾರಾ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ತಮಿಳಿನ ಅಟ್ಲಿ ಅವರು ಈ ಚಿತ್ರ ನಿರ್ದೇಶನ ಮಾಡಿದ್ದರು. ಸಾಮಾಜಿಕ ಸಮಸ್ಯೆಗಳ ಕುರಿತು ಈ ಸಿನಿಮಾ ಇದೆ.

ಶಾರುಖ್ ಖಾನ್ ಅವರಿಗೆ ಜಪಾನ್ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆಯಂತೆ. ಅಲ್ಲಿನ ಮಂದಿ ಭಾರತದ ಸಿನಿಮಾಗಳನ್ನು ನೋಡಿ ಆ್ಯಕ್ಷನ್ ಚಿತ್ರಗಳನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದಾರೆ. ಶೀಘ್ರವೇ ಅವರು ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. 2025ರ ಅಂತ್ಯಕ್ಕೆ ಅಥವಾ 2026ರಲ್ಲಿ ಈ ಚಿತ್ರ ರಿಲೀಸ್ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 13 September 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ