AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ

ನಟ ಶಾರುಖ್ ಖಾನ್ ಅವರು ‘ಕಿಂಗ್’ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ. ಈ ಸಿನಿಮಾಗಾಗಿ ಬರೋಬ್ಬರಿ 450 ಕೋಟಿ ರೂಪಾಯಿ ಬಂಡವಾಳ ಹಾಕಲಾಗುತ್ತಿದೆ. ಶಾರುಖ್ ಖಾನ್ ಅವರೇ ಈ ಚಿತ್ರಕ್ಕೆ ನಿರ್ಮಾಪಕರು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗದೇ ಅವರು ಅದ್ದೂರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ
Shah Rukh Khan
ಮದನ್​ ಕುಮಾರ್​
|

Updated on: Jul 08, 2026 | 11:06 PM

Share

ಮುಖ್ಯಾಂಶಗಳು

  • ಬಜೆಟ್ ಕಾರಣದಿಂದಲೇ ಭಾರಿ ನಿರೀಕ್ಷೆ ಮೂಡಿಸಿದೆ ‘ಕಿಂಗ್’ ಸಿನಿಮಾ.
  • ಸ್ವತಃ ಶಾರುಖ್ ಖಾನ್ ನಿರ್ಮಾಣದ ಈ ಚಿತ್ರಕ್ಕೆ 450 ಕೋಟಿ ರೂ. ಬಜೆಟ್.
  • ಸಿನಿಮಾ ಪೂರ್ಣಗೊಳ್ಳುವುದರೊಳಗೆ ಬಜೆಟ್ ಇನ್ನಷ್ಟು ಹೆಚ್ಚುವ ಸಾಧ್ಯತೆ.

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಸಿನಿಮಾ ಎಂದರೆ ಅಲ್ಲಿ ಭರ್ಜರಿ ಆ್ಯಕ್ಷನ್, ಅದ್ಧೂರಿತನ ಇದ್ದೇ ಇರುತ್ತದೆ. ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ಕಿಂಗ್’ (King) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೆ ತೆರೆಮೇಲೆ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದ ಕುರಿತು ಈಗ ಮತ್ತೊಂದು ಬಿಗ್ ಅಪ್ಡೇಟ್ ಸಿಕ್ಕಿದ್ದು, ಇದು ಶಾರುಖ್ ಖಾನ್ ಅವರ ಸಿನಿ ಕೆರಿಯರ್‌ನಲ್ಲೇ ಅತ್ಯಂತ ಹೆಚ್ವು ಬಜೆಟ್‌ನ ಸಿನಿಮಾವಾಗಲಿದೆ ಎಂದು ತಿಳಿದುಬಂದಿದೆ.

ಬಿಡುಗಡೆಗೆ ಇನ್ನು 6 ತಿಂಗಳು ಬಾಕಿ ಇರುವಾಗಲೇ ‘ಕಿಂಗ್’ ಚಿತ್ರದ ಬಜೆಟ್ ವಿವರಗಳು ಹೊರಬಿದ್ದಿದೆ. ಇದರಿಂದಾಗಿ ಶಾರುಖ್ ಖಾನ್ ಅವರ ಅಭಿಮಾನಿಗಳಲ್ಲಿ ಈ ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚುವಂತಾಗಿದೆ. ಸ್ವತಃ ಶಾರಖ್ ಖಾನ್ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

‘ಜವಾನ್’ ದಾಖಲೆ ಮುರಿದ ‘ಕಿಂಗ್’

ವರದಿಗಳ ಪ್ರಕಾರ, ‘ಕಿಂಗ್’ ಸಿನಿಮಾದ ಒಟ್ಟು ಬಜೆಟ್ ಬರೋಬ್ಬರಿ 450 ಕೋಟಿ ರೂಪಾಯಿ ದಾಟಿದೆ. ಈ ಮುನ್ನ ಶಾರುಖ್ ಖಾನ್ ಅವರ ‘ಜವಾನ್’ ಸಿನಿಮಾ 400 ಕೋಟಿ ರೂ. ಹಾಗೂ ‘ಪಠಾಣ್’ ಸಿನಿಮಾ 350 ಕೋಟಿ ರೂ. ಬಜೆಟ್‌ನಲ್ಲಿ ಮೂಡಿಬಂದಿದ್ದವು. ಆದರೆ ಈಗ ‘ಕಿಂಗ್’ ಸಿನಿಮಾ ಈ ಎಲ್ಲಾ ದಾಖಲೆಗಳನ್ನು ಮೀರಿಸಿ ಮುನ್ನುಗ್ಗುತ್ತಿದೆ. ವಿಶೇಷವೆಂದರೆ, ಈ 450 ಕೋಟಿ ರೂ. ಬಜೆಟ್‌ನಲ್ಲಿ ಚಿತ್ರದ ಪ್ರಚಾರದ ವೆಚ್ಚ ಹಾಗೂ ಸ್ವತಃ ಶಾರುಖ್ ಖಾನ್ ಅವರ ಸಂಭಾವನೆ ಸೇರಿಲ್ಲ!

150ಕ್ಕೂ ಹೆಚ್ಚು ದಿನಗಳ ಶೂಟಿಂಗ್:

ಮೇ 2025ರಲ್ಲಿ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ, ಆಗಸ್ಟ್ 2026ರ ವೇಳೆಗೆ ಶೂಟಿಂಗ್ ಮುಗಿಸುವ ಪ್ಲಾನ್ ಮಾಡಿಕೊಂಡಿದೆ. ಕಳೆದ 1 ವರ್ಷ 3 ತಿಂಗಳುಗಳಿಂದ ಜಗತ್ತಿನಾದ್ಯಂತ ವಿವಿಧ ದೇಶಗಳಲ್ಲಿ 150ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಪ್ರಪಂಚದ ಅತ್ಯಂತ ಪ್ರಸಿದ್ಧ ಸ್ಟಂಟ್ ತಂಡಗಳು ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ವಿನ್ಯಾಸಗೊಳಿಸಿವೆ. ಅಲ್ಲದೆ, ಚಿತ್ರದ ಹೈ-ಲೆವೆಲ್ ಗ್ರಾಫಿಕ್ಸ್ ಕೆಲಸಗಳನ್ನು ಶಾರುಖ್ ಖಾನ್ ಅವರ ಸ್ವಂತ ಸಂಸ್ಥೆಯಾದ ‘ರೆಡ್ ಚಿಲ್ಲಿಸ್ ಎಂಟರ್‌ಟೈನ್‌ಮೆಂಟ್’ ನಿರ್ವಹಿಸುತ್ತಿದೆ.

ಇದನ್ನೂ ಓದಿ: ‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು?

ನೀರಿನಂತೆ ಖರ್ಚಾಗುತ್ತಿದೆ ಹಣ:

ಚಿತ್ರರಂಗದ ಮೂಲಗಳ ಪ್ರಕಾರ, ಮೊದಲು ‘ಕಿಂಗ್’ ಸಿನಿಮಾವನ್ನು ಕೇವಲ ಆ್ಯಕ್ಷನ್ ಥ್ರಿಲ್ಲರ್ ಆಗಿ ಮಾಡಲು ಯೋಜಿಸಲಾಗಿತ್ತು. ಆದರೆ ಶಾರುಖ್ ಖಾನ್ ಮತ್ತು ಸಿದ್ಧಾರ್ಥ್ ಆನಂದ್ ಅವರ ದೊಡ್ಡ ಕನಸಿನಿಂದಾಗಿ, ಇದನ್ನು ಭಾರತೀಯ ಚಿತ್ರರಂಗದಲ್ಲೇ ಹಿಂದೆಂದೂ ಕಾಣದ ಮಾಸ್ ಆ್ಯಕ್ಷನ್ ಸಿನಿಮಾವಾಗಿ ರೂಪಿಸಲಾಗುತ್ತಿದೆ. ಪ್ರೇಕ್ಷಕರಿಗೆ ಕಾಂಪ್ರಮೈಸ್ ಇಲ್ಲದ ವಿಶ್ವದರ್ಜೆಯ ಸಿನಿಮಾ ಅನುಭವ ನೀಡಲು ಅವರು ನೀರಿನಂತೆ ಹಣ ಖರ್ಚು ಮಾಡುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ