AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ಕಿಂಗ್’ ಸಿನಿಮಾದ ಟೀಸರ್

ಶಾರುಖ್ ಖಾನ್ ನಟನೆಯ ‘ಕಿಂಗ್’ ಸಿನಿಮಾದ ಕೆಲಸಗಳು ಭರದಿಂದ ಸಾಗಿವೆ. ಈ ಚಿತ್ರದ ಪ್ರಚಾರ ಕಾರ್ಯವನ್ನು ಅದ್ದೂರಿಯಾಗಿ ಮಾಡಲು ಸಿದ್ಧತೆ ನಡೆದಿದೆ. ಶಾರುಖ್ ಖಾನ್ ಅವರ ಈ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭರ್ಜರಿಯಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ಶಾರುಖ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ಕಿಂಗ್’ ಸಿನಿಮಾದ ಟೀಸರ್
Shah Rukh Khan
ಮದನ್​ ಕುಮಾರ್​
|

Updated on: Oct 13, 2026 | 9:07 PM

Share

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಅಭಿನಯದ, 2026ರ ಅತ್ಯಂತ ನಿರೀಕ್ಷಿತ ‘ಕಿಂಗ್’ ಸಿನಿಮಾ ಕುರಿತು ಪ್ರಮುಖ ಮತ್ತು ದೊಡ್ಡ ಅಪ್‌ಡೇಟ್ ಒಂದನ್ನು ಚಿತ್ರತಂಡ ಹೊರಹಾಕಿದೆ. ಮೂರು ಸುದೀರ್ಘ ವರ್ಷಗಳ ವಿರಾಮದ ನಂತರ ಶಾರುಖ್ ಖಾನ್ ಅವರನ್ನು ಮತ್ತೆ ಬೆಳ್ಳಿಪರದೆಯ ಮೇಲೆ ನೋಡಲು ಕಾಯುತ್ತಿರುವ ಕೋಟ್ಯಂತರ ಅಭಿಮಾನಿಗಳಿಗೆ ಶೀಘ್ರದಲ್ಲೇ ಬಹುದೊಡ್ಡ ಸರ್ಪ್ರೈಸ್ ಸಿಗಲಿದೆ. ಸದ್ಯದಲ್ಲೇ ಈ ಸಿನಿಮಾದಿಂದ ಮಾಸ್ ಟೀಸರ್ ಬಿಡುಗಡೆ ಆಗಲಿದೆ.

ಸಿದ್ದಾರ್ಥ್ ಆನಂದ್ ನಿರ್ದೇಶನದ ಈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾದ ಮಾಸ್ ಮತ್ತು ಆ್ಯಕ್ಷನ್-ಪ್ಯಾಕ್ಡ್ ಟೀಸರ್, ಶಾರುಖ್ ಖಾನ್ ಅವರ ಜನ್ಮದಿನವಾದ ನವೆಂಬರ್ 2ರಂದು ಅನಾವರಣಗೊಳ್ಳಲು ಸಂಪೂರ್ಣವಾಗಿ ಸಜ್ಜಾಗಿದೆ. ಈ ಕುರಿತು ನಂಬಲಾರ್ಹ ಮೂಲಗಳು ಮಾಹಿತಿ ಹಂಚಿಕೊಂಡಿವೆ ಎಂದು ‘ಬಾಲಿವುಡ್ ಹಂಗಾಮಾ’ ವರದಿ ಪ್ರಕಟ ಮಾಡಿದೆ.

‘ಚಿತ್ರತಂಡದಿಂದ ಇದು ಪ್ರಪಂಚದಾದ್ಯಂತ ಇರುವ ಎಲ್ಲಾ ಶಾರುಖ್ ಅಭಿಮಾನಿಗಳಿಗೆ ಸಿಗುತ್ತಿರುವ ಹುಟ್ಟುಹಬ್ಬದ ಉಡುಗೊರೆಯಾಗಿದೆ. ಸಿದ್ದಾರ್ಥ್ ಆನಂದ್ ಅವರು ಅಭಿಮಾನಿಗಳಿಗೆ ಶಾರುಖ್ ಅವರ ಸಂಪೂರ್ಣ ಹೊಸ ಅವತಾರವನ್ನು ಉಡುಗೊರೆಯಾಗಿ ನೀಡಲಿದ್ದಾರೆ. ಈಗ ಸಿದ್ಧವಾಗಿರುವ ಟೀಸರ್ ಕಟ್ ಅತ್ಯಂತ ರೋಮಾಂಚನಕಾರಿಯಾಗಿದ್ದು, ಶಾರುಖ್ ಖಾನ್ ಇದುವರೆಗೆ ಕಾಣಿಸಿಕೊಂಡಿರದ ರೀತಿಯಲ್ಲಿ ದರ್ಶನ ನೀಡಲಿದ್ದಾರೆ’ ಎಂದು ವರದಿ ಆಗಿದೆ.

‘ಕಿಂಗ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾಗಳಲ್ಲಿ ಒಂದಾಗಿದ್ದು, ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ‘ಪಠಾನ್’ ಮತ್ತು ‘ಜವಾನ್’ ಚಿತ್ರಗಳ ಅದ್ದೂರಿತನವನ್ನು ಕಣ್ಣುಂಬಿಕೊಂಡಿದ್ದ ಪ್ರೇಕ್ಷಕರಿಗೆ, ‘ಕಿಂಗ್’ ಮೂಲಕ ನಿರ್ದೇಶಕ ಸಿದ್ದಾರ್ಥ್ ಆನಂದ್ ಮತ್ತೊಂದು ಹಂತದ ಆ್ಯಕ್ಷನ್ ಅನುಭವ ನೀಡಲಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ ಎರಡೂವರೆ ಸಾವಿರ ಕೋಟಿ ರೂಪಾಯಿ ಕಳೆದುಕೊಂಡ ಶಾರುಖ್ ಖಾನ್

ಈ ಟೀಸರ್ ಬಿಡುಗಡೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ಸಿಗಲಿದೆ. ಕ್ರಿಸ್‌ಮಸ್ ಹಬ್ಬದ ರಜಾದಿನಗಳಲ್ಲಿ ಪ್ರೇಕ್ಷಕರಿಗೆ ರಂಜನೆ ನೀಡಲು ಚಿತ್ರತಂಡ ಸಜ್ಜಾಗಿದೆ. ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಮಾರ್ಫ್ಲಿಕ್ಸ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ‘ಕಿಂಗ್’ ಸಿನಿಮಾ ಡಿಸೆಂಬರ್ 24ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ