Shah Rukh Khan: ‘ಪಠಾಣ್’ ಅಡ್ವಾನ್ಸ್ ಟಿಕೆಟ್ ಬುಕಿಂಗ್ಗೆ ದಿನಾಂಕ ನಿಗದಿ; ಅಂದೇ ಶಾರುಖ್ ಖಾನ್ ಭವಿಷ್ಯ ನಿರ್ಧಾರ
Pathaan Advance Ticket Booking: ಮೊದಲ ದಿನವೇ ‘ಪಠಾಣ್’ ಚಿತ್ರವನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿರುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅವರೆಲ್ಲರೂ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಬಹುನಿರೀಕ್ಷಿತ ‘ಪಠಾಣ್’ ಸಿನಿಮಾದ (Pathaan Movie) ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಹತ್ತು ಹಲವು ಕಾರಣಗಳಿಂದಾಗಿ ಈ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ. ಜನವರಿ 25ರಂದು ಬಿಡುಗಡೆ ಆಗಲಿರುವ ‘ಪಠಾಣ್’ ಚಿತ್ರ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎಂಬ ಕೌತುಕ ಮೂಡಿದೆ. ಶಾರುಖ್ ಖಾನ್ (Shah Rukh Khan) ಅಭಿಮಾನಿಗಳು ಈ ಚಿತ್ರವನ್ನು ಫಸ್ಟ್ ಡೇ ಫಸ್ಟ್ ಶೋ ನೋಡಬೇಕು ಎಂದು ಕಾದು ಕುಳಿತಿದ್ದಾರೆ. ವಿಶ್ವಾದ್ಯಂತ ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ಶೀಘ್ರದಲ್ಲೇ ಅಡ್ವಾನ್ಸ್ ಟಿಕೆಟ್ ಬುಕಿಂಗ್ (Pathaan Advance Ticket Booking) ಓಪನ್ ಆಗಲಿದೆ. ಭಾರತದಲ್ಲಿ ಜನವರಿ 20ರಿಂದ ಟಿಕೆಟ್ ಬುಕ್ ಮಾಡಬಹುದು. ಅಂದು ಸಿನಿಪ್ರಿಯರಿಂದ ಯಾವ ರೀತಿ ರೆಸ್ಪಾನ್ಸ್ ಸಿಗಲಿದೆ ಎಂಬುದರ ಆಧಾರದ ಮೇಲೆ ಶಾರುಖ್ ಖಾನ್ ಅವರ ಭವಿಷ್ಯ ನಿರ್ಧಾರ ಆಗಲಿದೆ.
ಇದು ಶಾರುಖ್ ಖಾನ್ ಅವರ ಕಮ್ಬ್ಯಾಕ್ ಸಿನಿಮಾ. ಬರೋಬ್ಬರಿ ನಾಲ್ಕು ವರ್ಷಗಳ ನಂತರ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹಾಗಾಗಿ ಅವರ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇದೆ. ಮೊದಲ ದಿನವೇ ‘ಪಠಾಣ್’ ಚಿತ್ರವನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿರುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅವರೆಲ್ಲರೂ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್ಟೈಟಲ್ ಅಳವಡಿಸಲು ಕೋರ್ಟ್ ಸೂಚನೆ
ಸೆನ್ಸಾರ್ ಮಂಡಳಿಯಿಂದ ‘ಪಠಾಣ್’ ಸಿನಿಮಾಗೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಈ ಚಿತ್ರದ ಒಟ್ಟು ಅವಧಿ 2 ಗಂಟೆ 26 ನಿಮಿಷ ಇದೆ. ಭರ್ಜರಿ ಸಾಹಸ ದೃಶ್ಯಗಳನ್ನು ನೋಡಲು ಪ್ರೇಕ್ಷಕರು ಕಾದಿದ್ದಾರೆ. ತುಂಬ ಅದ್ದೂರಿಯಾಗಿ ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಅಷ್ಟೇ ಗ್ರ್ಯಾಂಡ್ ಆಗಿ ವಿಶ್ವಾದ್ಯಂತ ರಿಲೀಸ್ ಮಾಡಲಾಗುತ್ತಿದೆ.
Shah Rukh Khan: ಭಾರತದಲ್ಲಿ ‘ಪಠಾಣ್’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್ ಖಾನ್
ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್ ಹೆಚ್ಚಿದೆ. ಶಾರುಖ್ ಖಾನ್ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ವಿಲನ್ ಪಾತ್ರದಲ್ಲಿ ಜಾನ್ ಅಬ್ರಾಹಂ ನಟಿಸಿದ್ದಾರೆ. ವಿವಿಧ ದೇಶಗಳಲ್ಲಿ ‘ಪಠಾಣ್’ ಚಿತ್ರೀಕರಣ ಮಾಡಲಾಗಿದೆ. ಶಾರುಖ್ ಖಾನ್ ಅವರ ಗೆಟಪ್ ಗಮನ ಸೆಳೆಯುತ್ತಿದೆ.
‘ಪಠಾಣ್’ ಚಿತ್ರಕ್ಕೆ ಒಂದು ವರ್ಗದ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಸಿನಿಮಾದ ‘ಬೇಷರಂ ರಂಗ್..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಿಕಿನಿಗೆ ಕೆಲವರು ಕಿರಿಕ್ ಮಾಡಿದ್ದಾರೆ. ಆದರೆ ಟ್ರೇಲರ್ನಲ್ಲಿ ದೇಶಭಕ್ತಿ ಕಥಾಹಂದರ ಇರುವುದು ಕಂಡು ಒಂದಷ್ಟು ಮಂದಿ ಸೈಲೆಂಟ್ ಆಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:00 am, Wed, 18 January 23