Shah Rukh Khan: ಎಷ್ಟೇ ವಿರೋಧ ಬಂದ್ರೂ ಜಗ್ಗದ ಶಾರುಖ್​ ಖಾನ್​; ‘ಪಠಾಣ್​’ ಟೈಟಲ್​ ಬದಲಾಗಬೇಕು ಎಂದವರಿಗೆ ಇಲ್ಲಿದೆ ಉತ್ತರ

Pathaan Movie | Shah Rukh Khan: ‘ಪಠಾಣ್​’ ಚಿತ್ರದ ಶೀರ್ಷಿಕೆ ಬದಲಾವಣೆ ಆಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ಈ ಮಾಹಿತಿಯನ್ನು ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಖಚಿತಪಡಿಸಿದ್ದಾರೆ.

Shah Rukh Khan: ಎಷ್ಟೇ ವಿರೋಧ ಬಂದ್ರೂ ಜಗ್ಗದ ಶಾರುಖ್​ ಖಾನ್​; ‘ಪಠಾಣ್​’ ಟೈಟಲ್​ ಬದಲಾಗಬೇಕು ಎಂದವರಿಗೆ ಇಲ್ಲಿದೆ ಉತ್ತರ
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Jan 04, 2023 | 4:47 PM

ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್​’ ಸಿನಿಮಾ (Pathaan Movie) ಸಾಕಷ್ಟು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದೆ. ಈ ಸಿನಿಮಾದ ‘ಬೇಷರಂ ರಂಗ್​..’ ಹಾಡಿಗೆ ಒಂದು ವರ್ಗದ ಜನರು ವಿರೋಧ ವ್ಯಕ್ತಪಡಿಸಿದ್ದರೆ, ಟೈಟಲ್​ ಬದಲಾಗಬೇಕು ಎಂದು ಮತ್ತೊಂದು ವರ್ಗದ ಮಂದಿ ಒತ್ತಡ ಹೇರಿದ್ದರು. ಆದರೆ ಶೀರ್ಷಿಕೆ ಬದಲಾಯಿಸಲು ಚಿತ್ರತಂಡ ಸಿದ್ಧವಿಲ್ಲ. ಚಿತ್ರದ ಟೈಟಲ್​ ‘ಪಠಾಣ್​’ ಎಂದೇ ಇರಲಿದೆ ಎಂಬುದು ಈಗ ಖಚಿತವಾಗಿದೆ. ಆದಷ್ಟು ಬೇಗ ಟ್ರೇಲರ್ (Pathaan Movie Trailer)​ ಬಿಡುಗಡೆ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಶಾರುಖ್​ ಖಾನ್​ (Shah Rukh Khan) ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಅವರು ಈ ವಿಚಾರದ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಆ ಮೂಲಕ ಸುದ್ದಿ ಖಚಿತಪಡಿಸಿದ್ದಾರೆ. ಈ ವಿಷಯ ಕೇಳಿ ಶಾರುಖ್​ ಖಾನ್​ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಟೈಟಲ್​ ಚೇಂಜ್​ ಆಗಬೇಕು ಅಂತ ಬೊಬ್ಬೆ ಹೊಡೆದಿದ್ದವರು ಈಗ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಇದನ್ನೂ ಓದಿ: Jhoome Jo Pathaan: ‘ಪಠಾಣ್​’ ಚಿತ್ರದ 2ನೇ ಹಾಡಿನಲ್ಲಿ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ ಮಿಂಚಿಂಗ್​

ಜನವರಿ 25ರಂದು ‘ಪಠಾಣ್​’ ಸಿನಿಮಾ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಮುಂತಾದವರು ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಹಿಂದೆ ‘ವಾರ್​’ ಚಿತ್ರದ ಮೂಲಕ ಆ್ಯಕ್ಷನ್​ ಪ್ರಿಯರಿಗೆ ಅವರು ಭರ್ಜರಿ ಮನರಂಜನೆ ನೀಡಿದ್ದರು. ಈ ಬಾರಿ ಕೂಡ ಸಾಹಸಮಯ ಸಿನಿಮಾವನ್ನು ಜನರೆದುರು ಇಡುತ್ತಿದ್ದಾರೆ.

ಇದನ್ನೂ ಓದಿ: Shah Rukh Khan: ಮೋದಿ ತಾಯಿ ನಿಧನಕ್ಕೆ ಶಾರುಖ್​ ಖಾನ್​ ಸಂತಾಪ; ‘ಪಠಾಣ್’ ಹೀರೋ ಹೇಳಿದ್ದಿಷ್ಟು..

ದಕ್ಷಿಣ ಭಾರತದಲ್ಲೂ ಅಬ್ಬರಿಸಲು ಶಾರುಖ್​ ಖಾನ್​ ಸಿದ್ಧರಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತಮಿಳು ಮತ್ತು ತೆಲುಗಿನಲ್ಲೂ ‘ಪಠಾಣ್​’ ಸಿನಿಮಾ ಬಿಡುಗಡೆ ಆಗಲಿದೆ. ಇನ್ನು, ಟ್ರೇಲರ್​ ಬಿಡುಗಡೆ ಬಗ್ಗೆಯೂ ತರಣ್​ ಆದರ್ಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ 10ರಂದು ಟ್ರೇಲರ್​ ರಿಲೀಸ್​ ಆಗಲಿದೆ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಕೆಲವೇ ದಿನಗಳ ಹಿಂದೆ ಬಿಡುಗಡೆಯಾದ ಟೀಸರ್​ ನೋಡಿ ಶಾರುಖ್​ ಖಾನ್​ ಅಭಿಮಾನಿಗಳು ಥ್ರಿಲ್​ ಆಗಿದ್ದರು. ಆ ಬಳಿಕ ‘ಬೇಷರಂ ರಂಗ್​..’ ಹಾಡು ಕೂಡ ಧೂಳೆಬ್ಬಿಸಿತು. ಈಗ ಟ್ರೇಲರ್​ ಮೂಲಕ ‘ಪಠಾಣ್​’ ಸಿನಿಮಾದ ಹೈಪ್​ ಹೆಚ್ಚಿಸಲು ಚಿತ್ರತಂಡದವರು ಸಜ್ಜಾಗಿದ್ದಾರೆ. ಇದು ಶಾರುಖ್​ ಖಾನ್​ ಅವರ ಕಮ್​ಬ್ಯಾಕ್​ ಸಿನಿಮಾ. ಹಾಗಾಗಿ ಈ ಸಿನಿಮಾದ ಬಗ್ಗೆ ಅವರ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:46 pm, Wed, 4 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ