
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಸಿನಿಮಾ (Pathaan Movie) ಸಾಕಷ್ಟು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದೆ. ಈ ಸಿನಿಮಾದ ‘ಬೇಷರಂ ರಂಗ್..’ ಹಾಡಿಗೆ ಒಂದು ವರ್ಗದ ಜನರು ವಿರೋಧ ವ್ಯಕ್ತಪಡಿಸಿದ್ದರೆ, ಟೈಟಲ್ ಬದಲಾಗಬೇಕು ಎಂದು ಮತ್ತೊಂದು ವರ್ಗದ ಮಂದಿ ಒತ್ತಡ ಹೇರಿದ್ದರು. ಆದರೆ ಶೀರ್ಷಿಕೆ ಬದಲಾಯಿಸಲು ಚಿತ್ರತಂಡ ಸಿದ್ಧವಿಲ್ಲ. ಚಿತ್ರದ ಟೈಟಲ್ ‘ಪಠಾಣ್’ ಎಂದೇ ಇರಲಿದೆ ಎಂಬುದು ಈಗ ಖಚಿತವಾಗಿದೆ. ಆದಷ್ಟು ಬೇಗ ಟ್ರೇಲರ್ (Pathaan Movie Trailer) ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಶಾರುಖ್ ಖಾನ್ (Shah Rukh Khan) ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.
ಬಾಲಿವುಡ್ ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ಈ ವಿಚಾರದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಸುದ್ದಿ ಖಚಿತಪಡಿಸಿದ್ದಾರೆ. ಈ ವಿಷಯ ಕೇಳಿ ಶಾರುಖ್ ಖಾನ್ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಟೈಟಲ್ ಚೇಂಜ್ ಆಗಬೇಕು ಅಂತ ಬೊಬ್ಬೆ ಹೊಡೆದಿದ್ದವರು ಈಗ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.
ಇದನ್ನೂ ಓದಿ: Jhoome Jo Pathaan: ‘ಪಠಾಣ್’ ಚಿತ್ರದ 2ನೇ ಹಾಡಿನಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮಿಂಚಿಂಗ್
ಜನವರಿ 25ರಂದು ‘ಪಠಾಣ್’ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಮುಂತಾದವರು ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಹಿಂದೆ ‘ವಾರ್’ ಚಿತ್ರದ ಮೂಲಕ ಆ್ಯಕ್ಷನ್ ಪ್ರಿಯರಿಗೆ ಅವರು ಭರ್ಜರಿ ಮನರಂಜನೆ ನೀಡಿದ್ದರು. ಈ ಬಾರಿ ಕೂಡ ಸಾಹಸಮಯ ಸಿನಿಮಾವನ್ನು ಜನರೆದುರು ಇಡುತ್ತಿದ್ದಾರೆ.
ಇದನ್ನೂ ಓದಿ: Shah Rukh Khan: ಮೋದಿ ತಾಯಿ ನಿಧನಕ್ಕೆ ಶಾರುಖ್ ಖಾನ್ ಸಂತಾಪ; ‘ಪಠಾಣ್’ ಹೀರೋ ಹೇಳಿದ್ದಿಷ್ಟು..
ದಕ್ಷಿಣ ಭಾರತದಲ್ಲೂ ಅಬ್ಬರಿಸಲು ಶಾರುಖ್ ಖಾನ್ ಸಿದ್ಧರಾಗಿದ್ದಾರೆ. ಹಿಂದಿ ಮಾತ್ರವಲ್ಲದೇ ತಮಿಳು ಮತ್ತು ತೆಲುಗಿನಲ್ಲೂ ‘ಪಠಾಣ್’ ಸಿನಿಮಾ ಬಿಡುಗಡೆ ಆಗಲಿದೆ. ಇನ್ನು, ಟ್ರೇಲರ್ ಬಿಡುಗಡೆ ಬಗ್ಗೆಯೂ ತರಣ್ ಆದರ್ಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ 10ರಂದು ಟ್ರೇಲರ್ ರಿಲೀಸ್ ಆಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೆಲವೇ ದಿನಗಳ ಹಿಂದೆ ಬಿಡುಗಡೆಯಾದ ಟೀಸರ್ ನೋಡಿ ಶಾರುಖ್ ಖಾನ್ ಅಭಿಮಾನಿಗಳು ಥ್ರಿಲ್ ಆಗಿದ್ದರು. ಆ ಬಳಿಕ ‘ಬೇಷರಂ ರಂಗ್..’ ಹಾಡು ಕೂಡ ಧೂಳೆಬ್ಬಿಸಿತು. ಈಗ ಟ್ರೇಲರ್ ಮೂಲಕ ‘ಪಠಾಣ್’ ಸಿನಿಮಾದ ಹೈಪ್ ಹೆಚ್ಚಿಸಲು ಚಿತ್ರತಂಡದವರು ಸಜ್ಜಾಗಿದ್ದಾರೆ. ಇದು ಶಾರುಖ್ ಖಾನ್ ಅವರ ಕಮ್ಬ್ಯಾಕ್ ಸಿನಿಮಾ. ಹಾಗಾಗಿ ಈ ಸಿನಿಮಾದ ಬಗ್ಗೆ ಅವರ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:46 pm, Wed, 4 January 23