ರಿಲೀಸ್​​ಗೂ ಮೊದಲೇ ‘ಕೆಜಿಎಫ್ 2’ ದಾಖಲೆ ಮುರಿಯಲು ರೆಡಿ ಆದ ‘ಪಠಾಣ್’ ಸಿನಿಮಾ

|

Updated on: Jan 24, 2023 | 10:39 AM

‘ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಶಾರುಖ್ ಖಾನ್ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ಅಡ್ವಾನ್ಸ್ ಬುಕಿಂಗ್ ಸಾಕ್ಷಿ.

ರಿಲೀಸ್​​ಗೂ ಮೊದಲೇ ‘ಕೆಜಿಎಫ್ 2’ ದಾಖಲೆ ಮುರಿಯಲು ರೆಡಿ ಆದ ‘ಪಠಾಣ್’ ಸಿನಿಮಾ
ಯಶ್​-ಶಾರುಖ್ ಖಾನ್
Follow us on

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಬುಧವಾರ (ಜನವರಿ 25) ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳುತ್ತಿರುವುದರಿಂದ ಸಹಜವಾಗಿಯೇ ಅವರ ಅಭಿಮಾನಿಗಳ ವಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಈಗ ‘ಪಠಾಣ್’ ಚಿತ್ರ (Pathan Movie) ಹಲವು ದಾಖಲೆ ಬರೆಯಲು ರೆಡಿ ಆಗಿದೆ. ಅದೇ ರೀತಿ ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಕೆಜಿಎಫ್ 2’ ಸಿನಿಮಾ ದಾಖಲೆಯನ್ನು ‘ಪಠಾಣ್​’ ಮುರಿಯಲಿದೆ ಎನ್ನಲಾಗುತ್ತಿದೆ.

‘ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಶಾರುಖ್ ಖಾನ್ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ಅಡ್ವಾನ್ಸ್ ಬುಕಿಂಗ್ ಸಾಕ್ಷಿ. ಇಲ್ಲಿಯವರೆಗೆ ಬರೋಬ್ಬರಿ 4.10 ಲಕ್ಷ ಟಿಕೆಟ್​​ಗಳು ಮಲ್ಟಿಪ್ಲೆಕ್ಸ್​​ನಲ್ಲಿ ಮಾರಾಟ ಆಗಿವೆ. ಇಂದು (ಜನವರಿ 24) ರಾತ್ರಿ ವೇಳೆಗೆ ಈ ಸಂಖ್ಯೆ 5.25 ಲಕ್ಷ ದಾಟುವ ಸೂಚನೆ ಇದೆ.

‘ಕೆಜಿಎಫ್ 2’ ಸಿನಿಮಾದ ಹಿಂದಿ ವರ್ಷನ್​​ನ ಅಡ್ವಾನ್ಸ್ ಬುಕಿಂಗ್​ನಲ್ಲಿ 5.15 ಲಕ್ಷ ಟಿಕೆಟ್​​ಗಳು ಮಾರಾಟ ಆಗಿದ್ದವು. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕ ಕಾರಣ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿತು. ಈಗ ಅಡ್ವಾನ್ಸ್ ಬುಕಿಂಗ್​​ನಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಮುರಿಯಲು ಶಾರುಖ್ ಖಾನ್ ಸಿನಿಮಾ ರೆಡಿ ಆಗಿದೆ. ‘ಬಾಹುಬಲಿ 2’ ಚಿತ್ರ ಈ ಸಾಲಿನಲ್ಲಿ ಮೊದಲ ಸ್ಥಾನದಲ್ಲಿದೆ. ಈ ಚಿತ್ರದ ಹಿಂದಿ ವರ್ಷನ್​​ನಲ್ಲಿ 6.50 ಲಕ್ಷ ಟಿಕೆಟ್​ಗಳು ಮಾರಾಟ ಆಗಿದ್ದವು.

ಇದನ್ನೂ ಓದಿ
Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ಇದನ್ನೂ ಓದಿ: Pathaan Movie: ಮುಂಜಾನೆ 6 ಗಂಟೆಗೆ ಶುರುವಾಗಲಿದೆ ‘ಪಠಾಣ್​’ ಶೋ; ಅಬ್ಬರಿಸಲು ರೆಡಿಯಾದ ಶಾರುಖ್​ ಖಾನ್​

‘ಪಠಾಣ್​’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟಾಗಲಿದೆ ಎನ್ನುವ ಕುತೂಹಲ ಮೂಡಿದೆ. ಬುಧವಾರ (ಜನವರಿ 25) ಓಪನಿಂಗ್ ಡೇ ಎಂದು ಅನೇಕರು ಚಿತ್ರಮಂದಿರಕ್ಕೆ ತೆರಳುತ್ತಾರೆ. ಇನ್ನು, ಗುರುವಾರ (ಜನವರಿ 26) ಗಣರಾಜ್ಯೋತ್ಸವದ ಪ್ರಯುಕ್ತ ರಜೆ ಇದೆ. ನಂತರ ವೀಕೆಂಡ್ ಇದೆ. ಹೀಗಾಗಿ, ಮೊದಲ ಐದು ದಿನಗಳಲ್ಲಿ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:52 am, Tue, 24 January 23